ಬೆಂಗಳೂರು ಗ್ರಾಮಾಂತರ

ಅಂಬೇಡ್ಕರ್ ಸಮಾಜ ಸುಧಾರಕ

Published On :

ಚನ್ನಪಟ್ಟಣ  ದೇಶದ ಶೇ.90 ರಷ್ಟು ಜನತೆ ಅಂಬೇಡ್ಕರ್‌ರನ್ನು ಸಂಕುಚಿತ ಭಾವನೆಯಲ್ಲಿ ಅರ್ಥೈಸಿಕೊಂಡ ಪರಿಣಾಮ ಇಂದು ಡಾ. ಅಂಬೇಡ್ಕರ್ ಒಂದು ಜಾತಿಗೆ ಸೀಮಿತ ಎಂಬಂತೆ ಬಿಂಬಿಸಲಾಗುತ್ತಿದೆ ಎಂದು ಬಿಎಸ್‌ಪಿ ರಾಜ್ಯಾಧ್ಯಕ್ಷ ಎನ್. ಮಹೇಶ್ ವಿಷಾದಿಸಿದರು.
ಇಲ್ಲಿನ ಕೆಎಸ್‌ಆರ್‌ಟಿಸಿ ಘಟಕದಲ್ಲಿ ಸಂಸ್ಥೆಯ ಪರಿಶಿಷ್ಟ ಜಾತಿ ಮತ್ತು ಪಂಗಡಗಳ ನೌಕರರು ಹಮ್ಮಿಕೊಂಡಿದ್ದ ಡಾ. ಅಂಬೇಡ್ಕರ್ ಜಯಂತಿ ಮತ್ತು ಕಲಾ ಉತ್ಸವವನ್ನು ಉದ್ಘಾಟಿಸಿ ಮಾತನಾಡಿ, ಮಾನವತಾ ವಾದದ ಕಲ್ಪನೆ ಹೊಂದಿದ್ದ ಅಂಬೇಡ್ಕರ್ ಸಮಾಜದಲ್ಲಿನ ಜಾತಿ, ಮತ, ಮೇಲು ಕೀಳು ಭಾವನೆಗಳನ್ನು ತೊಡೆದು ಹಾಕಲು ಶ್ರಮಿಸಿದ ಮಹಾನ್ ಸಮಾಜ ಸುಧಾರಕ ಎಂದರು.
 ಕಾರ್ಯಕ್ರಮದಲ್ಲಿ ಸಾಹಿತಿ ಹಾಗೂ ಬೆಂಗಳೂರು ಮಹಾನಗರ ಸಾರಿಗೆ ನಿಗಮದ ನಿವೃತ್ತ ನಿರ್ದೇಶಕರು (ಹಣಕಾಸು) ಹಾಗೂ ಆರ್ಥಿಕ ಸಲಹೆಗಾರರು ಆದ ಡಾ.ಮೂಡ್ನಾಕೂಡು ಚಿನ್ನಸ್ವಾಮಿಗೆ ಸಾರಿಗೆ ಸಾಹಿತ್ಯ ರತ್ನ ಪ್ರಶಸ್ತಿಯನ್ನು ಪ್ರದಾನ ಮಾಡಿ ಸನ್ಮಾನಿಸಲಾಯಿತು.
ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ, ರಾಮನಗರ ವಿಭಾಗದ ವಿಭಾಗೀಯ ನಿಯಂತ್ರಣಾಧಿಕಾರಿ ಎನ್.ಪ್ರಕಾಶ್‌ಬಾಬು, ಕೆ.ಎಸ್.ಆರ್.ಟಿ.ಸಿ. ಅಧಿಕಾರಿಗಳಾದ ಸೋಮಶೇಖರ್, ಸಿದ್ದಪ್ಪ, ಮಂಜುನಾಥ್, ಜಿಲ್ಲಾ ಪತ್ರಕರ್ತರ ಸಂಘದ ಪ್ರಧಾನ ಕಾರ್ಯದರ್ಶಿ ಲಕ್ಷ್ಮೀಪತಿ, ಕುನ್ನಯ್ಯ, ಕೆ.ಟಿ.ನಾರಾಯಣ, ಜ್ಯೋತಿ ಮಣಿರತ್ನಂ, ವೆಂಕಟಾಚಲಯ್ಯ, ದೇವರಾಜು ಅರಸು, ಜೆ.ದೇವರಾಜು, ಎಂ.ಡಿ.ವೆಂಕಟೇಶ್ ಮುಂತಾದವರು ಉಪಸ್ಥಿತರಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.