'ಆರ್ಥಿಕ, ಶೈಕ್ಷಣಿಕವಾಗಿ ವಿಕಲಚೇತನರ ಸದೃಢಕ್ಕೆ ಯೋಜನೆ'
ರಾಮನಗರ: ವಿಕಲಚೇತರನ್ನು ಆರ್ಥಿಕ, ಸಾಮಾಜಿಕ ಹಾಗೂ ಶೈಕ್ಷಣಿಕವಾಗಿ ಸದೃಢಗೊಳಿಸುವ ನಿಟ್ಟಿನಲ್ಲಿ ವಿಕಲಚೇತನರ ಹಾಗೂ ಹಿರಿಯ ನಾಗರೀಕರ ಸಬಲೀಕರಣ ಇಲಾಖೆಯು ಹಲವಾರು ಯೋಜನೆಗಳನ್ನು ಹಮ್ಮಿಕೊಂಡಿದೆ ಎಂದು ಇಲಾಖೆಯ ನಿರ್ದೇಶಕ ಜಯವಿಭವಸ್ವಾಮಿ ಹೇಳಿದರು.
ವಿಕಲಚೇತರ ಹಾಗೂ ಹಿರಿಯ ನಾಗರೀಕರ ಸಬಲೀಕರಣ ಇಲಾಖೆ ಮತ್ತು ಸಮರ್ಥನಂ ಅಂಗವಿಕಲರ ಟ್ರಸ್ಟ್ನಿಂದ ಗ್ರಾಮೀಣ ಪುನರ್ವಸತಿ ಕಾರ್ಯಕರ್ತರ ಮತ್ತು ವಿವಿಧೋದ್ದೇಶ ಪುನರ್ವಸತಿ ಕಾರ್ಯಕರ್ತರಿಗೆ ಮಾ.1 ರಿಂದ 5ರವರೆಗೆ ಆಯೋಜಿಸಿದ್ದ ತರಬೇತಿ ಕಾರ್ಯಾಗಾರದ ಸಮಾರೋಪದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಅಂಗವಿಕಲತೆ ಆಕಸ್ಮಿಕವೇ ಹೊರತು ಶಾಪವಲ್ಲ. ಅಂಗವೈಕಲ್ಯವನ್ನು ಮೆಟ್ಟಿನಿಂತು ಸ್ವಾವಲಂಬಿ ಜೀವನ ನಡೆಸಲು ವಿಕಲಚೇತರು ಪಣ ತೊಡಬೇಕು. ಸರ್ಕಾರದ ಯೋಜನೆಗಳನ್ನು ಸದ್ಬಳಕೆ ಮಾಡಿಕೊಂಡು, ಆರ್ಥಿಕವಾಗಿ ಸದೃಢರಾಗುವ ಮೂಲಕ ಕುಟುಂಬ ವರ್ಗದ ಮೇಲೆ ಅವಲಂಬನೆಯಾಗದಂತೆ ಜೀವನ ನಡೆಸಬೇಕು ಎಂದು ಕರೆ ನೀಡಿದರು.
ಇಲಾಖೆಯ ಯೋಜನೆಗಳನ್ನು ಅರ್ಹ ಫಲಾನುಭವಿಗಳಿಗೆ ತಲುಪಿಸಲು ಅನುವಾಗುವಂತೆ ಗ್ರಾಮೀಣ ಪುನರ್ವಸತಿ ಕಾರ್ಯಕರ್ತರು ಹಾಗೂ ವಿವಿಧೋದ್ದೇಶ ಪುನರ್ವಸತಿ ಕಾರ್ಯಕರ್ತರಿಗೆ ತರಬೇತಿ ನೀಡಲಾಗಿದೆ. ತರಬೇತಿ ಹೊಂದಿದ ಕಾರ್ಯಕರ್ತರು ತರಬೇತಿ ವೇಳೆ ಪಡೆದ ಮಾಹಿತಿಯನ್ನು ತಮ್ಮ ಸೇವೆಯಲ್ಲಿ ಅಳವಡಿಸಿಕೊಂಡು, ಅರ್ಹರನ್ನು ಗುರುತಿಸಿ ಅವರಿಗೆ ಸರ್ಕಾರದ ಸೌಲಭ್ಯಗಳನ್ನು ದೊರಕಿಸಿಕೊಡುವರು ಎಂದು ವಿವರಿಸಿದರು.
