ಇಂದು ಡಾ.ಬಾಬು ಜಗಜೀವನರಾಂ ಪುತ್ಥಳಿ ಅನಾವರಣ
ದೊಡ್ಡಬಳ್ಳಾಪುರ: ದೇಶದ ಮೊದಲ ಉಪಪ್ರಧಾನಿ, ಹಸಿರು ಕ್ರಾಂತಿಯ ಹರಿಕಾರ ಡಾ.ಬಾಬು ಜಗಜೀವನರಾಂ ಅವರ ಪುತ್ಥಳಿಯನ್ನು ನಗರಸಭೆ ಮತ್ತು ತಾಲೂಕು ಆಡಳಿತದ ನೇತೃತ್ವದಲ್ಲಿ ನಿರ್ಮಿಸಲಾಗಿದ್ದು, ಮಾ.2ರ ಭಾನುವಾರ ಉದ್ಘಾಟನಾ ಕಾರ್ಯಕ್ರಮ ಮತ್ತು ಜಗಜೀವನರಾಂ ಭವನದ ಶಂಕುಸ್ಥಾಪನೆ ನಡೆಯಲಿದೆ. ಕಳೆದ ಕೆಲ ವರ್ಷಗಳ ಹಿಂದೆ ನಗರಸಭೆಯಲ್ಲಿ ಕೈಗೊಂಡ ನಿರ್ಣಯದನ್ವಯ ಡಾ.ಅಂಬೇಡ್ಕರ್ ಪುತ್ಥಳಿಯ ಪಕ್ಕದಲ್ಲೇ ಜಗಜೀವನರಾಂ ಅವರ ಕಂಚಿಮ ಪುತ್ಥಳಿ ಸ್ಥಾಪಿಸಲಾಗಿದೆ. ಭಾನುವಾರ ನಡೆಯುವ ಪುತ್ಥಳಿ ಅನಾವರಣ ಕಾರ್ಯಕ್ರಮದಲ್ಲಿ ಕೇಂದ್ರ ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವ ವೀರಪ್ಪ ಮೊಯ್ಲಿ, ಮಾಜಿ ಸಚಿವೆ ಮೋಟಮ್ಮ, ಕೃಷಿ ಮತ್ತು ಬೆಂ.ಗ್ರಾ.ಜಿಲ್ಲಾ ಉಸ್ತುವಾರಿ ಮಂತ್ರಿ ಕೃಷ್ಣಬೈರೇಗೌಡ, ರಾಜ್ಯ ಸಮಾಜ ಕಲ್ಯಾಣ ಇಲಾಖೆ ಸಚಿವ ಎಚ್.ಆಂಜನೇಯ, ದೊಡ್ಡಬಳ್ಳಾಪುರ ಶಾಸಕ ಟಿ.ವೆಂಕಟರಮಣಯ್ಯ, ದೇವನಹಳ್ಳಿ ಶಾಸಕ ಪಿಳ್ಳಮುನಿಶಾಮಪ್ಪ ಸೇರಿದಂತೆ ಮಾದಾರ ಚನ್ನಯ್ಯ ಮಹಾ ಸ್ವಾಮೀಜಿಗಳು, ನಗರಸಭೆ ಮತ್ತು ಇತರ ಸ್ಥಳೀಯ ಸಂಸ್ಥೆಗಳ ಮುಖಂಡರು ಮತ್ತು ಚುನಾಯಿತ ಪ್ರತಿನಿಧಿಗಳು,ಅಧಿಕಾರಿಗಳು ಭಾಗವಹಿಸಲಿದ್ದಾರೆ.
ಸಂಗೀತ ಕಲಾನಿಧಿ ಆರ್.ಕೆ.ಶ್ರೀಕಂಠನ್‌ಗೆ ನುಡಿನಮನ
ದೊಡ್ಡಬಳ್ಳಾಪುರ : ಸಂಗೀತ ಕಲಾನಿಧಿ ಆರ್.ಕೆ.ಶ್ರೀಕಂಠನ್ ಅವರ ನುಡಿನಮನ ಕಾರ್ಯಕ್ರಮ ಇಲ್ಲಿನ ದೊಡ್ಡಬಳ್ಳಾಪುರ ಸಂಗೀತ ಸಭಾ ನೇತೃತ್ವದಲ್ಲಿ ದೇವಾಂಗ ಮಂಡಲಿ ಕಲ್ಯಾಣ ಮಂದಿರದಲ್ಲಿ ನಡೆಯಿತು. ಕಾರ್ಯಕ್ರಮದಲ್ಲಿ ಹಿರಿಯ ಪತ್ರಕರ್ತ ಪಿ.ಜಿ.ಸುಬ್ಬರಾವ್, ಆರ್‌ಕೆಎಸ್ ಅವರ ಬಹುಮುಖ ಪ್ರತಿಭೆಯ ಸೂಕ್ಷ್ಮ ಪರಿಚಯ ಮಾಡಿಕೊಟ್ಟರು. ಸಂಗೀತಕ್ಕಾಗಿಯೇ ಬದುಕು ಸವೆಸಿದ ಮಹಾನ್ ಕಲಾಪ್ರತಿಭೆ ಶ್ರೀಕಂಠನ್ ಯಾವತ್ತೂ ಪ್ರಶಸ್ತಿಗಳ ಹಿಂದೆ ಬಿದ್ದವರಲ್ಲ. ಸಂಗೀತದ ಬಹುವಿಧ ಪರಂಪರೆಯ ಸಾಕ್ಷಿಪ್ರಜ್ಞೆಗೆ ಅವರು ಉತ್ತಮ ಉದಾಹರಣೆ ಎಂದರು. ಸಭೆಯಲ್ಲಿ ರಾಜ್ಯ ರೇಷ್ಮೆ ಮಾರಾಟ ಮಂಡಲಿ ಮಾಜಿ ಅಧ್ಯಕ್ಷ ಕೆ.ಎಂ. ಹನುಮಂತರಾಯಪ್ಪ, ಹಿರಿಯ ವಕೀಲ ನಾರಾಯಣಪ್ಪ, ಸಂಗೀತ ವಿದುಷಿ ಶಾರದಾ ಶ್ರೀಧರ್, ಲಯನ್ಸ್ ಮಾಜಿ ಅಧ್ಯಕ್ಷ ಜಿ.ದೇವರಾಜ್, ಪಿ.ಎಸ್.ರಾಘವೇಂದ್ರ ಸೇರಿದಂತೆ ಅನೇಕ ಸಂಗೀತಾಸಕ್ತರು ಹಾಜರಿದ್ದರು.
ಸಂಗೀತ ಕಚೇರಿ: ಇದೇ ಸಂದರ್ಭದಲ್ಲಿ ಬೆಂಗಳೂರಿನ ವಿದುಷಿ ವಾರಿಜಾ ಅವರಂದ ಹಾಡುಗಾರಿಕೆ ನಡೆಯಿತು. ವಿದ್ವಾನ್ ಅಚ್ಯುತರಾವ್(ಪಿಟೀಲು), ವಿದ್ವಾನ್ ಶ್ರೀಹರಿ(ಮೃದಂಗ) ವಾದ್ಯ ಸಹಕಾರ ನೀಡಿದ್ದರು. ಪ್ರಾಂಶುಪಾಲ ರಾಮಚಂದ್ರ ಕಚೇರಿ ಪ್ರಾಯೋಜಿಸಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

