ಬೆಂಗಳೂರು ಗ್ರಾಮಾಂತರ

ದೇಶಪ್ರೇಮ ಮೂಡಿಸಲು ಧ್ವಜಾರೋಹಣ ಆಂದೋಲನ

Published On :

ಮಾಗಡಿ: ಸಾರ್ವಜನಿಕರಲ್ಲಿ ದೇಶಪ್ರೇಮ ಕುರಿತು ಜಾಗೃತಿ ಮೂಡಿಸುವ ಉದ್ದೇಶದಿಂದಲೇ ದ್ವಜಾರೋಹಣ ಆಂದೋಲನ ನಡೆಸಲಾಗುತ್ತಿದೆ ಎಂದು ಹಿರಿಯ ಸ್ವಾತಂತ್ರ್ಯ ಹೋರಾಟಗಾರ ಎಚ್.ಎಸ್.ದೊರಸ್ವಾಮಿ ತಿಳಿಸಿದರು.
ಮಾಗಡಿ ತಾಲೂಕಿನ ಗುಡೇಮಾರನಹಳ್ಳಿಯಲ್ಲಿ ವಿವಿಧ ಸಂಘ, ಸಂಸ್ಥೆಗಳ ಸಹಯೋಗದಲ್ಲಿ ಏರ್ಪಡಿಸಿದ್ದ, ತ್ರಿವರ್ಣ ಧ್ವಜಾರೋಹಣ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡುತ್ತಾ ದೇಶದ ಭಾಷೆಯ ಬಗ್ಗೆ ನಿರ್ಲಕ್ಷ್ಯ ಧೋರಣೆ ವಹಿಸಿರುವ ಯುವ ಪೀಳಿಗೆಯಲ್ಲಿ ಈಗಿನಿಂದಲೇ ತ್ರಿವರ್ಣ ದ್ವಜದ ಜನಜಾಗೃತಿ ಮೂಡಿಸುವ ಧ್ವಜಾರೋಹಣ ಆಂದೋಲನ ಸಹಕಾರಿಯಾಗಲಿದೆ. ಹಿರಿಯರ ಸ್ವಾತಂತ್ರ್ಯ ಹೋರಾಟಗಾರರ ಹೋರಾಟ, ಪೂರ್ವಿಕರು ಹಾಕಿಕೊಟ್ಟ ದಾರಿಯಲ್ಲಿ ನಾವೆಲ್ಲರೂ ಸಾಗಬೇಕು. ಈ ನಿಟ್ಟಿನಲ್ಲಿ ದೇಶಕ್ಕೆ ಮಾದರಿಯಾಗಿ ನಿಲ್ಲಬೇಕಿದೆ ಎಂದರು.
ಲೋಕಮಾನ್ಯ ಸಂಘದ ಪ್ರಧಾನ ಕಾರ್ಯದರ್ಶಿ ಡಿ.ಎನ್.ವೆಂಕಟರಮಣಯ್ಯ ಮಾತನಾಡಿ ಗ್ರಾಮೀಣ ಭಾಗದ ಜನತೆ ರಾಜಕೀಯ ಪಕ್ಷಗಳ ಹಿಡಿತಕ್ಕೆ ಸಿಲುಕಿದ್ದು, ಜಾತಿ, ಧರ್ಮದ ಹೆಸರಿನಲ್ಲಿ ರಾಜಕೀಯ ಮಾಡುತ್ತಿದ್ದಾರೆ. ಯುವಕರಲ್ಲಿ ದೇಶಪ್ರೇಮ, ದೇಶಭಕ್ತಿಯ ಪ್ರಜ್ಞೆ ಮೂಡಿಸುವ ಕೆಲಸವಾಗುತ್ತಿಲ್ಲ. 2016ಕ್ಕೆ ಧ್ವಜಾರೋಹಣದ ಶತಮಾನೋತ್ಸವ ಆಚರಿಸಲು ತಿರ್ಮಾನಿಸಲಾಗಿದ್ದು, ಈ ನಿಟ್ಟಿನಲ್ಲಿ ದೇಶಾಭಿಮಾನ, ಐಕ್ಯತಾ ಮನೋಭಾವ ಯುವಕರಲ್ಲಿ ಮೂಡಿಸುವ ಕೆಲಸವಾಗಬೇಕಿದೆ. ವಿವಿಧ ಸಂಘ, ಸಂಸ್ಥೆಗಳು ಸಾರ್ವಜನಿಕರಲ್ಲಿ ಧ್ವಜ, ದೇಶಪ್ರೇಮ, ದೇಶಭಕ್ತಿಯ ಬಗ್ಗೆ ಜನ ಜಾಗೃತಿಗೊಳಿಸುವ ಕೆಲಸ ನಿರಂತರವಾಗಿ ನಡೆಯಬೇಕಿದೆ ಎಂದು ಹೇಳಿದರು.
ಪೋಟೋ ಫೈಲ್  16ಕೆಎಂಎಜಿ4 ಮಾಗಡಿ ತಾಲೂಕಿನ ಗುಡೇಮಾರನಹಳ್ಳಿಯಲ್ಲಿ ವಿವಿಧ ಸಂಘ, ಸಂಸ್ಥೆ ಪದಾಧಿಕಾರಿಗಳು ತ್ರಿವರ್ಣ ಧ್ವಜಾ ಹಿಡಿದು ಧ್ವಜಾಂದೋಲನ ನಡೆಸಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.