ರಂಗ ಶಿಕ್ಷಣಕ್ಕೆ ಅರ್ಜಿ
ರಾಮನಗರ: ಚಿತ್ರದುರ್ಗ ಜಿಲ್ಲೆ ಸಾಣೆಹಳ್ಳಿಯ ಶಿವಕುಮಾರ ರಂಗ ಪ್ರಯೋಗ ಶಾಲೆಯು 2014-15ನೇ ಸಾಲಿಗೆ ಒಂದು ವರ್ಷದ ರಂಗ ಶಿಕ್ಷಣ ಡಿಪ್ಲೋಮಾಗೆ ಅರ್ಜಿ ಆಹ್ವಾನಿಸಿದೆ. ಕನಿಷ್ಠ ಎಸ್ಎಸ್ಎಲ್ಸಿ ವಿದ್ಯಾರ್ಹತೆ ಹೊಂದಿರಬೇಕು. ತರಬೇತಿ ಅವಧಿಯಲ್ಲಿ ಉಚಿತ ಊಟ, ವಸತಿ ವ್ಯವಸ್ಥೆ ಮಾಡಲಾಗುವುದು. ಭಾರತೀಯ ರಂಗ ಭೂಮಿ, ಕನ್ನಡ ರಂಗಭೂಮಿ ಮತ್ತು ಸಾಹಿತ್ಯ ಪರಂಪರೆ, ಪಾಶ್ಚಾತ್ಯ ರಂಗಭೂಮಿ, ಅಭಿನಯ, ಆಚಾರ್ಯ, ಶಿಕ್ಷಣ ರಂಗಭೂಮಿ ಕುರಿತಾದ ಸೈದ್ಧಾಂತಿಕ ಮತ್ತು ಪ್ರಾಯೋಗಿಕ ತರಗತಿಗಳು ನಡೆಯಲಿವೆ. ಮೊದಲನೇ ದಿನ ಪ್ರಾಯೋಗಿಕ, 2ನೇ ದಿನ ಮೌಖಿಕ ಪರೀಕ್ಷೆ ನಡೆಸಲಾಗುವುದು. ಜು.15 ರಿಂದ ತರಗತಿ ಪ್ರಾರಂಭವಾಗುತ್ತವೆ. ಮಾಹಿತಿಗೆ ದೂ.08199243772, 9481345450 ಸಂಪರ್ಕಿಸಬಹುದು.
ಶಿಷ್ಯ ವೇತನಕ್ಕೆ ಅರ್ಜಿ ಆಹ್ವಾನ
ರಾಮನಗರ: ಕರ್ನಾಟಕ ಸಂಗೀತ ನೃತ್ಯ ಅಕಾಡೆಮಿಯು 2013-14 ಮತ್ತು 2014-15ನೇ ಸಾಲಿನ ಶಿಷ್ಯ ವೇತನ ನೀಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಕರ್ನಾಟಕ ಶಾಸ್ತ್ರೀಯ ಸಂಗೀತ, ಹಿಂದೂಸ್ತಾನಿ ಸಂಗೀತ, ಸುಗಮ ಸಂಗೀತ, ಕಥಾಕೀರ್ತನ ಮತ್ತು ಗಮಕ ಕಲಾಕ್ಷೇತ್ರದಲ್ಲಿ ಅಭ್ಯಾಸ ಮಾಡುತ್ತಿರುವ 16 ರಿಂದ 24 ವರ್ಷದೊಳಗಿನ ಅಭ್ಯರ್ಥಿಗಳು ಮಾತ್ರ ಅರ್ಜಿ ಸಲ್ಲಿಸಲು ಅರ್ಹರು. ಆಯ್ಕೆಯಾದ ಅಭ್ಯರ್ಥಿಗಳಿಗೆ ರು.5 ಸಾವಿರ ಶಿಷ್ಯವೇತನ ನೀಡಲಾಗುವುದು. ಅರ್ಜಿಯನ್ನು ಅಕಾಡೆಮಿಯ ಕಚೇರಿಯಲ್ಲಿ ಉಚಿತವಾಗಿ ಪಡೆಯಬಹುದು. ಬೇರೆ ಬೇರೆ ಜಿಲ್ಲೆಯ ಅಭ್ಯರ್ಥಿಗಳು ಆಯಾ ಜಿಲ್ಲೆಯ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕರ ಕಚೇರಿಯಲ್ಲಿ ಅರ್ಜಿ ಪಡೆಯಬಹುದು. ಅರ್ಜಿಯ ಜೊತೆಗೆ ಇತ್ತೀಚಿನ ಪಠ್ಯಕ್ರಮ ಸಹ ನೀಡಲಾಗುತ್ತದೆ. ಅಂಚೆ ಮೂಲಕ ಅರ್ಜಿ ಮತ್ತು ಪಠ್ಯ ಕ್ರಮ ಪಡೆಯಲಿಚ್ಛಿಸುವವರು ರು.10ರ ಸ್ಟಾಂಪ್ ಹಚ್ಚಿದ ಸ್ವವಿಳಾಸವುಳ್ಳ ಲಕೋಟೆಯನ್ನು ರಿಜಿಸ್ಟ್ರಾರ್, ಕರ್ನಾಟಕ ಸಂಗೀತ ನೃತ್ಯ ಅಕಾಡೆಮಿ, ಕನ್ನಡ ಭವನ, 2ನೇ ಮಹಡಿ, ಜೆ.ಸಿ.ರಸ್ತೆ, ಬೆಂಗಳೂರು 560002 ಇಲ್ಲಿಗೆ ಕಳುಹಿಸಿಕೊಡಬಹುದು. ಭರ್ತಿ ಮಾಡಿದ ಅರ್ಜಿಯನ್ನು ಜೂ.30ರೊಳಗೆ ಸಲ್ಲಿಸಬಹುದು ಎಂದು ಕರ್ನಾಟಕ ಸಂಗೀತ ನೃತ್ಯ ಅಕಾಡೆಮಿಯ ರಿಜಿಸ್ಟ್ರಾರ್ ಜಿ.ನರಸಿಂಹಮೂರ್ತಿ ತಿಳಿಸಿದ್ದಾರೆ. ಮಾಹಿತಿಗೆ ದೂ. 080-22215072 ಸಂಪರ್ಕಿಸಬಹುದು.
ರುಡ್ಸೆಟ್
ಅರ್ಜಿ ಕರೆ
ರಾಮನಗರ: ನೆಲಮಂಗಲ ತಾಲೂಕಿನ ಅರಿಶಿನಕುಂಟೆಯಲ್ಲಿರುವ ರುಡ್ಸೆಟ್ ಸಂಸ್ಥೆಯು ಬೆಂಗಳೂರು ಗ್ರಾಮಾಂತರ, ನಗರ, ರಾಮನಗರ ಮತ್ತು ತುಮಕೂರು ಜಿಲ್ಲಾ ವ್ಯಾಪ್ತಿಯ 18 ರಿಂದ 45 ವರ್ಷದೊಳಗಿನ, ಕನ್ನಡ ಓದಲು ಬರೆಯಲು ಬಲ್ಲ ಆಸಕ್ತ ನಿರುದ್ಯೋಗಿ ಯುವಕ ಮತ್ತು ಯುವತಿಯರಿಗೆ ಫೋಟೋಗ್ರಫಿ ಮತ್ತು ವಿಡಿಯೋಗ್ರಫಿ ತರಬೇತಿ ನೀಡಲಿದೆ. 21 ದಿನದ ತರಬೇತಿಯು ಜೂ.20ರೊಳಗೆ ಪ್ರಾರಂಭಗೊಳ್ಳಲಿದೆ. ಆಸಕ್ತರು ನಿರ್ದೇಶಕರು, ರುಡ್ಸೆಟ್ ಸಂಸ್ಥೆ, ಅರಿಶಿನಕುಂಟೆ ಅಂಚೆ, ನೆಲಮಂಗಲ ತಾಲೂಕು, ಬೆಂಗಳೂರು ಗ್ರಾಮಾಂತರ ಜಿಲ್ಲೆ ಇಲ್ಲಿಗೆ ಅರ್ಜಿ ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗೆ ದೂ.080-27728166, ಮೊ. 97411-29429 ಸಂಪರ್ಕಿಸಬಹುದು ಎಂದು ಸಂಸ್ಥೆ ನಿರ್ದೇಶಕರು ತಿಳಿಸಿದ್ದಾರೆ.
