ರೈತರ ಸಮಸ್ಯೆಗಳ ಇತ್ಯರ್ಥಕ್ಕೆ ಆದ್ಯತೆ: ಶಾಸಕ ನಾಗರಾಜ್
ಹೊಸಕೋಟೆ: ರೈತರಿಗೆ ಸರ್ಕಾರದಿಂದ ಲಭ್ಯವಿರುವ ಸೌಲಭ್ಯಗಳನ್ನು ಪಡೆಯಲು, ಸಮಸ್ಯೆಗಳನ್ನು ಪರಿಹರಿಸಲು ಮೊದಲ ಆದ್ಯತೆ ನೀಡಲಾಗುವುದು ಎಂದು ಶಾಸಕ ಎನ್. ನಾಗರಾಜ್ ಸ್ಪಷ್ಟಪಡಿಸಿದರು.
ಪಟ್ಟಣದ ಸರ್ಕಾರಿ ಪದವಿಪೂರ್ವ ಕಾಲೇಜಿನಲ್ಲಿ ರೇಷ್ಮೆ ಇಲಾಖೆ ಏರ್ಪಡಿಸಿದ್ದ ಸೌಲಭ್ಯ ವಿತರಣೆ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಅಧಿಕಾರಿಗಳೂ ರೈತರಿಗೆ ಅನುಕೂಲ ಕಲ್ಪಿಸಿಕೊಡಲು ಪ್ರಾಮಾಣಿಕವಾಗಿ ಕರ್ತವ್ಯ ನಿರ್ವಹಿಸಬೇಕು. ಮಧ್ಯಮ ವರ್ಗರೈತರು ಹಲವಾರು ಕಾರಣಗಳಿಂದಾಗಿ ತೀವ್ರಸಂಕಷ್ಟಕ್ಕೆ ಒಳಗಾಗುತ್ತಿದ್ದು, ಕೂಲಿ ಮಾಡಿ ಜೀವನ ಸಾಗಿಸಬೇಕಾದ ಅನಿವಾರ್ಯತೆ ಉಂಟಾಗಿದೆ ಎಂದರು. ಗಮನಕ್ಕೆ
ತಂದರೆ ಪರಿಹಾರ. ರೈತರು ಕಚೇರಿಗಳಿಗೆ ವೃಥಾ ಅಲೆದಾಡುವುದನ್ನು ತಪ್ಪಿಸಿ ಸಮಸ್ಯೆಯನ್ನು ಶೀಘ್ರವಾಗಿ ಪರಿಹರಿಸಲು ಅಧಿಕಾರಿಗಳು ಗಮನ ಹರಿಸಬೇಕು. ರೈತರೂ ತಮ್ಮ ಕುಂದು ಕೊರತೆಗಳನ್ನು ಜನಪ್ರತಿನಿಧಿಗಳಿಗೆ ತಿಳಿಸಿದಲ್ಲಿ ಸರ್ಕಾರದ ಗಮನಕ್ಕೆ ತಂದು ಬಗೆಹರಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು. ಮನೆ ಬಾಗಿಲಿಗೆ ಹೋಗಿ. ಜಿಪಂ ಅಧ್ಯಕ್ಷ ವಿ.ನಾರಾಯಣಸ್ವಾಮಿ ಮಾತನಾಡಿ, ರೈತರು ಇಲಾಖೆಗಳಲ್ಲಿ ಪಡೆದುಕೊಳ್ಳಬಹುದಾದ ಸವಲತ್ತುಗಳ ಬಗ್ಗೆ ಅಧಿಕಾರಿಗಳು ಸಮರ್ಪಕಮಾಹಿತಿ, ತಿಳಿವಳಿಕೆ ನೀಡಬೇಕು.
ತಾಲೂಕು ಮಟ್ಟದಲ್ಲಿ ಪ್ರಗತಿಪರ ರೈತರನ್ನು ಗುರುತಿಸಿ ಅನುದಾನ ಮಂಜೂರು ಮಾಡಬೇಕು. ತಾಲೂಕು ಮಟ್ಟದಲ್ಲಿ ಪ್ರಗತಿಪರ ರೈತರನ್ನು ಗುರುತಿಸಿ ಅನುದಾನ ಮಂಜೂರು ಮಾಡಬೇಕು. ರೈತರ ಮನೆಬಾಗಿಲಿಗೆ ಅಧಿಕಾರಿಗಳು ತೆರಳಿ ಸಮಸ್ಯೆಗಳನ್ನು ಅರಿತು ಪರಿಹಾರ ಒದಗಿಸಬೇಕು ಎಂದರು.
ರೇಷ್ಮೆ ಮತ್ತು ಹೈನುಗಾರಿಕೆಯಲ್ಲಿ ಗ್ರಾಮಾಂತರ ಜಿಲ್ಲೆ ರಾಜ್ಯದಲ್ಲಿಯೇ ಪ್ರಥಮ ಸ್ಥಾನ ಪಡೆದಿರುವ ಹೆಗ್ಗಳಿಕೆಯನ್ನು ಹೊಂದಿದೆ. ರೇಷ್ಮೆ ಇಲಾಖೆಗೆ ಹಿಂದಿನ ಸಾಲಿನಲ್ಲಿ ಔಷಧ ಸಿಂಪರಣೆಗಾಗಿ 68 ಲಕ್ಷ ರು. ಮಂಜೂರು ಮಾಡಿದ್ದು, ಪ್ರಸಕ್ತ ಸಾಲಿಗೆ 60 ಲಕ್ಷ ರು. ಪ್ರಸ್ತಾವನೆ ಸಲ್ಲಿಸಲಾಗಿದೆ ಎಂದರು. ರೇಷ್ಮೆ ಇಲಾಖೆ ಸಹಾಯಕ ನಿರ್ದೇಶಕ ಚಂದ್ರಪ್ಪ ಮಾತನಾಡಿ, ಇಲಾಖೆ ವತಿಯಿಂದ ಹಿಂದಿನ ಸಾಲಿನಲ್ಲಿ 2.26 ಕೋಟಿ ರು. ಸವಲತ್ತುಗಳನ್ನು ವಿತರಿಸಲಾಗಿದೆ. ಹಿಪ್ಜು ನೇರಳೆ ಬೆಳೆ ಪ್ರದೇಶ ವಿಸ್ತರಣೆ, ರೇಷ್ಮೆ ಗೂಡು ಉತ್ಪನ್ನ ಹೆಚ್ಚಳ, ಬೈಮೊಲ್ಟೆನ್ ತಳಿಹೆಚ್ಚಾಗಿ ಬೆಳೆಯಲು ರೈತರನ್ನು ಪ್ರೋತ್ಸಾಹಿಸುವುದು ಇಲಾಖೆಯ ಪ್ರಮುಖ ಉದ್ದೇಶವಾಗಿದೆ ಎಂದು ತಿಳಿಸಿದರು. ತಾಪಂ ಅಧ್ಯಕ್ಷೆ ಮಮತಾ, ಸದಸ್ಯರಾದ ಕಮಲಾಕ್ಷಿ, ಕುಮಾರ ಕಂಠೀರವ, ರಾಮಮೂರ್ತಿ, ರೇಷ್ಮೆ ಇಲಾಖೆ ಉಪನಿರ್ದೇಶಕ ಆಂಜನೇಯಲು ಉಪಸ್ಥಿತರಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

