ಬಾಲಸುಬ್ರಮಣ್ಯಂ ವರದಿ ಪರಿಶೀಲನೆಗೆ ಕೋಡಿಹಳ್ಳಿ ಚಂದ್ರಶೇಖರ್ ಒತ್ತಾಯ
ಬೆಂಗಳೂರು : ಸರ್ಕಾರಿ ಭೂಮಿ ಅತಿಕ್ರಮಣಕ್ಕೆ ಸಂಬಂಧಿಸಿದಂತೆ ಬಾಲಸುಬ್ರಮಣ್ಯಂ ಅವರು ನೀಡಿರುವ ವರದಿಯನ್ನು ಪರಿಶೀಲಿಸಿ ಸೂಕ್ತ ರೀತಿಯಲ್ಲಿ ನ್ಯಾಯಾಲಯದಲ್ಲಿ ವಾದ ಮಂಡಿಸುವಂತೆ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ರಾಜ್ಯಾಧ್ಯಕ್ಷರಾದ ಕೋಡಿಹಳ್ಳಿ ಚಂದ್ರಶೇಖರ್ ಅವರು ಆಗ್ರಹಿಸಿದ್ದಾರೆ. ಬೆಂಗಳೂರಿನ ಪ್ರೆಸ್ಕ್ಲಬ್ನಲ್ಲಿ ನಡೆದ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ರಾಜ್ಯದಲ್ಲಿ ಸುಮಾರು 11,07,187 ಎಕರೆ ಪ್ರದೇಶ ಸರ್ಕಾರಿ ಭೂಮಿಯನ್ನು ಅನೇಕರು ಕಬಳಿಸಿದ್ದಾರೆ. ನೂರಾರು ವರ್ಷಗಳಿಂದ ಪರಂಪರಾಗತವಾಗಿ ಪ್ರದೇಶಗಳಲ್ಲಿ ವಾಸಮಾಡುತ್ತಿರುವ ಜನರು ಕೃಷಿ, ವ್ಯವಸಾಯ ಮಾಡುವ ಮೂಲಕ ಜೀವನ ನಡೆಸುತ್ತಿದ್ದಾರೆ. ಇವರಿಗೆ ಬೇಕಾದಂತಹ ಹಕ್ಕು ಮತ್ತು ಕಾನೂನು-ರಕ್ಷಣೆ ನೀಡುವಲ್ಲಿ ಸರ್ಕಾರ ವಿಫಲವಾಗಿದೆ. ಇದೇ ವಿಚಾರವಾಗಿ ಈ ಹಿಂದೆ ಬಾಲಸುಬ್ರಮಣ್ಯಂ ಅವರ ಅಧ್ಯಕ್ಷತೆಯ ಸರ್ಕಾರಿ ಜಮೀನುಗಳ ಸಂರಕ್ಷಣಾ ಕಾರ್ಯಪಡೆ ನೀಡಿದ್ದ ವರದಿಯು ಪೂರ್ವಗ್ರಹ ಪೀಡಿತವಾಗಿದ್ದು, ಈ ವರದಿಯನ್ನು ಸರ್ಕಾರ ಕೂಡಲೇ ಕೈಬಿಡಬೇಕು. ಅಲ್ಲದೆ ಬಾಲಸುಬ್ರಮಣ್ಯಂ ಅವರ ವರದಿಯನ್ನು ಪರಿಶೀಲಿಸಿ ಸೂಕ್ತವಾದ ರೀತಿಯಲ್ಲಿ ನ್ಯಾಯಾಲಯದಲ್ಲಿ ವಾದ ಮಂಡಿಸಬೇಕು ಎಂದು ಅವರು ಹೇಳಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

