ಬೆಂಗಳೂರು ಗ್ರಾಮಾಂತರ

ರಾಮನಗರ, ಚನ್ನಪಟ್ಟಣದಲ್ಲಿ ಮಂಗಳಾ ಎಕ್ಸ್‌ಪ್ರೆಸ್ ನಿಲುಗಡೆ

Published On :

ರಾಮನಗರ: ಯಶವಂತಪುರ-ಕಣ್ಣೂರು ನಡುವೆ ಸಂಚರಿಸುವ ಮಂಗಳಾ ಎಕ್ಸ್‌ಪ್ರೆಸ್ ರೈಲು ಗಾಡಿಯು ಮಾ.7ರಿಂದ ರಾಮನಗರ ಮತ್ತು ಚನ್ನಪಟ್ಟಣದಲ್ಲಿ ನಿಲುಗಡೆ ನೀಡಲಿದೆ. ಇದರೊಂದಿಗೆ ಈ ಭಾಗದ ಜನರ ಬಹುದಿನಗಳ ಬೇಡಿಕೆ ಈಡೇರಿದಂತಾಗಿದೆ ಎಂದು ಕಾಂಗ್ರೆಸ್ ಮುಖಂಡ ರಘುನಂದನ್ ರಾಮಣ್ಣ ತಿಳಿಸಿದರು. ರಾಮನಗರ ಮತ್ತು ಚನ್ನಪಟ್ಟಣಗಳಲ್ಲಿ ಪ್ರಯಾಣಿಕರ ಸಂಖ್ಯೆ ದಿನೇ ದಿನೇ ಹೆಚ್ಚುತ್ತಿದ್ದು, ಪ್ರಯಾಣಿಕರ ಒತ್ತಡವನ್ನು ತಗ್ಗಿಸಲು ಉಭಯ ನಿಲ್ದಾಣಗಳಲ್ಲಿ ಹೆಚ್ಚುವರಿ ರೈಲುಗಳ ನಿಲುಗಡೆ ಅಗತ್ಯ. ಹಲವು ಹೋರಾಟಗಳು ನಡೆದಿದ್ದವು. ಸಂಸದ ಡಿ.ಕೆ. ಸುರೇಶ್ ಪ್ರಯತ್ನದ ಫಲವಾಗಿ ಮಂಗಳಾ ಎಕ್ಸ್‌ಪ್ರೆಸ್ ನಿಲುಗಡೆ ಅವಕಾಶ ದೊರೆತಿದೆ ಎಂದು ಅವರು ತಿಳಿಸಿದರು.  ಚನ್ನಪಟ್ಟಣ ಪಟ್ಟಣ ವ್ಯಾಪ್ತಿಯ ಎಲೆಕೇರಿ ಬಳಿ ಮೇಲ್ಸೇತುವೆ ನಿರ್ಮಾಣಕ್ಕೆ ಕೇಂದ್ರ ರೇಲ್ವೆ ಸಚಿವ ಮಲ್ಲಿಕಾರ್ಜುನ ಖರ್ಗೆ ರು.15 ಕೋಟಿ ಬಿಡುಗಡೆ ಮಾಡಿದ್ದಾರೆ. ಟಿಪ್ಪುನಗರ ವ್ಯಾಪ್ತಿಯಲ್ಲಿ ರೈಲ್ವೆ ಹಳಿಯ ಸುಮಾರು 2 ಕಿ.ಮೀ. ಉದ್ದಕ್ಕೆ ತಡೆಗೋಡೆ ನಿರ್ಮಿಸಿದ್ದರಿಂದ ಓಡಾಟಕ್ಕೆ ತೀವ್ರ ತೊಂದರೆ ಆಗಿತ್ತು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.