'ಮಕ್ಕಳಿಗೆ ಶಿಕ್ಷಣದೊಂದಿಗೆ ಜೀವನ ಮೌಲ್ಯ ಕಲಿಸಿ'
ವಿಜಯಪುರ: ಮಕ್ಕಳು ಪರೀಕ್ಷೆಗಳಲ್ಲಿ ಉತ್ತಮ ಅಂಕ ಪಡೆದು ಉತ್ತೀರ್ಣರಾಗುವ ಜತೆಯಲ್ಲಿ ಜೀವನ ಮೌಲ್ಯಗಳ ಬಗ್ಗೆ ಸಂಪೂರ್ಣ ಅರಿವು ಮೂಡಿಸಬೇಕು ಎಂದು ದೊಡ್ಡಬಳ್ಳಾಪುರ ಕೊಂಗಾಡಿಯಪ್ಪ ಕಾಲೇಜಿನ ಪ್ರಾಂಶುಪಾಲ ಮಹಾಬಲೇಶ್ವರ ಅಭಿಪ್ರಾಯಪಟ್ಟರು.
ಇಲ್ಲಿನ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪ್ರೌಢಶಾಲಾ ವಿಭಾಗದ ವಾರ್ಷಿಕೋತ್ಸವ ಉದ್ಘಾಟಿಸಿ ಮಾತನಾಡಿದರು. ಮಕ್ಕಳ ಸರ್ವತೋಮುಖ ಅಭಿವೃದ್ಧಿಗೆ ಸಹಾಯವಾಗಲೆಂದು ಸರ್ಕಾರ ನಾನಾ ಸೌಲಭ್ಯಗಳನ್ನು ನೀಡುತ್ತಿದ್ದು ಪೋಷಕರು ಇದನ್ನು ಅರಿತು ಮಕ್ಕಳನ್ನು ಸರ್ಕಾರಿ ಶಾಲೆಗೆ ಕಳುಹಿಸಿಕೊಡಬೇಕು ಎಂದರು.
ಬೆಂ.ಗ್ರಾ. ಜಿಲ್ಲಾ ಶಿಕ್ಷಣಾಧಿಕಾರಿ ರಂಗಪ್ಪ ಮಾತನಾಡಿ ವಿದ್ಯೆ ಒಬ್ಬರ ಸ್ವತ್ತಲ್ಲ, ಆಸಕ್ತಿ ವಹಿಸಿ ಯಾರು ಅಭ್ಯಾಸ ಮಾಡುವರೋ ಅವರಿಗೆ ವಿದ್ಯೆ ಒಲಿಯುತ್ತದೆ. ಶೈಕ್ಷಣಿಕ ಜೀವನದಲ್ಲಿ ಸೋಮಾರಿತನ ಇರಬಾರದು ಎಂದು ಕಿವಿ ಮಾತು ಹೇಳಿದರು. ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲ ಶಂಕರ್ಹೆಗಡೆ, ಪ್ರೌಢಶಾಲಾ ಉಪಪ್ರಾಂಶುಪಾಲ ಜಿ.ರಾಮಚಂದ್ರ, ಸಕ್ಕರೆ ಗೊಲ್ಲಹಳ್ಳಿ ಸರ್ಕಾರಿ ಪ್ರೌಢಶಾಲೆಯ ದಾಕ್ಷಾಯಿಣಿ, ಎಸ್ಡಿಎಂಸಿ ಅಧ್ಯಕ್ಷ ಆರ್.ದೇವರಾಜಪ್ಪ ಮಾತನಾಡಿದರು.
ಎಸ್ಡಿಎಂಸಿ ಸದಸ್ಯ ಮುನಿನಾರಾಯಣಪ್ಪ, ಚಿಕ್ಕನಹಳ್ಳಿಸುಬ್ಬಣ್ಣ, ಡಿ.ನಾರಾಯಣಸ್ವಾಮಿ , ಎಂ.ಶಿವರಾಂ, ಕೆ.ಮಂಜುನಾಥ್, ಪುರಸಭಾ ಸದಸ್ಯರಾದ ಭಾರತಿ ಮುನಿಕೃಷ್ಣಪ್ಪ, ಬಲಮುರಿ ಶ್ರೀನಿವಾಸ್, ಎಸ್.ಭಾಸ್ಕರ್ ಇದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

