ಬೆಂಗಳೂರು ಗ್ರಾಮಾಂತರ

ಆರೋಪ ಸಾಬೀತು ಮಾಡಲಿ

Published On :

ದೊಡ್ಡಬಳ್ಳಾಪುರ: ಸರ್ಕಾರಿ ನಿವೇಶನ ಪಡೆದ ಆರೋಪದ ಹಿನ್ನೆಲೆಯಲ್ಲಿ  ಎಸ್.ಆರ್. ಹಿರೇಮಠ್ ಅವರು ನನ್ನ ಕುರಿತು ಮಾಡಿರುವ ಆರೋಪವನ್ನು ಸಾಕ್ಷ್ಯಾಧಾರಗಳ ಸಹಿತ ಸಾಬೀತು ಮಾಡಲಿ. ಅದನ್ನು ಬಿಟ್ಟು ಸುಮ್ಮನೆ ಹೇಳಿದ್ದನ್ನೇ ಪದೇ ಪದೇ ಹೇಳುತ್ತಾ ಹೋಗುವುದು ಸರಿಯಲ್ಲ ಎಂದು ಕೇಂದ್ರ ರೇಲ್ವೆ ಸಚಿವ ಡಿ.ವಿ.ಸದಾನಂದಗೌಡ ಹೇಳಿದ್ದಾರೆ. ಸರ್ಕಾರಿ ನಿವೇಶನ ಪಡೆದ ಆರೋಪದ ಹಿನ್ನೆಲೆಯಲ್ಲಿ ಅವರನ್ನು ಕೇಂದ್ರ ಸಂಪುಟದಿಂದ ಕೈಬಿಡಬೇಕು ಎಂದು ಎಸ್.ಆರ್.ಹಿರೇಮಠ್ ಮಾಡಿರುವ ಒತ್ತಾಯಕ್ಕೆ ಪ್ರತಿಕ್ರಿಯಿಸಿದ ಅವರು, ಆ ಪ್ರಕರಣ ಹೈಕೋರ್ಟ್‌ನಲ್ಲೇ ರದ್ದಾಗಿ ಹೋಗಿದೆ. ಅದು ಮುಗಿದ ಅಧ್ಯಾಯ. ಆರೋಪ ಮಾಡುವುದು ಅವರಿಗೆ ಸಂಬಂಧಿಸಿದ್ದು. ಅದನ್ನು ವಿರೋಧಿಸಲ್ಲ. ಮುಖ್ಯಮಂತ್ರಿಯಾಗಿದ್ದಾಗಲೂ ಇದೇ ಆರೋಪ ಮಾಡಿದ್ದರು. ಅವರ ಆರೋಪದಲ್ಲಿ ಹುರುಳಿಲ್ಲ ಎಂದಷ್ಟೇ ಹೇಳಬಲ್ಲೆ. ಉಳಿದದ್ದನ್ನು ಅವರೇ ಹೇಳಬೇಕು ಎಂದು ಡಿ.ವಿ.ಸದಾನಂದಗೌಡ ತಿರುಗೇಟು ನೀಡಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.