ಬೆಂಗಳೂರು ಗ್ರಾಮಾಂತರ

ಟೌನ್ ಬ್ಯಾಂಕ್‌ನಿಂದ ವಿದ್ಯಾರ್ಥಿಗೆ ಆರ್ಥಿಕ ನೆರವು ವಿತರಣೆ

Published On :

ಹೊಸಕೋಟೆ : ಪಟ್ಟಣದ ಟೌನ್ ಬ್ಯಾಂಕ್ ವತಿಯಿಂದ ಸದಸ್ಯರ ಮಕ್ಕಳಿಗೆ ಶಿಕ್ಷಣ ಪ್ರೋತ್ಸಾಹ ನಿಧಿಯಿಂದ ಉಚಿತ ಆಔಜ್ಗಿಕ ನೆರವು, ವಿದ್ಯಾರ್ಥಿ ವೇತನ ವಿತರಿಸಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ಬ್ಯಾಂಕ್ ಅಧ್ಯಕ್ಷ ಎಚ್.ಎ.ನಟರಾಜ್ 2006-07ನೇ ಸಾಲಿನಲ್ಲಿ ಪ್ರಾರಂಭಿಸಿದ ಈಯೋಜನೆಯಡಿ ಪ್ರಸಕ್ತ ಸಾಲಿನಲ್ಲಿ 110ಸದಸ್ಯರ ಮಕ್ಕಳಿಗೆ ಉನ್ನತ ಶಿಕ್ಷಣಕ್ಕೆ ಉಚಿತ ಆರ್ಥಿಕ ನೆರವು ಹಾಗೂ 12 ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ, ಎಸ್‌ಎಸ್‌ಎಲ್‌ಸಿ, ಪಿಯುಸಿ ಪರೀಕ್ಷೆಗಳಲ್ಲಿ ಹೆಚ್ಚು ಅಂಕ ಗಳಿಸಿದ 163 ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಸೇರಿದಂತೆ ಒಟ್ಟು 11.60 ಲಕ್ಷ ರು.ಗಳನ್ನು ವಿತರಿಸಲಾಗಿದೆ. ಇದುವರೆವಿಗೂ ಯೋಜನೆಯಡಿ ಸದಸ್ಯರ 1551 ಮಕ್ಕಳಿಗೆ 54.58ಲಕ್ಷ ರು.ಗಳನ್ನು ನೀಡಲಾಗಿದೆ. 2014ರ ಜನವರಿ ಅಂತ್ಯಕ್ಕೆ ಬ್ಯಾಂಕ್ 15322 ಸದಸ್ಯರನ್ನು ಹೊಂದಿದ್ದು ನಿವ್ವಳ ಲಾಭ ಗಳಿಸಿಕೊಂಡಿದೆ. ಸದಸ್ಯರ ಮಕ್ಕಳು ಶೈಕ್ಷಣಿಕ ಅಭಿವೃದ್ಧಿ ಹೊಂದಲು  ಅನುವಾಗುವಂತೆ ಈ ಸೌಲಭ್ಯ ಕಲ್ಪಿಸಲಾಗಿದೆ ಎಂದು ತಿಳಿಸಿದರು. ಇದೇ ಸಂದರ್ಭದಲ್ಲಿ ಬ್ಯಾಂಕಿನ ನಿರ್ದೇಶಕರಾದ ಮಾಲತಿ, ಪಿ. ಚೌಡಪ್ಪ, ಪಿ.ಎಸ್. ಮಂಜುನಾಥ್, ರಾಮಾಂಜಿನಿ, ಪ್ರಧಾನ ವ್ಯವಸ್ಥಾಪಕ ಶಂಕರಪ್ಪ ಉಪಸ್ಥಿತರಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.