ಬೆಂಗಳೂರು ಗ್ರಾಮಾಂತರ

ಮಾಗಡಿ ಠಾಣೆಯಲ್ಲಿ ಸಂದರ್ಶಕರ ಕೊಠಡಿ

Published On :

ಮಾಗಡಿ: ಜಿಲ್ಲೆಯಲ್ಲಿಯೇ ಪ್ರಪ್ರಥಮವಾಗಿ ಮಾಗಡಿ ಪೊಲೀಸ್ ಠಾಣೆ ಆವರಣದಲ್ಲಿ ಸಂದರ್ಶಕರ ಕೊಠಡಿಯನ್ನು ನಿರ್ಮಿಸಲು ಅಗತ್ಯ ಕ್ರಮ ಕೈಗೊಳ್ಳಲಾಗಿದೆ ಎಂದು ಜಿಲ್ಲಾ ಎಸ್ಪಿ ಅನುಪಮ ಅಗರವಾಲ್ ತಿಳಿಸಿದರು.
 ಅವರು ಮಾಗಡಿ ಪೊಲೀಸ್ ಠಾಣೆ ಆವರಣದಲ್ಲಿ ಸುಮಾರು 10 ಲಕ್ಷ ರು. ವೆಚ್ಚದಲ್ಲಿ ನೂತನವಾಗಿ ನಿರ್ಮಿಸಲಾಗಿರುವ ಸಂದರ್ಶಕರ ಕೊಠಡಿ ಉದ್ಘಾಟಿಸಿ ಮಾತನಾಡಿ, ರಾಮನಗರ ಜಿಲ್ಲೆಯಿಂದ ಮಾಗಡಿ ಕ್ಷೇತ್ರ ದೂರದಲ್ಲಿದೆ. ನಾಗರಿಕರು ತಮ್ಮ ಕಷ್ಟ ಸುಖಗಳನ್ನು ಬಗ್ಗೆ ಚರ್ಚಿಸಲು ಮತ್ತು ತಮ್ಮ ಸಮಸ್ಯೆಗಳನ್ನು ಬಗೆಹರಿಸಿಕೊಳ್ಳಲು ಜಿಲ್ಲಾ ಪೊಲೀಸ್ ಕೇಂದ್ರಕ್ಕೆ ಬರಲು ತುಂಬ ತೊಂದರೆಯಾಗುತ್ತಿತ್ತು. ಈ ನಿಟ್ಟಿನಲ್ಲಿ  
ಪ್ರಪ್ರಥಮವಾಗಿ ಮಾಗಡಿಯಲ್ಲಿ ಉತ್ತಮವಾದ ಸಂದರ್ಶಕರ ಕೊಠಡಿ ನಿರ್ಮಿಸಿದ್ದು, ನಾಗರಿಕರಿಗೆ ಅನುಕೂಲ ಕಲ್ಪಿಸಲಾಗಿದೆ. ನಾಗರಿಕರು ಈ ಸೌಲಭ್ಯವನ್ನು ಸದ್ಬಳಕೆ ಮಾಡಿಕೊಳ್ಳುವ ಮೂಲಕ ಎಲ್ಲರಂತೆ ಸಮಾಜದಲ್ಲಿ ನೆಮ್ಮದಿಯ ಜೀವನ ಸಾಗಿಸಲು ಸಹಕಾರಿಯಾಗಿದೆ ಎಂದರು.
ಮರಳು ದಂಧೆಗೆ ಕಡಿವಾಣ: ತಾಲೂಕಿನಲ್ಲಿ ಅವ್ಯಾಹತವಾಗಿ ನಡೆಯುತ್ತಿದ್ದ ಅಕ್ರಮ ಮರಳು ದಂಧೆಗೆ, ಅಕ್ರಮ ಚಟುವಟಿಕೆಗಳಿಗೆ ಕಡಿವಾಣ ಹಾಕಲಾಗಿದೆ ಎಂದು ಎಸ್ಪಿ ತಿಳಿಸಿದರು.
ಡಿವೈಎಸ್ಪಿ ರಾಮಲಿಂಗಪ್ಪ ಮಾತನಾಡಿ ಜಿಲ್ಲೆಯಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡಿಕೊಂಡು ಬರಲಾಗಿದೆ. ಪೊಲೀಸ್ ಸಿಬ್ಬಂದಿಗಳು ಸಹ ಉತ್ತಮ ರೀತಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ನಾಗರಿಕರು ತಮ್ಮ ದೂರು ದುಮ್ಮಾನಗಳನ್ನು ಪೊಲೀಸ್ ಠಾಣೆಗೆ ನೀಡುವ ಮೂಲಕ ಕಾನೂನು ರೀತ್ಯ ರಕ್ಷಣೆ ಪಡೆಯಬಹುದು. ನಾಗರಿಕರ ರಕ್ಷಣೆಗೆ ಪೊಲೀಸ್ ಇಲಾಖೆ ಸದಾ ಬದ್ಧವಾಗಿದೆ ಎಂದರು.
ಸರ್ಕಲ್ ಇನ್ಸ್‌ಪೆಕ್ಟರ್ ಎ.ಯಲಗಯ್ಯ, ಪಿಎಸ್‌ಐಗಳಾದ ಧರ್ಮೇಗೌಡ, ಜಗದೀಶ್, ಲೋಹಿತ್, ಪುರಸಭಾ ಉಪಾಧ್ಯಕ್ಷ ಎಚ್.ಆರ್. ಮಂಜುನಾಥ್, ಸದಸ್ಯ ನಾಗೇಂದ್ರ, ತಾ.ಪಂ. ಮಾಜಿ ಅಧ್ಯಕ್ಷ ಜಿ. ಕೃಷ್ಣ, ದಲಿತ ಮುಖಂಡ ಕಲ್ಕೆರೆ ಶಿವಣ್ಣ, ಕಾರ್ತೀಕ್, ಮೂರ್ತಿ, ಸದಾಶಿವಯ್ಯ, ನಿರ್ಮಿತಿ ಕೇಂದ್ರದ ಎಂಜಿನಿಯರ್ ಗೋವಿಂದರಾಜು, ನಿರಂಜನ್ ಮತ್ತು ನಾಗರಿಕರು ಹಾಗೂ ಪೊಲೀಸ್ ಸಿಬ್ಬಂದಿಗಳು ಹಾಜರಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.