ಬೆಂಗಳೂರು ಗ್ರಾಮಾಂತರ

ವಿಚಾರಣೆ ನಡೆಸದೇ ಹಾಗೆಯೇ ವಾಪಸಾದ ಅಧಿಕಾರಿಗಳ ತಂಡ

Published On :

ನೆಲಮಂಗಲ: ಖಾಸಗಿಯವರು ಅಕ್ರಮವಾಗಿ ನಿರ್ಮಿಸಿರುವ ಬಡಾವಣೆಗಳ ಪರಿಶೀಲನೆ ನಡೆಸಲು ಬಂದಿದ್ದ ಉಪವಿಭಾಗಾಧಿಕಾರಿ ಮಂಜುನಾಥ್ ಮತ್ತು ಅಧಿಕಾರಿಗಳ ತಂಡ ಪ್ರಕರಣ ಲೋಕಾಯುಕ್ತ ನ್ಯಾಯಾಲಯದಲ್ಲಿ ವಿಚಾರಣೆಯಲ್ಲಿದೆ ಎಂಬ ವಿಚಾರವನ್ನು ತಿಳಿದು ಯಾವುದೇ ಪರಿಶೀಲನೆ ನಡೆಸದೆ ಹಿಂತಿರುಗಿದರು. ಅವರು  ಸೋಮವಾರ ತಾಲೂಕಿನ ಅರಿಶಿನಕುಂಟೆ ಗ್ರಾಮ ಪಂಚಾಯ್ತಿ ವ್ಯಾಪ್ತಿಯಲ್ಲಿ ನಿರ್ಮಾಣವಾಗಿರುವ ಕೆಲ ಬಡಾವಣೆಗಳನ್ನು ನಿರ್ಮಿಸಿರುವವರು ಕಂದಾಯ ಮತ್ತು ಪಂಚಾಯತ್ ರಾಜ್ ಇಲಾಖೆ ಹಾಗೂ ಯೋಜನಾಪ್ರಾಧಿಕಾರದ ನೀತಿ ನಿಯಮಗಳನ್ನು ಗಾಳಿಗೆ ತೂರಿದ್ದಾರೆ ಎಂದು ಆರೋಪಿಸಿ ಗ್ರಾಮದ ನಿವಾಸಿ ಮಾಹಿತಿ ಹಕ್ಕು ಕಾರ್ಯಕರ್ತ ವೆಂಕಟೇಶ್ ಉರುಫ್ ಆಂಟಿ ವೆಂಕಟೇಶ್ ಎಂಬುವರು ನೀಡಿದ್ದ ದೂರಿನ ಹಿನ್ನೆಲೆಯಲ್ಲಿ ಅಧಿಕಾರಿಗಳು ಪರಿಶೀಲನೆಗೆ ಮುಂದಾಗಿದ್ದರು.
ಅರಿಶಿನಕುಂಟೆ ಗ್ರಾಮದ ವಿವಿಧ ಸರ್ವೆ ನಂಬರ್ ಜಮೀನುಗಳಲ್ಲಿ ನಿವಾಸದ ಬಡಾವಣೆ ನಿರ್ಮಿಸಿದ್ದಾರೆ. ರಸ್ತೆ ಹಾಗೂ ಉದ್ಯಾನವನ ಮತ್ತು ಕಾಯ್ದಿರಿಸಿದ ಸ್ಥಳಗಳನ್ನು ಅಕ್ರಮವಾಗಿ ಖಾತೆ ಮಾಡಿ ಪರಭಾರೆ ಮಾಡಿದ್ದಾರೆಂದು  ಸರ್ಕಾರದ ಪ್ರಧಾನ ಕಾರ್ಯದರ್ಶಿ ಅವರು ಉಪವಿಭಾಗಾಧಿಕಾರಿ ಮಂಜುನಾಥ್ ಅವರಿಗೆ ಖುದ್ದಾಗಿ ಭೂಮಾಪನ ಮಾಡಿ ಸ್ಥಳ  ಪರಿಶೀಲನೆ ನಡೆಸಿ ವರದಿ ನೀಡುವಂತೆ ಆದೇಶ ನೀಡಿದ್ದರು. ಈ ಬಗ್ಗೆ ಪ್ರತಿಕ್ರಿಯಿಸಿದ ಉಪವಿಭಾಗಾಧಿಕಾರಿ ಮಂಜುನಾಥ್ ಈಗಾಗಲೇ ಸರ್ಕಾರದ ಒಂದು ಸಂಸ್ಥೆ ಪ್ರಕರಣವನ್ನು ವಿಚಾರಣೆ ಮಾಡುತ್ತಿದ್ದರೆ ಮತ್ತೊಬ್ಬರು ಪರಿಶೀಲಿಸಲು ಸಾಧ್ಯವಿಲ್ಲ. ಪ್ರಕರಣ ಲೋಕಾಯುಕ್ತದಲ್ಲಿರುವ ಬಗ್ಗೆ ತಮಗೆ ತಿಳಿದ ಮಾಹಿತಿಯನ್ನು ಸರ್ಕಾರಕ್ಕೆ ವರದಿ ನೀಡುತ್ತೇನೆಂದರು.
ವಾಪಸ್: ಅಕ್ರಮದ ಬಗ್ಗೆ ಸ್ಥಳ ಪರಿಶೀಲನೆ ನಡೆಸಲು ಬಂದಿದ್ದ ತಹಸೀಲ್ದಾರ್ ನರಸಿಂಹಮೂರ್ತಿ, ರಾಜಸ್ವ ನಿರೀಕ್ಷಕ ನಂಜಪ್ಪ, ಗ್ರಾಮಲೆಕ್ಕಾಧಿಕಾರಿ ರವಿಕುಮಾರ್ ಸೇರಿದಂತೆ ಹಲವು ಅಧಿಕಾರಿಗಳ ತಂಡ ಸ್ಥಳ ಪರಿಶೀಲನೆ ನಡೆಸದೆ ವಾಪಸ್ ಆಯಿತು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.