ದೇವನಹಳ್ಳಿ ತಾಲೂಕು ಹಾಲು ಒಕ್ಕೂಟ ನಿರ್ದೇಶಕರ ಪ್ರಥಮ ಸಭೆ
ದೇವನಹಳ್ಳಿ: ಹಾಲು ಒಕ್ಕೂಟ ಶಿಬಿರ ಕಚೇರಿಯಲ್ಲಿ ನೂತನ ನಿರ್ದೇಶಕ ಶ್ರೀನಿವಾಸ್ ಅಧ್ಯಕ್ಷತೆಯಲ್ಲಿ ಬುಧವಾರ ಪ್ರಥಮ ಸಭೆ ಆಯೋಜಿಸಲಾಗಿತ್ತು.ಈ ಸಂಧರ್ಭದಲ್ಲಿ ಶ್ರೀನಿವಾಸ್ ಮಾತನಾಡಿ ಬೆಂ.ಹಾಲು ಒಕ್ಕೂಟ ನಿರ್ದೇಶಕರ ಚುನಾವಣೆಯಲ್ಲಿ ಸಹಕಾರ ನೀಡಿದ ಎಲ್ಲ ಮತದಾರರನ್ನು ಅಭಿನಂದಿಸಿದರಲ್ಲದೆ ಮುಂದಿನ ದಿನಗಳಲ್ಲಿ ಎಲ್ಲ ಡೇರಿಗಳಲ್ಲಿ ಉತ್ತಮ ಗುಣಮಟ್ಟದ ಹಾಲು ಪೊರೈಕೆಯಾಗಬೇಕು. ಒಕ್ಕೂಟದಿಂದ ಎಲ್ಲ ರೀತಿಯ ಸಹಕಾರ ನೀಡುವುದಾಗಿ ತಿಳಿಸಿದರು. ಶಾಸಕ ಪಿಳ್ಳ ಮುನಿಶಾಮಪ್ಪ ಮಾತನಾಡಿ, ನಮ್ಮ ತಾಲೂಕಿನಲ್ಲಿ ಹಾಲು ಮತ್ತು ರೇಷ್ಮೆ ಉತ್ಪಾದನೆಯೇ ಮುಖ್ಯ ಕಸುಬಾಗಿದ್ದು, ಅವರ ಆರ್ಥಿಕ ಸ್ಥಿತಿ ಹೆಚ್ಚಾಗಬೇಕು ಎಂದರಲ್ಲದೆ ರೈತರಿಗೆ ಹಾಲು ಒಕ್ಕೂಟದಿಂದ ದೊರೆಯಬಹುದಾದ ಎಲ್ಲ ಸೌಲಭ್ಯ ಸಿಗಲು ಶಿಬಿರ ಕಚೇರಿಯ ಅಧಿಕಾರಿಗಳು ಮತ್ತು ಹಾಲು ಡೇರಿ ಅಧ್ಯಕ್ಷರು ಮತ್ತು ಕಾರ್ಯದರ್ಶಿ ಪ್ರಾಮಾಣಿಕವಾಗಿ ಕೆಲಸ ಮಾಡಬೇಕು ಎಂದರು. ಜಿಲ್ಲಾ ಪಂಚಾಯಿತಿ ಮಾಜಿ ಅಧ್ಯಕ್ಷ ಬಿ. ಮುನೇಗೌಡ ಮಾತನಾಡಿ, ತಾಲೂಕಿನ ಎಲ್ಲ ವ್ಯವಸಾಯ ಸೇವಾ ಸಹಕಾರ ಸಂಘಗಳಲ್ಲಿ ಹಸು ಕೊಳ್ಳಲು ರೈತರಿಗೆ ಕಡಿಮೆ ಬಡ್ಡಿ ದರದಲ್ಲಿ ಸಾಲ ಸೌಲಭ್ಯ ದೊರೆಯಬೇಕು ಎಂದರು. ವಿಶ್ವನಾಥಪುರ ಹಾಲು ಡೇರಿ ಅಧ್ಯಕ್ಷ ಎ. ಶಿವರಾಮಯ್ಯ, ಪಿಎಲ್ಡಿ ಬ್ಯಾಂಕ್ ಮಾಜಿ ಅಧ್ಯಕ್ಷ ವೀರಭದ್ರಪ್ಪ, ಗುರಪ್ಪ ಮಾತನಾಡಿದರು, ಸಮಾರಂಭದಲ್ಲಿ ಪಿಎಲ್ಡಿ ಬ್ಯಾಂಕ್ ಅಧ್ಯಕ್ಷ ಸಿ.ಮುನಿರಾಜು, ಜಿಡಿಎಸ್ ತಾಲೂಕು ಅಧ್ಯಕ್ಷ ಮುನಿಶಾಮಯ್ಯ, ಕಾರ್ಯದರ್ಶಿ ರವೀಂದ್ರ, ಶ್ರೀನಿವಾಸಮೂರ್ತಿ ಹಾಗೂ ನಾರಾಯಣಸ್ವಾಮಿ, ಶಿವಪ್ಪ, ಮಾಜಿ ಉಪಾಧ್ಯಕ್ಷನಾರಾಯಣಸ್ವಾಮಿ ಡಾ. ಗಂಗಯ್ಯ ಉಪಸ್ಥಿತರಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

