ಬೆಂಗಳೂರು ಗ್ರಾಮಾಂತರ

ಅರವಿಂದ ವಿದ್ಯಾ ಸಂಸ್ಥೆಯಲ್ಲಿ ಪರಿಸರ ದಿನಾಚರಣೆ

Published On :

ದೊಡ್ಡಬಳ್ಳಾಪುರ : ಇಲ್ಲಿನ ಶ್ರೀ ಅರವಿಂದ ಕಿರಿಯ ಮತ್ತು ಹಿರಿಯ ಪ್ರಾಥಮಿಕ ಶಾಲೆ ಮತ್ತು ಅರವಿಂದ ಕೈಗಾರಿಕಾ  ತರಬೇತಿ ಸಂಸ್ಥೆಯ ನೇತೃತ್ವದಲ್ಲಿ ವಿಶ್ವ ಪರಿಸರ ದಿನಾಚರಣೆಯನ್ನು ಆಚರಿಸಲಾಯಿತು. ಕುಚ್ಚಪ್ಪನಪೇಟೆ ಮತ್ತು ಸಂಜಯನಗರದಲ್ಲಿರುವ ಶಾಲೆಯ ವಿವಿಧ ಘಟಕಗಳ ಮಕ್ಕಳು ರಸ್ತೆಗಳಲ್ಲಿ ಜಾಗೃತಿ ಜಾಥಾ ಕೈಗೊಂಡರು.ಪರಿಸರ ಸಂರಕ್ಷಣೆಯ ಕುರಿತು ಜಾಗೃತಿ ಮೂಡಿಸುವ ಘೋಷಣೆಗಳೊಂದಿಗೆ ಗಮನ ಸಳೆದ ಮಕ್ಕಳು ಮನೆಗೊಂದು ಮರ ಬೆಳೆಸುವಂತೆ ಸಾರ್ವಜನಿಕರಿಗೆ ಸಂದೇಶ ನೀಡಿದರು. ಪರಿಸರ ಮಾಲಿನ್ಯ ಗಂಡಾಂತರಕಾರಿ ಭವಿಷ್ಯದ ಮುನ್ಸೂಚನೆ ಎಂಬುದನ್ನು ನಾವು ಅರಿಯಬೇಕು. ಭವಿಷ್ಯದ ಹಿತದೃಷ್ಟಿಯಿಂದ ಮರಗಿಡಗಳ ಸಂರಕ್ಷಣೆ, ಪರಿಸರ ವಿರೋಧಿ ಕೃತ್ಯಗಳಿಗೆ ಕಡಿವಾಣ ಹಾಕಬೇಕಾದ್ದು ಅನಿವಾರ್ಯ ಎಂದರು. ಸುಬ್ಬಲಕ್ಷ್ಮಿ, ಹಿರಿಯ ಶಿಕ್ಷಕಿ ಅಶ್ರೋಫ್ ಉನ್ನೀಸಾ, ವಸಂತರಾಜು ಅನೇಕ ಶಿಕ್ಷಕರು ಉಪಸ್ಥಿತರಿದ್ದರು.

ಎಂಎಸ್‌ವಿ ಶಾಲೆಯಲ್ಲಿ ಪರಿಸರ ಜಾಗೃತಿ

ದೊಡ್ಡಬಳ್ಳಾಪುರ: ಇಲ್ಲಿನ ಎಂಎಸ್‌ವಿ ಶಾಲೆಯಲ್ಲಿ ಪರಿಸರ ದಿನಾಚರಣೆಯನ್ನು ಆಚರಿಸಲಾಯಿತು. ವಿದ್ಯಾರ್ಥಿಗಳು ನಗರದ ಪ್ರಮುಖ ಬೀದಿಗಳಲ್ಲಿ ಜಾಗೃತಿ ಜಾಥಾ ನಡೆಸಿದರು.
 ನಂತರ ತಾಲೂಕು ಕಚೇರಿ ವೃತ್ತದಲ್ಲಿ ಮಾನವ ಸರಪಳಿ ನಿರ್ಮಿಸಿ ಪರಿಸರ ಜಾಗೃತಿ ಮೂಡಿಸಲಾಯಿತು. ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿಯಿಂದ ಇಸಿಓ ಕೋಮಲ, ಮಂಜುಳಾ, ದೈಹಿಕ ಶಿಕ್ಷಣ ತಾಲೂಕು ಸಂಯೋಜಕ ಬಿ.ಜಿ.ಅಮರನಾಥ್, ಹನುಮಂತರಾಯಪ್ಪ ಮತ್ತಿತರರು ಪಾಲ್ಲೊಂಡಿದ್ದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು, ಪರಿಸರದ ಸಂರಕ್ಷಣೆ ಬಗ್ಗೆ ಮಕ್ಕಳಲ್ಲಿ ಜಾಗೃತಿ ಮೂಡಿಸಿದರು. ಪ್ರತಿಯೊಬ್ಬರೂ ಒಂದೊಂದು ಸಸಿಗಳನ್ನು ನೆಟ್ಟು ಬೆಳೆಸುವ ಮೂಲಕ ಪರಿಸರ ಅಭಿಯಾನ ನಡೆಸಬೇಕು ಎಂದು ಕರೆ ನೀಡಿದರು.
  ಕಾರ್ಯಕ್ರಮಕ್ಕೆ ದೊಡ್ಡಬಳ್ಳಾಪುರ ನಗರ ಪೊಲೀಸ್ ಸಿಬ್ಬಂದಿ ಕೂಡ ಕೈಜೋಡಿಸಿ ಮಕ್ಕಳ ಉನ್ನತ ಆಲೋಚನೆಗಳಿಗೆ ಮೆಚ್ಚುಗೆ ವ್ಯಕ್ತಪಡಿಸಿದರು. ಶಾಲಾ ಅಧ್ಯಕ್ಷ ಸುಬ್ರಹ್ಮಣ್ಯ, ಕಾರ್ಯದರ್ಶಿ ಮಂಜುಳಾ, ಪ್ರಾಂಶುಪಾಲ ವಿಜಯಭಾಸ್ಕರ್ ರೆಡ್ಡಿ ಮತ್ತಿತರರು ಭಾಗವಹಿಸಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.