ಬೆಂಗಳೂರು ಗ್ರಾಮಾಂತರ

ಮಿತಿಮೀರಿದ ಲಂಚಗುಳಿತನ ದೇಶಕ್ಕೆ ಅಪಾಯಕಾರಿ

Published On :

ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ತಾಲೂಕು ಕಚೇರಿಗಳಲ್ಲಿ ನಡೆಯುತ್ತಿರುವ ಭ್ರಷ್ಟಾಚಾರ ವಿರೋಧಿಸಿ ಕರ್ನಾಟಕ ರಾಜ್ಯ ಪ್ರಜಾ ವಿಮೋಚನಾ ಸಮಿತಿ ನೇತೃತ್ವದಲ್ಲಿ ಶನಿವಾರ ದೊಡ್ಡಬಳ್ಳಾಪುರ ತಾಲೂಕು ಕಚೇರಿ ಮುಂದೆ ಬೃಹತ್ ಪ್ರತಿಭಟನಾ ಧರಣಿ ನಡೆಸಲಾಯಿತು.
ಕಾರ್ಯಕ್ರಮದಲ್ಲಿ ಮಾತನಾಡಿದ ಚಿತ್ರದುರ್ಗದ ಅಹಿಂದ ಮುಖಂಡ ಮುರುಗರಾಜೇಂದ್ರ ಒಡೆಯರ್, ಸರ್ಕಾರಿ ಕಚೇರಿಗಳಲ್ಲಿ ಭ್ರಷ್ಟಾಚಾರ ಮತ್ತು ಲಂಚಗುಳಿತನ ಮಿತಿ ಮೀರಿದೆ. ದಲ್ಲಾಳಿಗಳ ಸ್ವರ್ಗವಾಗಿರುವ ಸರ್ಕಾರಿ ಕಚೇರಿಗಳಲ್ಲಿ ಹಣವಿಲ್ಲದೆ ಸಾರ್ವಜನಿಕರ ಕೆಲಸಗಳು ಆಗುತ್ತಿಲ್ಲ. ಪಾದರ್ಶಕತೆ ಮರೆಯಾಗಿದೆ. ಅಧಿಕಾರಿಗಳನೇಕರು ಹಣ ಮಾಡುವುದನ್ನೇ ದಂಧೆಯಾಗಿಸಿಕೊಂಡಿದ್ದಾರೆ ಎಂದರು.
ಸಂಘಟನೆಯ ರಾಜ್ಯಾಧ್ಯಕ್ಷ ಖಾಸಿಂಸಾಬ್, ಜಿಲ್ಲಾಧ್ಯಕ್ಷ ಸಂತೋಶ್ ಕಾಟಪ್ಪ, ಪ್ರಧಾನ ಕಾರ್ಯದರ್ಶಿ ಎಚ್.ಶ್ರೀನಿವಾಸ್, ತಾಲೂಕು ಅಧ್ಯಕ್ಷ ಲಕ್ಷ್ಮೀನರಸಿಂಹ, ಮುಖಂಡರಾದ ನಾರಾಯಣಸ್ವಾಮಿ, ಲಕ್ಷ್ಮಣ್, ಬೆಂಗಳೂರು ನಗರ, ಗೌರಿಬಿದನೂರು, ನೆಲಮಂಗಲ, ದೇವನಹಳ್ಳಿ ಮತ್ತು ಹೊಸಕೋಟೆ ತಾಲೂಕು ಮುಖಂಡರು, ಜಿಲ್ಲಾ ಮತ್ತು ತಾಲೂಕು ಘಟಕಗಳ ಪದಾಧಿಕಾರಿಗಳು, ಮತ್ತಿತರರು ಪಾಲ್ಗೊಂಡಿದ್ದರು.
ನೆಲದಾಂಜನೇಯಸ್ವಾಮಿ ದೇವಾಲಯದಿಂದ ಹೊರಟ ಮೆರವಣಿಗೆ ತಾಲೂಕು ಕಚೇರಿ ತಲುಪಿತು. ನಂತರ ಕಚೇರಿಗೆ ಮುತ್ತಿಗೆ ಹಾಕಿ ಪ್ರತಿಭಟಿಸಲಾಯಿತು.


Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.