ಲೋಕಸಭಾ ಚುನಾವಣೆ: ತಾಲೂಕು ಮಟ್ಟದ ಅಧಿಕಾರಿಗಳ ಸಭೆ
ಹೊಸಕೋಟೆ: ಲೋಕಸಾಭಾ ಚುನಾವಣೆ ಸಂಬಂಧ ಪೂರ್ವಸಿದ್ಧತೆಗಾಗಿ ತಾಲೂಕು ಕಚೇರಿ ಸಭಾಂಗಣದಲ್ಲಿ ತಾಲೂಕುಮಟ್ಟದ ಅಧಿತಾರಿಗಳ ಸಭೆ ನಡೆಯಿತು. ಸಹಾಯಕ ಚುನಾವಣಾಧಿಕಾರಿ ನಟರಾಜ್ ಮಾತನಾಡಿ ಯಾವುದೇ ಗೋಡೆಬರಹ, ಜಾಹಿರಾತು ಫಲಕ, ಪೋಸ್ಟರ್‌ಗಳನ್ನು ಕೂಡಲೇ ತೆಗೆದುಹಾಕಬೇಕು. ಸರಕಾರದ ಯೋಜನೆಗಳ ಬಗ್ಗೆ ಮಾಹಿತಿ ಒಳಗೊಂಡ ನಾಮಫಲಕಗಳನ್ನು ಚುನಾವಣೆ ಮುಗಿಯುವವರೆವಿಗೂ ಮುಚ್ಚಬೇಕು. ಪಟ್ಟಣ ವ್ಯಾಪ್ತಿಯಲ್ಲಿ ಪುರಸಭೆ ಮುಖ್ಯಾಧಿಕಾರಿ, ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಇಓ ಈ ಬಗ್ಗೆ ನಿಗಾವಹಿಸಬೇಕು. ಚುನಾವಣೆ ಘೋಷಣೆಗೊಂಡ ನಂತರ ಯಾವುದೇ ತರಹವಾದ ಜಾಹಿರಾತು ಫಲಕಗಳನ್ನು ಮಾತ್ರ ಪ್ರದರ್ಶಿಸಲು ಅವಕಾಶವಿರುವುದಿಲ್ಲ ಎಂದರು.
ಮಾ.19 ರಂದು ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ಪ್ರಾರಂಭಗೊಳ್ಳಲಿದ್ದು ನಂತರ ಚುನಾವಣಾಧಿಕಾರಿಗಳಿಂದ ಅನುಮತಿ ಪಡೆದವುಗಳನ್ನು ಮಾತ್ರ ಪ್ರದರ್ಶಿಸಬಹುದಾಗಿದೆ. ಯಾವುದೇ ರೀತಿಯ ಮತದಾರರನ್ನು ಓಲೈಸುವ ಪ್ರಸಂಗ, ನೀತಿ ಸಂಹಿತೆ ಉಲ್ಲಂಘನೆ ಪ್ರಕರಣಗಳು ಕಂಡುಬಂದಲ್ಲಿ ಕಾನೂನಿನ್ವಯ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಬೇಕು. ಅಧಿಕಾರಿಗಳು ಸಂಘರ್ಷಕ್ಕೆ ಅವಕಾಶ ನೀಡದೆ ಸೌಜ್ಯದಿಂದ ವರ್ತಿಸಬೇಕು ಎಂದರು.
ಇಓ ದ್ಯಾಮಪ್ಪ, ರಮೇಶ್‌ಕುಮಾರ್, ತಿಮ್ಮಯ್ಯ, ಶಂಕರನಾರಾಯಣ, ಅಂಬಿಕಾ, ಬಿಇಓ ಬೈಲಾಂಜಿನಪ್ಪ ಮುಂತಾದವರು ಇದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