ಚುನಾವಣಾ ವೀಕ್ಷಕರ ನೇಮಕ
ನೆಲಮಂಗಲ: ವಿಧಾನಪರಿಷತ್ ಕರ್ನಾಟಕ ಆಗ್ನೇಯ ಪದವೀಧರರ ಕ್ಷೇತ್ರ ಮತ್ತು ಬೆಂಗಳೂರು ಶಿಕ್ಷಕರ ಕ್ಷೇತ್ರದ ಚುನಾವಣೆ 2014ಕ್ಕೆ ಸಂಬಂಧಿಸಿದಂತೆ ಅಧಿಕಾರಿಗಳನ್ನು ಚುನಾವಣಾ ವೀಕ್ಷಕರನ್ನಾಗಿ ನೇಮಕ ಮಾಡಲಾಗಿರುತ್ತದೆ. ಮತದಾರರು ಚುನಾವಣೆಗೆ ಸಂಬಂಧಿಸಿದಂತೆ ದೂರುಗಳು ಏನಾದರೂ ಇದ್ದಲ್ಲಿ, ಚುನಾವಣಾ ವೀಕ್ಷಕರನ್ನು ಸಂಪರ್ಕಿಸಬಹುದಾಗಿರುತ್ತದೆ. ಖುದ್ದು ಭೇಟಿ ಮಾಡಬೇಕಾದಲ್ಲಿ ಮಧ್ಯಾಹ್ನ 3.00 ಗಂಟೆ ನಂತರ ಎಂ.ಆರ್.ಕಾಂಬ್ಳೆ ಭಾ.ಆ.ಸೇ. ವ್ಯವಸ್ಥಾಪಕ ನಿರ್ದೇಶಕರು, ಎಸ್.ಮಹೇಶ್ವರರಾವ್ ಭಾ.ಆ.ಸೇ, ಆಯುಕ್ತರು, ಕೈಗಾರಿಕಾ ಅಭಿವೃದ್ಧಿ ಮತ್ತು ನಿರ್ದೇಶಕರು ಕೈಗಾರಿಕಾ, ವಾಣಿಜ್ಯ ಇಲಾಖೆ ಕಚೇರಿಗಳಲ್ಲಿ ಭೇಟಿ ಮಾಡಬಹುದಾಗಿರುತ್ತದೆ ಎಂದು ತಹಸೀಲ್ದಾರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
'ಕಾವೇರಿ ನಿರ್ವಹಣಾ ಮಂಡಳಿ ಬೇಡ'
ಮಾಗಡಿ: ಕೇಂದ್ರ ಸರ್ಕಾರ ಕಾವೇರಿ ನಿರ್ವಹಣಾ ಮಂಡಳಿ ರಚಿಸಲು ಮುಂದಾಗಬಾರದು ಎಂದು ರಾಣಿ ಚನ್ನಮ್ಮ ನವ ಭಾರತ ಸೇನೆ ಜಿಲ್ಲಾಧ್ಯಕ್ಷ ಆನಂದ್ ಒತ್ತಾಯಿಸಿದ್ದಾರೆ. ತಾಲೂಕಿನಲ್ಲಿ ರಾಣಿ ಚನ್ನಮ್ಮ ನವಭಾರತ ಸೇನೆ ಪದಾಧಿಕಾರಿಗಳು ತಹಸೀಲ್ದಾರ್ ಕಚೇರಿಗೆ ತೆರಳಿ ಸರ್ಕಾರಕ್ಕೆ ಮನವಿ ಸಲ್ಲಿಸಿದ ನಂತರ ಮಾತನಾಡಿದ ಅವರು, ತಮಿಳುನಾಡು ಮುಖ್ಯಮಂತ್ರಿ ಜಯಲಲಿತಾ ಕನ್ನಡಿಗರನ್ನು ಪದೇ ಪದೇ ಕೆಣಕುತ್ತಿದ್ದಾರೆ ಇದು ಉತ್ತಮ ರಾಜಕಾರಣದ ಮಾರ್ಗವಲ್ಲ, ರಾಜ್ಯದ ಸಂಸದರು ಹಾಗೂ ಕೇಂದ್ರ ಸಚಿವರು ಒಗ್ಗಟ್ಟು ಪ್ರದರ್ಶಿಸುವ ಮೂಲಕ ರಾಜ್ಯದ ಹಿತ ಕಾಪಾಡಲು ಬದ್ಧರಾಗಬೇಕು ಎಂದು ಕಿವಿಮಾತು ಹೇಳಿದರು. ತಾಲೂಕು ಅಧ್ಯಕ್ಷ ಎಂ. ಶ್ರೀನಿವಾಸ್, ಸಂಚಾಲಕ ದಯಾನಂದ್, ಪ್ರಧಾನ ಕಾರ್ಯದರ್ಶಿ ಆರ್. ಲಿಂಗರಾಜು, ಟೌನ್ ಅಧ್ಯಕ್ಷ ಗಂಗಣ್ಣ, ರಾಜಣ್ಣ ಮತ್ತಿತರರು ಉಪಸ್ಥಿತರಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

