ಅಂಗನವಾಡಿ ಕಾರ್ಯಕರ್ತೆಯರ ಸಮಾಲೋಚನಾ ಸಭೆ
ಮಾಗಡಿ: ಅಂಗನವಾಡಿ ಮಕ್ಕಳನ್ನು ತಾವು ಹೆತ್ತ ಮಕ್ಕಳಂತೆ ಕಾರ್ಯಕರ್ತೆ, ಶಿಕ್ಷಕಿಯರು ಪಾಲನೆ ಮಾಡುವುದನ್ನು ಬೆಳೆಸಿಕೊಳ್ಳಬೇಕಿದೆ ಜಿಲ್ಲಾ ಪಂಚಾಯ್ತಿ ಸಾಮಾಜಿಕ ನ್ಯಾಯಾ ಸ್ಥಾಯಿ ಸಮಿತಿ ಅಧ್ಯಕ್ಷ ಎಂ.ಕೆ.ಧನಂಜಯ ಕರೆ ನೀಡಿದರು. ಅವರು ಇಲ್ಲಿನ ಡಾ.ಬಿ.ಆರ್. ಅಂಬೇಡ್ಕರ್ ಭವನದಲ್ಲಿ ಏರ್ಪಡಿಸಿದ್ದ ಅಂಗವಾಡಿ ಕಾರ್ಯಕರ್ತೆಯರ ಸಮಾಲೋಚನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಸಿಡಿಪಿಓ ಕೆಂಪಣ್ಣ ಮಾತನಾಡಿ ತಾಲೂಕಿನಲ್ಲಿ ಒಟ್ಟು 363 ಅಂಗನವಾಡಿ ಕೇಂದ್ರಗಳಿವೆ. ಇದರಲ್ಲಿ 63 ಮಿನಿ ಅಂಗನವಾಡಿ ಕೇಂದ್ರಗಳಿದ್ದು, ಸಮರ್ಪಕವಾಗಿ ಕಾರ್ಯನಿರ್ವಹಿಸುತ್ತಿವೆ. ಬಹುತೇಕ ಕಡೆ ಸ್ವಂತ ಕೇಂದ್ರಗಳಿಲ್ಲ, ಶೌಚಾಲಯಗಳಿಲ್ಲ,ಅಡುಗೆ ಕೋಣೆಗಳಿಲ್ಲ, ನಿರ್ವಹಣೆ ಕುರಿತು ಪ್ರಾಸ್ತಾವಿಕವಾಗಿ ತಿಳಿಸಿಕೊಟ್ಟರು. ಇದೇ ವೇಳೆ ಅಂಗನವಾಡಿ ಕೇಂದ್ರದ ಕಾರ್ಯಕರ್ತೆಯರು ತಮ್ಮ ಸಮಸ್ಯೆಗಳ ಕುರಿತು ಜಿ.ಪಂ. ಸಾಮಾಜಿಕ ನ್ಯಾಯ ಸ್ಥಾಯಿ ಸಮಿತಿ ಅಧ್ಯಕ್ಷ ಧನಂಜಯ ಅವರಲ್ಲಿ ತೋಡಿಕೊಂಡರು. ಸಮಸ್ಯೆಗೆ ಸ್ಪಂದಿಸುವ ಭರವಸೆ ನೀಡಿದರು. ಸಹಾಯಕ ಶಿಶು ಅಭಿವೃದ್ಧಿ ಯೋಜನಾಧಿಕಾರಿ ಮಾಲ, ಮೇಲ್ವಿಚಾರಕಿಯರಾದ ಮಂಜುಳ,ಅನಿತಾ, ಶಾಂತಮ್ಮ, ಸಾವಿತ್ರಿ, ಶಾರದ, ಜಯಲಕ್ಷ್ಮೀ, ಮಾನಮ್ಮ ಸೇರಿ ಅಂಗನವಾಡಿ ಕಾರ್ಯಕರ್ತೆಯರು ಹಾಜರಿದ್ದರು.
ಹೂಕುಂದ ಗ್ರಾಪಂ ನೂತನ ಅಧ್ಯಕ್ಷೆ ಸಬೀರ್ ಉನ್ನೀಸಾ
ಕನಕಪುರ: ಕನಕಪುರ ತಾಲೂಕು ಹೂಕುಂದ ಗ್ರಾಪಂ ನೂತನ ಅಧ್ಯಕ್ಷೆಯಾಗಿ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿ ಸಬೀರ್ ಉನ್ನೀಸಾ ಅವಿರೋಧವಾಗಿ ಆಯ್ಕೆಗೊಂಡಿದ್ದಾರೆ. 13 ಸದಸ್ಯ ಬಲದ ಗ್ರಾಮ ಪಂಚಾಯತ್ನಲ್ಲಿ ವಿರುದ್ಧವಾಗಿ ಯಾರೂ ನಾಮಪತ್ರ ಸಲ್ಲಿಸದ ಕಾರಣ ಅವಿರೋಧ ಆಯ್ಕೆ ನಡೆಯಿತು. ಚುನಾವಣಾಧಿಕಾರಿಗಳಾಗಿ ರೇಷ್ಮೆ ಕೃಷಿ ವಿಸ್ತರಣಾಧಿಕಾರಿ ಮಹೇಂದ್ರಕುಮಾರ್ ಕಾರ್ಯ ನಿರ್ವಹಿಸಿದರು. ಸಹಾಯಕ ಚುನಾವಣಾಧಿಕಾರಿಗಳಾಗಿ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಪರಶಿವಯ್ಯ ಕಾರ್ಯನಿರ್ವಹಿಸಿದರು. ನೂತನ ಅಧ್ಯಕ್ಷೆ ಸಬೀರ್ ಉನ್ನೀಸಾ ಅವರನ್ನು ಜಿಪಂ ಸದಸ್ಯ ಇಕ್ಬಾಲ್ ಹುಸೇನ್,ನಯಾಜ್, ಕಾಂಗ್ರೆಸ್ ಮುಖಂಡರಾದ ಕುಳ್ಳೀರೇಗೌಡ, ಮುನಿಹುಚ್ಚೇಗೌಡ, ಚಾಮರಾಜ, ಚಿನ್ನರಾಜು ಪಾಲ್ಗೊಂಡಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

