ದಾರಿ ವಿಚಾರಕ್ಕೆ ಮಹಿಳೆಯರ ಬಟ್ಟೆ ಹರಿದ ದುಷ್ಕರ್ಮಿಗಳು
ಸೂಲಿಬೆಲೆ: ದಾರಿ ವಿಚಾರಕ್ಕೆ ಸಂಬಂಧಪಟ್ಟಂತೆ ಗುಂಪೊಂದು ದಲಿತ ಮಹಿಳೆಯರು ತೊಟ್ಟಿದ್ದ ವಸ್ತ್ರಗಳನ್ನು ಹರಿದು ಸಾರ್ವಜನಿಕವಾಗಿ ಲೈಂಗಿಕ ದೌರ್ಜನ್ಯ ಎಸೆಗಿರುವ ಘಟನೆ ಸೋಮವಾರ ರಾತ್ರಿ ನಡೆದಿದ್ದು, ಘಟನೆಯಲ್ಲಿ ನಾಲ್ವರು ಗಾಯಗೊಂಡಿದ್ದಾರೆ. ಸೂಲಿಬೆಲೆ ಹೋಬಳಿಯ ಗುಳ್ಳಹಳ್ಳಿ ಗ್ರಾಮದಲ್ಲಿ ರಸ್ತೆ ಕಾಮಗಾರಿ ನಡೆಯುತ್ತಿದ್ದು, ಓಡಾಡಲು ಅರ್ಧ ಅಡಿ ರಸ್ತೆ ಬಿಟ್ಟು ಕಾಮಗಾರಿ ನಡೆಸಿ ಎಂದು ದಲಿತರು ಮನವಿ ಮಾಡಿದ್ದಾರೆ.
ಇದಕ್ಕೆ ಆಕ್ಷೇಪ ವ್ಯಕ್ತಪಡಿಸಿದ ಮಂಜುನಾಥ, ರಾಮಕೃಷ್ಣ, ಮುನಿತಾಯಮ್ಮ, ವೆಂಕಟೇಶಪ್ಪ ಎಂಬುವರು ಅವಾಚ್ಯ ಶಬ್ದಗಳಿಂದ ನಿಂದಿಸಿ ಹಲ್ಲೆ ನಡೆಸಿದ್ದಾರೆ. ಮಂಜುನಾಥ ಎಂಬಾತ ಜನರ ಮಧ್ಯದಲ್ಲಿಯೇ ದಲಿತ ಮಹಿಳೆಯರ ಸೀರೆ ಎಳೆದು, ರವಿಕೆ ಹರಿದು ದೌರ್ಜನ್ಯ ಎಸೆಗಿದ್ದಾನೆ. ಈ ವೇಳೆ ಬಿಡಿಸಲು ಬಂದ ಚನ್ನಪ್ಪ, ವೆಂಕಟೇಶ ಎಂಬುವರನ್ನು ಥಳಿಸಲಾಗಿದೆ. ಈ ನಿಟ್ಟಿನಲ್ಲಿ ನಮಗೆ ಜೀವ ಬೆದರಿಕೆಯಿದ್ದು, ರಕ್ಷಣೆ ಕೊಡಬೇಕೆಂದು ಕೋರಿ ಶಾರದಮ್ಮ ಸೂಲಿಬೆಲೆ ಪೊಲೀಸರಿಗೆ ನೀಡಿರುವ ದೂರಿನಲ್ಲಿ ಮನವಿ ಮಾಡಿದ್ದಾರೆ. ಪೊಲೀಸರು ತನಿಖೆ ಕೈಗೊಂಡಿದ್ದಾರೆ. ಗಾಯಾಳುಗಳಾದ ಮಂಜುಳ ಮತ್ತು ಶಾರದಮ್ಮ ಹೊಸಕೋಟೆ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲಾಗಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

