ಬೆಂಗಳೂರು ಗ್ರಾಮಾಂತರ

ಉರ್ದು ಶಾಲೆಗೆ ಪ್ರತ್ಯೇಕ ಸ್ಥಳ ನೀಡಲು 'ಹೈ' ಆದೇಶ

Published On :

ಬೆಂಗಳೂರು: ಸೂಲಿಬೆಲೆಯ ಹಿರಿಯ ಪ್ರಾಥಮಿಕ ಕನ್ನಡ ಮಾಧ್ಯಮ ಶಾಲೆಯ ಆಟದ ಮೈದಾನದಲ್ಲಿನ ಉರ್ದು ಶಾಲೆಗೆ ಪ್ರತ್ಯೇಕ ಸ್ಥಳ ಒದಗಿಸುವಂತೆ ಬೆಂಗಳೂರು ಗ್ರಾಮಾಂತರ ಜಿಪಂ ಸಿಇಒಗೆ ಹೈಕೋರ್ಟ್ ಆದೇಶಿಸಿದೆ. ಉರ್ದು ಶಾಲೆಯ ಕಟ್ಟಡಕ್ಕೆ ಅವಕಾಶ ಕಲ್ಪಿಸಿದ ಕ್ರಮ ಪ್ರಶ್ನಿಸಿ ಎಸ್.ವೈ.ನಾಗರಾಜು ಎಂಬುವರು ಸಲ್ಲಿಸಿದ್ದ ಅರ್ಜಿ ವಿಚಾರಣೆ ಸಂದರ್ಭದಲ್ಲಿ ಖುದ್ದು ಹಾಜರಿದ್ದ ಬೆಂಗಳೂರು ಗ್ರಾಮಾಂತರ ಜಿಪಂ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗೆ ನ್ಯಾ.ವೇಣುಗೋಪಾಲಗೌಡ ಅವರಿದ್ದ ಏಕ ಸದಸ್ಯ ಪೀಠ ಈ ಆದೇಶ ನೀಡಿದೆ.  ಕನ್ನಡ ಮತ್ತು ಉರ್ದು ಶಾಲೆಯ ನಡುವೆ ಅನವಶ್ಯ ವಿವಾದ ಸೃಷ್ಟಿಸುತ್ತಿರುವ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಪೀಠ, ಇದನ್ನು ಭಾರತ-ಪಾಕಿಸ್ತಾನ ವಿವಾದದಂತೆ ಬಿಂಬಿಸುತ್ತಿರುವುದು ಸರಿಯಲ್ಲ. ರಾಜಕೀಯ ಬಿಟ್ಟು ನಿಮ್ಮ ಜವಾಬ್ದಾರಿ ನಿಭಾಯಿಸಿ ಎಂದು ಆದೇಶಿಸಿದೆ. ಸೂಲಿಬೆಲೆಯ ಹಿರಿಯ ಪ್ರಾಥಮಿಕ ಕನ್ನಡ ಮಾಧ್ಯಮ ಶಾಲೆಯಲ್ಲಿ ಸುಮಾರು 250 ವಿದ್ಯಾರ್ಥಿಗಳಿದ್ದಾರೆ. ಈ ಶಾಲೆಯ ಎರಡು ಕಟ್ಟಡಗಳಲ್ಲಿ ಉರ್ದು ಶಾಲೆಗೆ ಅವಕಾಶ ನೀಡಲಾಗಿತ್ತು. ಆದರೆ, ಉರ್ದು ಶಾಲೆಗೆ ಪ್ರತ್ಯೇಕ ಕಟ್ಟಡ ನಿರ್ಮಿಸುವಂತೆ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಇತ್ತೀಚೆಗೆ ಆದೇಶ ನೀಡಿದ್ದರು. ಈ ಹಿನ್ನೆಲೆಯಲ್ಲಿ ಶಾಲೆಯ ಆವರಣದಲ್ಲಿ ಕಟ್ಟಡ ನಿರ್ಮಿಸಲು ಯೋಜಿಸಲಾಗುತ್ತಿದೆ. ಇದಕ್ಕೆ ತಡೆ ನೀಡಬೇಕು ಎಂದು ಅರ್ಜಿದಾರರು ಕೋರಿದ್ದರು.

ತರಬೇತಿ ಕಾರ್ಯಕ್ರಮದ ಸಮಾರೋಪ
ರಾಮನಗರ:
ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ಜಿಲ್ಲಾ ಅಂಗವಿಕಲರ ಕಲ್ಯಾಣ ಇಲಾಖೆಯು ಸರ್ಕಾರದ ಯೋಜನೆಗಳನ್ನು ಗ್ರಾಮ ಮಟ್ಟದಲ್ಲಿ ವಿಕಲಚೇತನರಿಗೆ ತಲುಪಿಸಲು ಅನುವಾಗುವಂತೆ ಜಿಲ್ಲೆಯ ವಿವಿಧೋದ್ದೇಶ ಪುನರ್ವಸತಿ ಕಾರ್ಯಕರ್ತರು ಹಾಗೂ ಗ್ರಾಮೀಣ ಪುನರ್ವಸತಿ ಕಾರ್ಯಕರ್ತರಿಗೆ ಮಾ.1ರಿಂದ 5ರವರೆಗೆ ನಡೆದ ತರಬೇತಿ ಕಾರ್ಯಕ್ರಮದ ಸಮಾರೋಪ ಸಮಾರಂಭವು ಮಾ.5ರ ಸಂಜೆ 4ಕ್ಕೆ ಜಾನಪದ ಲೋಕದಲ್ಲಿ ನಡೆಯಲಿದೆ. ಜಿಲ್ಲಾಧಿಕಾರಿ ಡಾ. ವಿಶ್ವನಾಥ್, ಜಿ.ಪಂ. ಸಿಇಒ ಡಾ.  ವೆಂಕಟೇಶ್, ವಿಕಲಚೇತನರ ಹಾಗೂ ಹಿರಿಯ ನಾಗರೀಕರ ಸಬಲೀಕರಣ ಇಲಾಖೆಯ ನಿರ್ದೇಶಕ ಜಯವಿಭವಸ್ವಾಮಿ, ಅಂಗವಿಕಲರ ಅಧಿನಿಯಮದ ಜಾರಿ ನಿರ್ದೇಶನಾಲಯದ ಮಾಜಿ ಆಯುಕ್ತ ಕೆ.ಎಸ್.ರಾಜಣ್ಣ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಜಿಲ್ಲಾ ಉಪ ನಿರ್ದೇಶಕಿ ಚಂದ್ರ, ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿ ರಾಮಚಂದ್ರಯ್ಯ ಪಾಲ್ಗೊಳ್ಳುವರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.