ಕ್ಷೀಣಿಸುತ್ತಿರುವ ತಿಳಿವಳಿಕೆ ಮಟ್ಟ: ಜಿ.ವೆಂ. ವಿಷಾದ
ಬೆಂಗಳೂರು: ಇಂದಿನ ವಿರ್ದ್ಯ್ಙಾಗಳಿಗೆ ಸ್ವರ, ವ್ಯಂಜನ, ವ್ಯಾಕರಣಗಳ ಜ್ಞಾನವೇ ಇಲ್ಲದಂತಾಗಿದೆ. ಮಕ್ಕಳು ವ್ಯಾಕರಣದ ಬಗೆಗಿನ ಪ್ರಶ್ನೆಗೆ ಉತ್ತರ ಹೇಳಿದ್ದೇ ಆದರೆ ಶಿಕ್ಷಣ ಇಲಾಖೆಗೆ ಜ್ಞಾನಪೀಠ ಪ್ರಶಸ್ತಿ ಕೊಡಬಹುದು ಎಂದು ನಾಡೋಜ ಪ್ರೊ. ಜಿ.ವೆಂಕಟಸುಬ್ಬಯ್ಯ ಅಭಿಪ್ರಾಯಪಟ್ಟರು. ನಗರದ ಬಸವನಗುಡಿಯಲ್ಲಿರುವ ವಾಡಿಯಾ ಸಭಾಂಗಣದಲ್ಲಿ ಶನಿವಾರ ಸಪ್ನ ಬುಕ್ ಹೌಸ್ ಆಯೋಜಿಸಿದ್ದ 'ವಿರ್ದ್ಯ್ಙಾಮಿತ್ರ' ಹತ್ತು ಪುಸ್ತಕಗಳ ಸಂಗ್ರಹ ಬಿಡುಗಡೆ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಅಧ್ಯಾಪಕರ ತಿಳಿವಳಿಕೆ ಮಟ್ಟ ಕ್ರಮೇಣ ಕ್ಷೀಣಿಸುತ್ತಿದ್ದು ಜಾತಿ ಹಾಗೂ ಪ್ರದೇಶವಾರು ಅಧ್ಯಾಪಕರನ್ನು ನೇಮಿಸುವ ಮೂಲಕ ಶಿಕ್ಷಣ ಇಲಾಖೆ ಎಡವುತ್ತಿದೆ ಎಂದು ಅಭಿಪ್ರಾಯಪಟ್ಟರು.
ಕನ್ನಡ ಪುಸ್ತಕ ಪ್ರಾಧಿಕಾರದ ಅಧ್ಯಕ್ಷ ಡಾ. ಬಂಜಗೆರೆ ಜಯಪ್ರಕಾಶ್ ಮಾತನಾಡಿ, ಉನ್ನತ ವ್ಯಾಸಂಗಕ್ಕೆ ಅನುಕೂಲವಾಗುವಂತೆ ತಂತ್ರಜ್ಞಾನ, ವೈದ್ಯಕೀಯ, ಬಾಹ್ಯಾಕಾಶಕ್ಕೆ ಸಂಬಂಧಿಸಿದ ಪುಸ್ತಕಗಳು ಕನ್ನಡದಲ್ಲೇ ದೊರೆಯುವಂತಾಗಬೇಕು. ಇಲ್ಲವಾದರೆ ಹೊಸ ತಲೆಮಾರಿನವರು ಭಾಷಾ ವಿಕಲತೆಗೆ ಗುರಿಯಾಗುವ ಸಂಭವ ಎದುರಾಗುತ್ತದೆ ಎಂದು ಹೇಳಿದರು. ಶಿಕ್ಷಣ ತಜ್ಞ ಪ್ರೊ.ಜಿ.ಎಸ್. ಮುಡಂಬಡಿತ್ತಾಯ ಮಾತನಾಡಿ, ಭಾರತದಲ್ಲಿ ಶಿಕ್ಷಣ ಇದೆಯೇ ಹೊರತು ಭಾರತೀಯತೆ ನಾಶವಾಗಿದೆ ಎಂದು ವಿಷಾದ ವ್ಯಕ್ತಪಡಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