ಇನ್ನು ಮುಂದೆ ಪ್ರತಿ 6 ತಿಂಗಳಿಗೊಮ್ಮೆ ಎಲ್ಲಾ ಜಿಲ್ಲೆಗಳಲ್ಲೂ ತರಬೇತಿ ಆಯೋಜಿಸಲಾಗುವುದು. ಆಡಳಿತವನ್ನು ಚುರುಕುಗೊಳಿಸುವ ಉದ್ದೇಶದಿಂದ ಆನ್ಲೈನ್ ವ್ಯವಸ್ಥೆ ಜಾರಿಗೆ ತರಲು ಚಿಂತನೆ ನಡೆಸಲಾಗಿದೆ. ವಿ.ಆರ್.ಡಬ್ಲ್ಯೂ. ಹಾಗೂ ಎಂ.ಆರ್.ಡಬ್ಲ್ಯೂ. ವ್ಯವಸ್ಥೆ ಬಲವರ್ಧಿಸುವ ಮೂಲಕ ಕಾರ್ಯಕರ್ತರಿಂದ ಗರಿಷ್ಟ ಸೇವೆ ಪಡೆದು, ಇಲಾಖೆಯನ್ನು ಸದೃಢಗೊಳಿಸಲಾಗುವುದು ಎಂದು ಜಯವಿಭವಸ್ವಾಮಿ ಹೇಳಿದರು.5 ದಿನಗಳ ಕಾರ್ಯಾಗಾರದಲ್ಲಿ ಕಾರ್ಯಕರ್ತರಿಗೆ ಕ್ಷೇತ್ರ ಪರಿಣಿತರು, ಮಾನಸಿಕ ತಜ್ಞರು ಸೇರಿದಂತೆ ಇನ್ನಿತರೆ ತರಬೇತಿ ನೀಡಲಾಗಿದೆ. ಕಾಯ್ದೆ ಕಾನೂನುಗಳ ಬಗ್ಗೆಯೂ ತಿಳಿವಳಿಕೆ ನೀಡಲಾಗಿದೆ ಎಂದು ಸಮರ್ಥನಂ ಸಂಸ್ಥೆಯ ನೋಡಲ್ ಅಧಿಕಾರಿ ಸತೀಶ್ ತಿಳಿಸಿದರು.
ಕಾರ್ಯಾಗಾರದಲ್ಲಿ 80 ಕಾರ್ಯಕರ್ತರು ತರಬೇತಿ ಪಡೆದರು. ಕಾರ್ಯಕರ್ತರ ಪರವಾಗಿ ಮಾಗಡಿಯ ಪಾಷಾ, ಜಯಮ್ಮ, ಸಂಘಟನೆಗಳ ಪರವಾಗಿ ಕೀರ್ತಿ ಮತ್ತಿತರರು ತಮ್ಮ ಅಭಿಪ್ರಾಯ ಹಂಚಿಕೊಂಡು ಕಾರ್ಯಕರ್ತರಿಗೆ ಬೇಕಿರುವ ಅಗತ್ಯ ಸೌಲಭ್ಯಗಳ ಬಗ್ಗೆ ನಿರ್ದೇಶಕರ ಗಮನ ಸೆಳೆದರು.
ಕಾರ್ಯಕ್ರಮದಲ್ಲಿ ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿ ಕೆ.ರಾಮಚಂದ್ರಯ್ಯ, ಅಂಗವಿಕಲರ ಅಧಿನಿಯಮ ಜಾರಿ ಮಾಜಿ ಆಯುಕ್ತ ಕೆ.ರಾಜಣ್ಣ, ಸಮರ್ಥನಂ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕ ಮಹಂತೇಶ್ ಭಾಗವಹಿಸಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

