ರಮೇಶ್ ಬಮೂಲ್ ಅಧ್ಯಕ್ಷ
ಬೆಂಗಳೂರು: ಬೆಂಗಳೂರು ನಗರ, ಗ್ರಾಮಾಂತರ, ರಾಮನಗರ ಜಿಲ್ಲಾ ಹಾಲು ಉತ್ಪಾದಕರ ಒಕ್ಕೂಟ(ಬಮೂಲ್ ) ಅಧ್ಯಕ್ಷರಾಗಿ ಆರ್.ಕೆ.ರಮೇಶ್ ಅವಿರೋಧ ಆಯ್ಕೆಯಾಗಿದ್ದಾರೆ. ಒಕ್ಕೂಟದ ನಿರ್ದೇಶಕರ ಆಯ್ಕೆಯಾಗಿ 15 ದಿನಗಳೇ ಕಳೆದಿದ್ದರೂ ಅಧ್ಯಕ್ಷರ ಆಯ್ಕೆ ಆಗಿರಲಿಲ್ಲ. ಕಾಂಗ್ರೆಸ್ ಮತ್ತು ಬಂಡಾಯ ಜೆಡಿಎಸ್ ನಿರ್ದೇಶಕರ ನಡುವೆ ಪೈಪೋಟಿ ಉಂಟಾಗಿ ಚುನಾವಣೆ ನಡೆಯುವ ಸಾಧ್ಯತೆ ಇತ್ತು. ಅಂತಿಮ ಹಂತದಲ್ಲಿ ಎಲ್ಲಾ ಪಕ್ಷಗಳಿಗೂ ಅಧಿಕಾರ ಸಿಗುವಂತೆ ಹಂಚಿಕೆ ಸೂತ್ರ ಹೆಣೆದು ಅಧ್ಯಕ್ಷರನ್ನು ಅವಿರೋಧವಾಗಿ ಆಯ್ಕೆ ಮಾಡಲಾಯಿತು. ಹೀಗಾಗಿ ರಮೇಶ್ ಅಧ್ಯಕ್ಷರಾಗಿ ಆಯ್ಕೆಯಾದರು.ವಿಶೇಷವೆಂದರೆ, ಚುನಾವಣೆಯಲ್ಲಿ ಆಯ್ಕೆಯಾದ ನಿರ್ದೇಶಕರಲ್ಲಿ ಯಾರೊಬ್ಬರೂ ಅಧ್ಯಕ್ಷರಾಗದೆ ಸರ್ಕಾರದಿಂದ ನಾಮನಿರ್ದೇಶಿತರಾದ ಸದಸ್ಯ ರಮೇಶ್ ಆಯ್ಕೆಯಾದರು. ಅಂದರೆ, ಆನೇಕಲ್ ತಾಲೂಕು ಹಾಲು ಉತ್ಪಾದಕರ ಸಹಕಾರ ಸಂಘ ಚುನಾವಣೆಯಲ್ಲಿ ರಮೇಶ್ ಸೋಲು ಅನುಭವಿಸಿದ್ದರು. ನಂತರ ಅವರನ್ನು ಸರ್ಕಾರ ಬಮುಲ್ಗೆ ನಾಮ ನಿರ್ದೇಶನ ಮಾಡಿತ್ತು. ಅವರನ್ನೇ ಅಧ್ಯಕ್ಷ ಸ್ಥಾನಕ್ಕೂ ಬಿಂಬಿಸಲಾಗಿತ್ತು. ಒಟ್ಟು 12 ಮಂದಿ ನಿರ್ದೇಶಕರ ಬಲ ಇರುವ ಒಕ್ಕೂಟದಲ್ಲಿ ಕಾಂಗ್ರೆಸ್-4, ಬಿಜೆಪಿ-1, ಜೆಡಿಎಸ್-1 ಹಾಗೂ ಬಂಡಾಯ ಜೆಡಿಎಸ್-3 ಹಾಗೂ ಪಕ್ಷೇತರ ಒಬ್ಬರು ನಿರ್ದೇಶಕರಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

