ಗ್ರಾ.ಪಂಗಳು ಭ್ರಷ್ಟಾಚಾರದ ಕೂಪ
ಚನ್ನಪಟ್ಟಣ: ಗ್ರಾಮೀಣಾಭಿವೃದ್ಧಿಗೆ ಪೂರಕವಾಗಿ ಕೆಲಸ ಮಾಡಬೇಕಾದ ಗ್ರಾ.ಪಂಗಳು ಭ್ರಷ್ಟಾಚಾರದ ಕೂಪವಾಗಿ ಪರಿಣಮಿಸುವ ಮೂಲಕ ಹಳ್ಳಿಗಾಡಿನ ಅಭಿವೃದ್ಧಿಗೆ ಶಾಪವಾಗಿವೆ ಎಂದು ಆರೋಪಿಸಿ ರಾಜ್ಯ ರೈತಸಂಘದ ಕಾರ್ಯಕರ್ತರು ತಾ.ಪಂ ಕಚೇರಿಗೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಿದರು.ತಾ.ಪಂ ಕಚೇರಿಗೆ ಮುತ್ತಿಗೆ ಹಾಕಿದ ರೈತಸಂಘದ ಕಾರ್ಯಕರ್ತರು, ತಾಲೂಕಿನ ಗ್ರಾಮೀಣ ಪ್ರದೇಶದಲ್ಲಿ ಕುಡಿಯುವ ನೀರಿನ ಸಮಸ್ಯೆ ತೀವ್ರ ಗೊಂಡಿದೆ ಯಾದರೂ ಸಮಸ್ಯೆಯನ್ನು ಪರಿಹರಿಸುವಲ್ಲಿ ಗ್ರಾ.ಪಂ ಮತ್ತು ತಾಲೂಕು ಪಂಚಾಯಿತಿ ಉದಾಸೀನ ಧೋರಣೆ ತಳೆದಿದೆ ಇದರಿಂದಾಗಿ ಗ್ರಾಮೀಣ ಪ್ರದೇಶದಲ್ಲಿ ಕುಡಿಯುವ ನೀರಿಗಾಗಿ ಆಹಾಹಾರ ಮುಗಿಲು ಮುಟ್ಟಿದೆ ಎಂದು ಕಿಡಿಕಾರಿದರು.ಗ್ರಾ.ಪಂ ಸಿಬ್ಬಂದಿ ಹಳ್ಳಿಗಳ ಸಮಸ್ಯೆಯತ್ತ ಗಮನ ಹರಿಸುತ್ತಿಲ್ಲ, ಚುನಾಯಿತ ಪ್ರತಿನಿಧಿಗಳು ನರೇಗಾ ಯೋಜನೆಯಿಂದ ಹೊರ ಬರುತ್ತಿಲ್ಲ. ಹಳ್ಳಿ ಗಾಡಿನ ಸಮಸ್ಯೆ ದಿನದಿಂದ ದಿನಕ್ಕೆ ತೀವ್ರ ಗೊಳ್ಳುತ್ತಿದ್ದು ನಮ್ಮ ಸಮಸ್ಯೆಗಳಿಗೆ ಸ್ಪಂದಿಸುವ ಕೆಲಸವನ್ನು ಗ್ರಾ.ಪಂಗಳು ಮಾಡುತ್ತಿಲ್ಲ. ಇದಕ್ಕೆ ಪರಿಹಾರ ಸಿಗುವವರೆಗೆ ನಾವು ಸ್ಥಳದಿಂದ ಕದಲುವುದಿಲ್ಲ ಎಂದು ಪಟ್ಟುಹಿಡಿದರು.
ಶೌಚಾಲಯದಲ್ಲಿ ಅವ್ಯವಹಾರ: ತಾಲೂಕಿನ ಬಹುತೇಕ ಗ್ರಾ.ಪಂ ವ್ಯಾಪ್ತಿಯಲ್ಲಿ ಸಾಕಷ್ಟು ಅವ್ಯವಹಾರ ನಡೆದಿದ್ದು ಕೊಟ್ಟಿಗೆ ಮತ್ತು ಶೌಚಾಲಯ ವಿತರಣೆಯಲ್ಲಿ ಸಾಕಷ್ಟು ಅವ್ಯವಹಾರ ನಡೆದಿದ್ದು ಕೆಲವೆಡೆ ನರೇಗಾ ಕಾಮಗಾರಿಯಲ್ಲಿ ಎರಡೆರಡು ಬಿಲ್ಗಳನ್ನು ಮಾಡಿ ಸಾಕಷ್ಟು ಅವ್ಯವಹಾರ ನಡೆಸಲಾಗಿದೆ. ಈ ಬಗ್ಗೆ ಉನ್ನತ ಮಟ್ಟದ ತನಿಖೆ ನಡೆಯ ಬೇಕೆಂದು ಆಗ್ರಹಿಸಿದರು.
ವಾರದೊಳಗೆ ಸಭೆ: ಪ್ರತಿಭಟನಾ ಕಾರರೊಂದಿಗೆ ಮಾತನಾಡಿದ ತಾ.ಪಂ ಅಧಿಕಾರಿಗಳು ರೈತಸಂಘದ ಕಾರ್ಯಕರ್ತರು ಸಮಸ್ಯೆಗಳಿಗೆ ಸಂಬಂಧಿಸಿದಂತೆ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು ಮತ್ತು ತಾ.ಪಂ ಅಧಿಕಾರಿಗಳು ಹಾಗೂ ರೈತಸಂಘದ ಪದಾಧಿಕಾರಿಗಳ ಸಭೆ ಕರೆಯುವುದಾಗಿ ಭರವಸೆ ನೀಡಿದ ಬಳಿಕ ಪ್ರತಿಭಟನೆ ಹಿಂದಕ್ಕೆ ಪಡೆಯಲಾಯಿತು.
ಪ್ರತಿಭಟನೆಯಲ್ಲಿ ರೈತಸಂಘದ ವಿಭಾಗೀಯ ಉಪಾಧ್ಯಕ್ಷ ಎಂ.ರಾಮು, ಜಿಲ್ಲಾಧ್ಯಕ್ಷ ಕೆ.ಮಲ್ಲಯ್ಯ, ತಾಲೂಕು ಅಧ್ಯಕ್ಷ ರಾಮಕೃಷ್ಣಪ್ಪ, ಕಾರ್ಯಾಧ್ಯಕ್ಷ ಕೃಷ್ಣಪ್ಪ ಹೊನ್ನಾಯ್ಕನಹಳ್ಳಿ ಇನ್ನೂ ಮುಂತಾದವರು ಉಪಸ್ಥಿತರಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

