ಬೆಂಗಳೂರು ಗ್ರಾಮಾಂತರ

ಬೈಕ್ ವ್ಹೀಲಿಂಗ್: ಯುವಕ ಸಾವು

Published On :

ರಾಮನಗರ: ಸ್ಕೂಟರ್ ವ್ಹೀಲಿಂಗ್ ಮಾಡುತ್ತಿದ್ದ ಯುವಕನೊಬ್ಬ ಆಯತಪ್ಪಿ ಬಿದ್ದು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಸಂಗನಬಸವನ ದೊಡ್ಡಿ ಬಳಿ ಶನಿವಾರ ನಡೆದಿದೆ. ಬೆಂಗಳೂರಿನ ಕಮಲಾನಗರದ ನಿವಾಸಿ ಜಿಲಾನ್ ಪಾಷ ಮೃತಪಟ್ಟ ಯುವಕ. ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಬಜಾಜ್ ಚೇತಕ್ ಸ್ಕೂಟರ್‌ನಲ್ಲಿ ತನ್ನ ಸ್ನೇಹಿತನೊಂದಿಗೆ ಬೆಂಗಳೂರಿನಿಂದ ಮೈಸೂರಿಗೆ ತೆರಳುತ್ತಿದ್ದಾಗ ವ್ಹೀಲಿಂಗ್ ಮಾಡಲು ಹೋಗಿ ಆಯ ತಪ್ಪಿ ಕಳಕ್ಕೆ ಬಿದ್ದಿದ್ದಾನೆ. ಬಿದ್ದ ರಭಸಕ್ಕೆ ಆತನ ತಲೆ ತೀವ್ರ ಪೆಟ್ಟು ಬಿದ್ದು ಸ್ಥಳದಲ್ಲೇ ಮೃತಪಟ್ಟಿದ್ದಾನೆ. ಹಿಂಬದಿ ಸವಾರ ಮಹಮದ್ ಪಾಷಾ ಕೂಡ ಗಂಭೀರವಾಗಿ ಗಾಯಗೊಂಡಿದ್ದು, ಜಿಲ್ಲಾಸ್ಪತ್ರೆಯಲ್ಲಿ ತುರ್ತು ಚಿಕಿತ್ಸೆ ಕೊಡಿಸಿದ ನಂತರ ಬೆಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಸಂಬಂಧ ರಾಮನಗರದ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.