ಬೆಂಗಳೂರು ಗ್ರಾಮಾಂತರ

'ಸುಪ್ತ ಪ್ರತಿಭೆ ಹೊರಬರಲಿ'

Published On :

ರಾಮನಗರ:  ಗ್ರಾಮೀಣ ಪ್ರದೇಶಗಳ ಬಡ ವಿದ್ಯಾರ್ಥಿಗಳಲ್ಲಿ ಅಡಗಿರುವ ಸುಪ್ತ ಪ್ರತಿಭೆಗಳನ್ನು ಹೊರತೆಗೆದು, ಅವರಲ್ಲಿನ ಚೇತನದ ಕುಸುಮವನ್ನು ಅರಳುವಂತೆ ಮಾಡುವುದು ನಮ್ಮೆಲ್ಲರ ಕರ್ತವ್ಯವಾಗಿದೆ ಎಂದು ಮಾಜಿ ಕ್ರಿಕೆಟ್ ಆಟಗಾರ ವೆಂಕಟೇಶ್ ಪ್ರಸಾದ್ ಅಭಿಪ್ರಾಯಪಟ್ಟರು. ತಾಲೂಕಿನ ಜೋಗರದೊಡ್ಡಿಯಲ್ಲಿರುವ ಕೆನರಾ ಬ್ಯಾಂಕ್ ಪ್ರಾಯೋಜಿತ ಕೆಪಿಜೆ ಪ್ರಭು ಕರಕುಶಲ ತರಬೇತಿ ಸಂಸ್ಥೆಯಲ್ಲಿ ನೂತನವಾಗಿ ಸ್ಥಾಪಿತವಾಗಿರುವ ಕಂಪ್ಯೂಟರ್ ಲ್ಯಾಬ್ ಉದ್ಘಾಟಿಸಿ ಮಾತನಾಡಿದ ಅವರು, ಇಂತಹ ಶ್ರೇಷ್ಠ ಕಾರ್ಯವನ್ನು ಮಾಡುತ್ತಿರುವ ಕೆನರಾ ಬ್ಯಾಂಕ್‌ನ ಕಾರ್ಯ ಶ್ಲಾಘನೀಯವಾದುದು ಎಂದರು.  ಬ್ಯಾಂಕಿಂಗ್ ವ್ಯವಸ್ಥೆಯಲ್ಲಿ ಕೆನರಾ ಬ್ಯಾಂಕ್ ಮಾತ್ರ ಇಂತಹ ವಿಶೇಷ ಶಿಕ್ಷಣವನ್ನು ನೀಡುತ್ತಿದ್ದು, ದೇಶದಲ್ಲಿನ ನಿರುದ್ಯೋಗಿ ಕರ ಕುಶಲಕರ್ಮಿಗಳು ಇದರ ಪೂರ್ಣ ಲಾಭವನ್ನು ಪಡೆದು, ಆರ್ಥಿಕವಾಗಿ ಸ್ವಾವಲಂಬಿಗಳಾಗಬೇಕೆಂದು ಸಲಹೆ ನೀಡಿದರು. ರಾಜ್ಯಮಟ್ಟದ ಪ್ರಶಸ್ತಿಗಳನ್ನು ಗಳಿಸಿದ್ದಾರೆ ಎಂದು ಸಂಸ್ಥೆಯ ನಿರ್ದೇಶಕ ವೆಂಕಟೇಶ ಶೇಷಾದ್ರಿ ತಿಳಿಸಿದರು. ಈ ವೇಳೆ ರವೀಂದ್ರನಾಥ್, ಪ್ರಕಾಶ್ ಕಿಣಿ, ಶ್ರೀನಿವಾಸಮೂರ್ತಿ ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.