ಬೆಂಗಳೂರು ಗ್ರಾಮಾಂತರ

ಅಶ್ಲೀಲ ಪೋಸ್ಟರ್‌ಗೆ ಕಡಿವಾಣ ಹಾಕಿ'

Published On :

ದೊಡ್ಡಬಳ್ಳಾಪುರ: ನಗರದಲ್ಲಿ ಇತ್ತೀಚೆಗೆ ಎಲ್ಲೆಂದರಲ್ಲಿ ಅಶ್ಲೀಲ ಚಲನಚಿತ್ರಗಳ ಪೋಸ್ಟರ್‌ಗಳನ್ನು ಅಂಟಿಸುತ್ತಿರುವುದು ಹೆಣ್ಣು ಮಕ್ಕಳು, ಮಹಿಳೆಯರು, ವಿದ್ಯಾರ್ಥಿಗಳು ತೀವ್ರ ಮುಜುಗರ ಅನುಭವಿಸುವಂತಾಗಿದೆ. ಈ ಕೂಡಲೇ ನಗರಸಭೆ ಈ ಬಗೆಯ ಅಶ್ಲೀಲ ಪೋಸ್ಟರ್‌ಗಳನ್ನು ತೆರವು ಮಾಡಬೇಕು. ಅಂಟಿಸುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಪ್ರಮೀಳಾ ಮಹದೇವ್ ನಗರಸಭಾ ಅಧ್ಯಕ್ಷರಿಗೆ ಮನವಿ ಸಲ್ಲಿಸಿದ್ದಾರೆ. ಸಾರ್ವಜನಿಕ ಸ್ಥಳಗಳು, ನೀರಿನ ಟ್ಯಾಂಕ್‌ಗಳು, ಶಾಲಾ ಕಾಲೇಜುಗಳ ಸುತ್ತ, ಬಸ್ ನಿಲ್ದಾಣ, ರೈಲು ನಿಲ್ದಾಣಗಳ ಬಳಿಯಲ್ಲಿ ಕಾಮಪ್ರಚೋದಕ ಮತ್ತು ಸಮಾಜಘಾತುಕ ಸಂದೇಶ ಹೊಂದಿರುವ ಚಲನಚಿತ್ರಗಳ ಪೋಸ್ಟರ್ ಅಂಟಿಸುವುದು ನಿಲ್ಲಬೇಕು. ಪರವಾನಗಿ ನೀಡುವಾಗ ಕಟ್ಟುನಿಟ್ಟಿನ ಸಂದೇಶ ರವಾನಿಸಬೇಕು ಎಂದು ಆಗ್ರಹಿಸಿದ್ದಾರೆ.
14ಕ್ಕೆ ರೇಲ್ವೆ ಸಚಿವ ಸದಾನಂದಗೌಡ ಭೇಟಿ:: ರಾಜ್ಯ ವಿಧಾನಪರಿಷತ್ತಿಗೆ ಶಿಕ್ಷಕರ ಕ್ಷೇತ್ರದಿಂದ ಸ್ಪರ್ಧಿಸುತ್ತಿರುವ ಬಿಜೆಪಿ ಅಭ್ಯರ್ಥಿ ಎಂ.ನೀಲಯ್ಯ ಪರ ಪ್ರಚಾರಕ್ಕಾಗಿ ಕೇಂದ್ರ ರೇಲ್ವೆ ಸಚಿವ ಡಿ.ವಿ.ಸದಾನಂದಗೌಡ ಜೂ.14ರಂದು ಪಟ್ಟಣಕ್ಕೆ ಆಗಮಿಸಿ, ಮತಯಾಚಿಸಲಿದ್ದಾರೆ.ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ, ನೆಲಮಂಗಲ, ದೇವನಹಳ್ಳಿ ಮತ್ತು ಹೊಸಕೋಟೆಯಲ್ಲಿ ಮತಯಾಚನೆ ಮಾಡಲಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.