ಕನ್ನಡ ಕಟ್ಟಾಳು ನಾರಾಯಣಸ್ವಾಮಿ ನಿಧನ
ದೊಡ್ಡಬಳ್ಳಾಪುರ: ಇಲ್ಲಿನ ಶಾಂತಿನಗರದ ಕನ್ನಡದ ಕಟ್ಟಾಳು ನಾರಾಯಣಸ್ವಾಮಿ (61) ಶನಿವಾರ ನಿಧನರಾಗಿದ್ದಾರೆ.
ಕನ್ನಡಪರವಾದ ಅನೇಕ ಹೋರಾಟಗಳಲ್ಲಿ ನಿರಂತರವಾಗಿ ತಮ್ಮನ್ನು ತೊಡಗಿಸಿಕೊಂಡಿದ್ದ ಅವರು, ದೊಡ್ಡಬಳ್ಳಾಪುರದಲ್ಲಿ ಕನ್ನಡ ಚಲನಚಿತ್ರಗಳ ಪ್ರದರ್ಶನಕ್ಕೆ ಒತ್ತು ನೀಡಿ ನಡೆದ ಹೋರಾಟವೊಂದರಲ್ಲಿ ತಮ್ಮ ಒಂದು ಕಣ್ಣಿಗೆ ತೀವ್ರ ಪೆಟ್ಟುತಿಂದಿದ್ದರು. ತೆಲುಗು ಭಾಷೆಯ ಚಲನಚಿತ್ರಗಳ ಅಬ್ಬರ ನಿಗ್ರಹಿಸಿ ಕನ್ನಡ ಚಳವಳಿಯ ಪ್ರಭಾವ ಹೆಚ್ಚಿಸುವಲ್ಲಿ ಅವರ ಪಾತ್ರ ಹಿರಿದು.ಇಲ್ಲಿನ ಭುವನೇಶ್ವರಿ ಕನ್ನಡ ಸಂಘ ಸೇರಿದಂತೆ ಕೆಲ ಸಂಘಟನೆಗಳ ನಿಕಟ ಸಂಪರ್ಕ ಹೊಂದಿದ್ದ ಅವರ ನಿಧನಕ್ಕೆ ಶ್ರೀಭುವನೇಶ್ವರಿ ಕನ್ನಡ ಸಂಘ, ತಾಲೂಕು ಡಾ.ರಾಜ್ಕುಮಾರ್ ಅಭಿಮಾನಿಗಳ ಸಂಘ,
ಪುನೀತ್ ರಾಜ್ಕುಮಾರ್ ಅಭಿಮಾನಿಗಳ ಸಂಘ ಸೇರಿದಂತೆ ಅನೇಕ ಕನ್ನಡಪರ ಸಂಘಟನೆಗಳು, ಗಣ್ಯರು
ಸಂತಾಪ ಸೂಚಿಸಿದ್ದಾರೆ.
ನೇತ್ರದಾನ: ನಾರಾಯಣಸ್ವಾಮಿ ಮರಣಾನಂತರ ತಮ್ಮ ಕಣ್ಣುಗಳನ್ನು ದಾನ ಮಾಡಿದ್ದಾರೆ. ಇಲ್ಲಿನ ಅಭಿಷೇಕ್ ನೇತ್ರಧಾಮದ ವೈದ್ಯರು ಮೃತರ ಕಣ್ಣುಗಳನ್ನು ದಾನ ಪಡೆದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

