ಶ್ರೀರಂಗ ಯೋಜನೆಗೆ 6 ರಂದು ಸಿಎಂ ಸಿದ್ದರಾಮಯ್ಯ ಚಾಲನೆ
ರಾಮನಗರ: ತುಮಕೂರು ಜಿಲ್ಲೆಯ ಕುಣಿಗಲ್ ಮತ್ತು ರಾಮನಗರದ ಮಾಗಡಿ ತಾಲೂಕುಗಳಿಗೆ ಹೇಮಾವತಿಯಿಂದ ನೀರು ತುಂಬಿಸುವ ಶ್ರೀರಂಗ ಯೋಜನೆಗೆ ಮಾ.6ಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಚಾಲನೆ ನೀಡಲಿದ್ದಾರೆ.
ಯೋಜನೆಗೆ ಈಗಾಗಲೇ ರು.277 ಕೋಟಿ ಬಿಡುಗಡೆಯಾಗಿದ್ದು, ಟೆಂಡರ್ ಪ್ರಕ್ರಿಯೆಗೂ ಚಾಲನೆ ದೊರೆತಿದೆ. ಮಾಗಡಿಯಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಸಿದ್ದರಾಮಯ್ಯ ಜೊತೆ ಸಂಪುಟ ಸದಸ್ಯರನೇಕರು ಪಾಲ್ಗೊಳ್ಳಲಿದ್ದಾರೆ ಎಂದು ಸಂಸದ ಡಿ.ಕೆ.ಸುರೇಶ್ ತಿಳಿಸಿದ್ದಾರೆ.
ಕಣ್ವ ನಾಲೆಯ ಆಧುನೀಕರಣಕ್ಕೂ ಸರ್ಕಾರ ಒತ್ತು ನೀಡಿದೆ. ರಾಮನಗರ ತಾಲೂಕಿನ ಕಸಬಾ ಹೋಬಳಿಯ ಕುಡಿಯುವ ನೀರಿನ ಯೋಜನೆಗಳಿಗಳಿಗೆ ಇನ್ನು 6 ತಿಂಗಳಲ್ಲಿ ಒಪ್ಪಿಗೆ ದೊರೆಯಲಿದ್ದು, ಭವಿಷ್ಯದಲ್ಲಿ ಇಡೀ ರಾಮನಗರ ಜಿಲ್ಲೆ ನೀರಾವರಿ ಪ್ರದೇಶವಾಗಲಿದೆ ಎಂದು ಅವರು ಹೇಳಿದ್ದಾರೆ.
ಮಕ್ಕಳ ಭವಿಷ್ಯ ರೂಪಿಸಿ: ವಿಧಾನ ಪರಿಷತ್ ಸದಸ್ಯ ಪುಟ್ಟಣ್ಣ
ರಾಮನಗರ: ಶಿಕ್ಷಕರ ಜತೆ ಪೋಷಕರು ಕೈಜೋಡಿಸಿದರೆ ಮಾತ್ರ ವಿದ್ಯಾರ್ಥಿಗಳ ಭವಿಷ್ಯವನ್ನು ಉತ್ತಮವಾಗಿ ರೂಪಿಸಲು ಸಾಧ್ಯ ಎಂದು ವಿಧಾನ ಪರಿಷತ್ ಸದಸ್ಯ ಪುಟ್ಟಣ್ಣ ತಿಳಿಸಿದರು. ಬಿಡದಿಯ ಎಸ್.ಎಲ್.ಎನ್. ಪಬ್ಲಿಕ್ ಶಾಲೆಯಲ್ಲಿ ನಡೆದ ಶಾಲಾ ವಾರ್ಷಿಕೋತ್ಸವ ಸಮಾರಂಭ ಉದ್ಘಾಟಿಸಿ ಮಾತನಾಡಿದ ಅವರು, ಯಾಂತ್ರಿಕ ಬದುಕಿನ ಗೊಂದಲದಲ್ಲಿ ಪೋಷಕರು ತಮ್ಮ ಮಕ್ಕಳ ಭಿವಿಷ್ಯದ ಬಗ್ಗೆ ಗಮನ ನೀಡುತ್ತಿಲ್ಲ ಎಂದು ವಿಷಾದಿಸಿದರು. ಶಾಲೆಗೆ ಮಕ್ಕಳನ್ನು ಸೇರಿಸಿದರೆ ಸಾಲದು, ಮಕ್ಕಳ ವಿದ್ಯಾಭ್ಯಾಸದ ಕಡೆಗೆ ಪೋಷಕರು ಗಮನ ನೀಡಬೇಕು. ವಿದ್ಯಾರ್ಥಿಗಳು ಇಂದಿನ ಸ್ಪರ್ಧಾತ್ಮಕ ಜಗತ್ತಿನಲ್ಲಿ ಯಶಸ್ಸು ಗಳಿಸಬೇಕಾದರೆ ಶಿಸ್ತು, ಶ್ರದ್ಧೆಯನ್ನು ಮೈಗೂಡಿಸಿಕೊಂಡು ಸತತ ಅಭ್ಯಾಸ ನಡೆಸಬೇಕು ಎಂದರು. ಮಕ್ಕಳಿಗೆ ಬಾಲ್ಯದಿಂದಲೇ ಒಳ್ಳೆಯ ದಾರಿಯಲ್ಲಿ ನಡೆಯುವಂತೆ ಪ್ರೇರೇಪಿಸಬೇಕಾದ ಜವಾಬ್ದಾರಿ ಪೋಷಕರು ಮತ್ತು ಶಿಕ್ಷಕರದ್ದಾಗಿದೆ. ವಿದ್ಯಾರ್ಥಿಗಳು ಗುರುಹಿರಿಯರಿಗೆ ಗೌರವ ನೀಡಬೇಕು ಎಂದು ಗಂಗಾಧರಯ್ಯ ತಿಳಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

