ಬೆಂಗಳೂರು ಗ್ರಾಮಾಂತರ

ಕಡಿಮೆ ಮಳೆ: ಚುರುಕುಗೊಳ್ಳದ ಬಿತ್ತನೆ

Published On :

ದೇವನಹಳ್ಳಿ: ತಾಲೂಕಿನಲ್ಲಿ ಅಗತ್ಯಕ್ಕೆ ತಕ್ಕಷ್ಟು ಮಳೆ ಬಾರದ್ದರಿಂದ ಬಿತ್ತನೆ ಕಾರ್ಯ ಚುರುಕಾಗಿಲ್ಲ ಎಂದು ಸಹಾಯಕ ಕೃಷಿ ನಿರ್ದೇಶಕಿ ವಿನೋದಮ್ಮ ತಾಲೂಕು ಪಂಚಾಯಿತಿಯಲ್ಲಿ ನಡೆದ ಕೆಡಿಪಿ ಸಭೆಯಲ್ಲಿ ತಿಳಿಸಿದರು.
ಜೂ.15 ರವರೆಗೆ ವಾಡಿಕೆ ಮಳೆ 166.5 ಮಿಮೀ ಮಳೆ ಬರಬೇಕಿತ್ತು. ಆದರೆ, ಆಗಿದ್ದು, 126.98 ಮಿಮಿ ಮಾತ್ರವಾಗಿದೆ ಎಂದ ಅವರು, ರೈತರಿಗೆ ಅಗತ್ಯವಾದ ಬಿತ್ತನೆ ಬೀಜ ಮತ್ತು ರಸಗೊಬ್ಬರ ದಾಸ್ತಾನಿದೆ ಎಂದು ಹೇಳಿದರು.
ಮುಂದಿನ ದಿನಗಳಲ್ಲಿ ಮಳೆಯಾದರೆ ಅಲ್ಪಾವಧಿ ರಾಗಿ ಬಿತ್ತನೆ ಮಾಡಲು ರೈತರು ಮುಂದಾಗುವಂತೆ ಸಲಹೆ ನೀಡಬೇಕಾಗುತ್ತದೆ ಎಂದು ಶಾಸಕ ಪಿಳ್ಳಮುನಿಶಾಮಪ್ಪ ತಿಳಿಸಿದರು. ನರೆಗಾದಲ್ಲಿ ಸಾಕಷ್ಟು ಪ್ರಗತಿಯಾಗದೇ ಇರುವುದಕ್ಕೆ ಶಾಸಕರು ಅಸಮಾಧಾನ ವ್ಯಕ್ತಪಡಿಸಿದರು. ಶಿಕ್ಷಣ ಹಕ್ಕು ಕಾಯಿದೆ ಯೋಜನೆ ಅಡಿ ತಾಲೂಕಿನ 41 ಖಾಸಗಿ ಶಾಲೆಗಳಲ್ಲಿ 575 ಮಕ್ಕಳು ದಾಖಲಾಗಿದ್ದಾರೆ ಎಂದು ಕ್ಷೇತ್ರ ಶಿಕ್ಷಣ ಸಮನ್ವಯಾಧಿಕಾರಿ ರವಿಪ್ರಕಾಶ್ ತಿಳಿಸಿದರು. ತಾಲೂಕಿನಲ್ಲಿ 117 ಶಿಕ್ಷಕರ ಕೊರತೆ ಇದೆ ಎಂದೂ ಹೇಳಿದರು.
ವಿಜಯಪುರ ವೈದ್ಯಾಧಿಕಾರಿ ಡಾ.ರಮೇಶ್ ಮಾತನಾಡಿ, ಆಸ್ಪತ್ರೆಗೆ ಬರುವ ರೋಗಿಗಳಿಗೆ ಮತ್ತು ಪಕ್ಕದಲ್ಲೇ ಇರುವ ಕಾಲೇಜು ವಿದ್ಯಾರ್ಥಿಗಳ ಅನುಕೂಲಕ್ಕಾಗಿ ದೇವನಹಳ್ಳಿಗೆ ಬರುವ ಎಲ್ಲ ನಗರ ಸಾರಿಗೆ ವಾಹನಗಳು ಆಸ್ಪತ್ರೆವರೆಗೆ ಬರಬೇಕು ಎಂದು ಮನವಿ ಮಾಡಿದರು. ಇದಕ್ಕೆ ಸ್ಪಂದಿಸಿದ ಶಾಸಕರು, ಸಂಬಂಧಪಟ್ಟ ಅಧಿಕಾರಿಗಳ ಜೊತೆಗೆ ಮಾತನಾಡಿದರು.
ಪೂರ್ಣಗೊಳ್ಳದ ಭವನ: ದೇವನಹಳ್ಳಿಯಲ್ಲಿ ನಿರ್ಮಾಣವಾಗುತ್ತಿರುವ ಡಾ.ಅಂಬೇಡ್ಕರ್ ಭವನದ ಕಟ್ಟಡ ಕಾಮಗಾರಿ ಪ್ರಗತಿಯಲ್ಲಿದ್ದು, ಇದು ಪೂರ್ಣಗೊಳ್ಳಲು ಇನ್ನೂ 3 ಕೋಟಿ ಅಗತ್ಯವಿದೆ ಎಂದು ಲೋಕೋಪಯೋಗಿ ಇಲಾಖೆ ಅಧಿಕಾರಿಗಳು ತಿಳಿಸಿದರು.
ದೇವನಹಳ್ಳಿ ನಂದಿಬೆಟ್ಟ ರಸ್ತೆಯಲ್ಲಿ ನೂತನವಾಗಿ ನಿರ್ಮಾಣವಾಗಿರುವ ಸಹಾಯಕ ಪ್ರಾದೇಶಿಕ ಸಾರಿಗೆ ಅಧಿಕಾರಿಗಳ ಕಟ್ಟಡ ಪೂರ್ಣಗೊಂಡಿದ್ದು, ವಿದ್ಯುತ್ ಸಂಪರ್ಕ ಮತ್ತು ಕಚೇರಿ ಒಳಾಂಗಣ ಆಧುನೀಕರಿಸಬೇಕಾಗಿದೆ ಎಂದು ಪ್ರಾದೇಶಿಕ ಸಾರಿಗೆ ಅಧಿಕಾರಿ ತಿಮ್ಮರಾಯಪ್ಪ ತಿಳಿಸಿದರು.
ಸಭೆಯಲ್ಲಿ ತಾಲೂಕು ಪಂಚಾಯಿತಿ ಇಒ ಕೃಷ್ಣಪ್ಪ ಲೋಹಾರ್, ತಾಪಂ ಅಧ್ಯಕ್ಷೆ ರಾಧಿಕಾ ತ್ಯಾಗರಾಜ್, ಸ್ಥಾಯಿ ಸಮಿತಿ ಅಧ್ಯಕ್ಷ ನರಸಿಂಹಮೂರ್ತಿ, ಉಪಾಧ್ಯಕ್ಷ ಪಟಾಲಪ್ಪ, ತಿಪ್ಪಣ್ಣ, ಎಸಿಪಿ ಜಯಪ್ರಕಾಶ್ ಉಪಸ್ಥಿತರಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.