ರಸ್ತೆ ಅವ್ಯವಸ್ಥೆ ಸರಿಪಡಿಸಲು ಹತ್ತು ದಿನಗಳ ಗಡುವು
ಹೊಸಕೋಟೆ ರಾಷ್ಟ್ರೀಯ ಹೆದ್ದಾರಿಯ ಪ್ರವಾಸಿ ಮಂದಿರ ವೃತ್ತ ಒಳಗೊಂಡಂತೆ ನಾನಾ ಸ್ಥಳಗಳಲ್ಲಿನ ಅವ್ಯವಸ್ಥೆ ಸರಿಪಡಿಸಲು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಹಾಗೂ ಲ್ಯಾನ್‌ಕೊ ಸಂಸ್ಥೆಗೆ ಹತ್ತು ದಿನಗಳ ಗಡುವು ನೀಡಲಾಗಿದೆ ಎಂದು ತಾಲೂಕು ವಕೀಲರ ಸಂಘದ ಅಧ್ಯಕ್ಷ ಹರೀಂದ್ರ ಹೇಳಿದರು. ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದ ಪ್ರತಿಭಟನೆ ಕಾರ್ಯಕ್ರಮದಲ್ಲಿ ಮಾತನಾಡಿ, ಚತುಷ್ಪಥ ರಸ್ತೆ ನಿರ್ಮಾಣ ಕಾಮಗಾರಿ ಅವೈಜ್ಞಾನಿಕವಾಗಿದ್ದು, ಪ್ರತಿದಿನ ಅಪಘಾತಗಳು ಸಂಭವಿಸುತ್ತಿದೆ. ಇದುವರೆಗೆ 15ಕ್ಕೂ ಹೆಚ್ಚು ಮಂದಿ ಮೃತಪಟ್ಟಿದ್ದಾರೆ. ಒಪ್ಪಂದದ ನಿಯಮಗಳನ್ನು ಪಾಲಿಸದೆ, ಕಾಮಗಾರಿಯನ್ನೂ ಪೂರ್ಣಗೊಳಿಸದೆ ಟೋಲ್ ಸಂಗ್ರಹಿಸಲಾಗುತ್ತಿದೆ. ಕಾನೂನಿನಂತೆ ಟೋಲ್ ಸಂಗ್ರಹ ಘಟಕವನ್ನು 16 ಕಿಮೀ ವ್ಯಾಪ್ತಿಯ ಹೊರಗೆ ನಿರ್ಮಿಸಬೇಕು. ಆದರೆ, 10 ಕಿಮೀನಲ್ಲಿ ನಿರ್ಮಿಸಿದ್ದರೂ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳು ಕ್ರಮ ಕೈಗೊಳ್ಳುವಲ್ಲಿ ವಿಫಲವಾಗಿದ್ದಾರೆ ಎಂದು ದೂರಿದರು. ರಾಹೆ 4 ಮತ್ತು 207ನ್ನು ಸಂಪರ್ಕಿಸುವ ಪ್ರವಾಸಿ ಮಂದಿರ ವೃತ್ತದ ಬಳಿಯ ಮೇಲ್ಸೇತುವೆಯನ್ನು ವಿಸ್ತರಿಸಬೇಕಿತ್ತು. ಇಲ್ಲವೇ ಸುರಂಗ ಮಾರ್ಗ ಬೇಕಿತ್ತು. ಬಸ್ ನಿಲ್ದಾಣ ಮತ್ತು ಜನದಟ್ಟಣೆ ಹೆಚ್ಚಾಗಿರುವ ಶಾಲೆ ಕಾಲೇಜುಗಳ ಮುಂಭಾಗದ ರಸ್ತೆಯ ಎರಡೂ ಬದಿಯಲ್ಲಿ ಚರಂಡಿ ನಿರ್ಮಿಸಿ, ಸ್ಲ್ಯಾಬ್‌ಗಳನ್ನು ಹಾಕಬೇಕು. ಬಹಳಷ್ಟು ಕಡೆ ತೆರೆದ ಚರಂಡಿಯಲ್ಲಿ ಮಕ್ಕಳು ಬೀಳುತ್ತಿದ್ದಾರೆ. ಈ ಬಗ್ಗೆ 2-3ಬಾರಿ ಹೋರಾಟ ನಡೆಸಿ ಅಧಿಕಾರಿಗಳಿಗೆ ಸಮಸ್ಯೆಯ ತೀವ್ರತೆ ಬಗ್ಗೆ ಮನವರಿಕೆ ಮಾಡಿಕೊಟ್ಟಿದ್ದರೂ ಸರಿಪಡಿಸಲು ಮುಂದಾಗಿಲ್ಲ ಎಂದು ಆರೋಪಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

