ಬೆಂಗಳೂರು ಗ್ರಾಮಾಂತರ

ಕೃಷಿ ಉತ್ಸವ- ಕೃಷಿ ವಿಜ್ಞಾನ ಕೇಂದ್ರದಲ್ಲಿ ತಯಾರಿಸಿದ ವಸ್ತುಗಳ ಪ್ರದರ್ಶನ, ಮಾರಾಟ

Published On :

ದೇವನಹಳ್ಳಿ: ಬೆಂಗಳೂರು ಗ್ರಾಮಾಂತರ ಜಿಪಂ, ತಾಪಂ ಹಾಗೂ ಕೃಷಿ ಇಲಾಖೆ ಸಂಯುಕ್ತ ಆಶ್ರಯದಲ್ಲಿ ಕೃಷಿ ಉತ್ಸವ -2014 ಇಲ್ಲಿನ ಗುರುಭವನದಲ್ಲಿ ಶುಕ್ರವಾರ ಆಯೋಜಿಸಲಾಗಿತ್ತು. ಉತ್ಸವದಲ್ಲಿ ರೈತರಿಗೆ ಅಗತ್ಯವಾದ ಎಲ್ಲ ಮಾಹಿತಿಗಳಿರುವ ಕೃಷಿ ರಥದ ಸಂಚಾರದ ಮೂಲಕ ಅರಿವು ಮೂಡಿಸುವುದು, ವಿವಿಧ ಇಲಾಖೆಗಳ ಬಗ್ಗೆ ಮಾಹಿತಿ ನೀಡುವ ವಸ್ತು ಪ್ರದರ್ಶನ ಜೊತೆಯಲ್ಲಿ ಖಾಸಗಿ ಕಂಪನಿಗಳು ರೈತರಿಗಾಗಿ ರಿಯಾಯಿತಿ ದರದಲ್ಲಿ ಒದಗಿಸುವ ಉಪಕರಣಗಳು, ಔಷಧ ಸಿಂಪರಣೆ ಯಂತ್ರಗಳು, ನೇಗಿಲು ಹಾಗೂ ಇತರ ಮಾಹಿತಿ ನೀಡುವ ಹಾಡೋನಹಳ್ಳಿ ಕೃಷಿ ವಿಜ್ಞಾನ ಕೇಂದ್ರದಲ್ಲಿ ತಯಾರಿಸಿದ ವಸ್ತುಗಳ ಪ್ರದರ್ಶನ ಮತ್ತು ಮಾರಾಟ ನಡೆಯಿತು.
ಉತ್ಸವದಲ್ಲಿ ಕೃಷಿ ಇಲಾಖೆ, ಕೃಷಿ ವಿಶ್ವವಿದ್ಯಾನಿಲಯ, ಪಶುಪಾಲನಾ ಇಲಾಖೆ, ಮೀನುಗಾರಿಕೆ, ಜಲಾನಯನ, ತೋಟಗಾರಿಕೆ, ರೇಷ್ಮೆ ಇಲಾಖೆಗಳ ಅಧಿಕಾರಿಗಳು ಮಾಹಿತಿ ನೀಡುವ ಮತ್ತು ರೈತರೊಂದಿಗೆ ಸಂವಾದ ಕಾರ್ಯಕ್ರಮ ಸಹ ಆಯೋಜಿಸಲಾಗಿತ್ತು.
ತಹಸೀಲ್ದಾರ್ ಕೇಶವಮೂರ್ತಿ ಉದ್ಘಾಟಿಸಿ ರೈತರಿಗೆ ಕೃಷಿ ಮತ್ತು ಉಪಕಸುಬುಗಳ ಬಗ್ಗೆ ಮಾಹಿತಿ ನೀಡುವ ಇಂತಹ ಉತ್ಸವದಲ್ಲಿ ರೈತರು ಭಾಗವಹಿಸಿ ಆಧುನಿಕ ತಂತ್ರಜ್ಞಾನದ ಬಗ್ಗೆ ಅರಿವು ಪಡೆದು ವೈಜ್ಞಾನಿಕ ಪದ್ಧತಿ ಅಳವಡಿಸಿಕೊಂಡರೆ ಮಾತ್ರ ಕೃಷಿ ಉತ್ಸವ ಸಾರ್ಥಕವಾಗುತ್ತದೆ ಎಂದು ಹೇಳಿದರು.
ಜಂಟಿ ಕೃಷಿ ನಿರ್ದೇಶಕ ಕಚೇರಿಯ ನಿರ್ದೇಶಕ ಮಂಜಪ್ಪ ಹಾಗೂ ಕೃಷಿ ಇಲಾಖೆ ಸಹಾಯಕ ಕೃಷಿ ನಿರ್ದೇಶಕಿ ಬಿ.ಟಿ.ವಿನೋದಮ್ಮ ಕೃಷಿ ಉತ್ಸವದ ಉದ್ದೇಶಗಳ ಬಗ್ಗೆ ಮಾಹಿತಿ ನೀಡಿದರು.
ತಾಪಂ ಕಾರ್ಯ ನಿರ್ವಹಣಾಧಿಕಾರಿ ಕೃಷ್ಣಪ್ಪ ಲೋಹಾರ್ ಮಾತನಾಡಿದರು. ಹಾಡೋನಹಳ್ಳಿ ಕೃಷಿ ವಿಜ್ಞಾನ ಕೇಂದ್ರದ ಕೃಷಿ ವಿಜ್ಞಾನಿ ಪಾರ್ವತಿ, ಪದ್ಮಾವತಿ, ಡಾ.ಸವಿತ,ವಾಸಂತಿ ಮಾತನಾಡಿದರು. ಅಧ್ಯಕ್ಷತೆ ತೋಟಗಾರಿಕೆ ಇಲಾಖೆ ಹಿರಿಯ ಸಹಾಯಕ ನಿರ್ದೇಶಕಿ ಅಸ್ತನಾಜ್ ವಹಿಸಿದ್ದರು.  ಚೌಡರೆಡ್ಡಿ, ಮೀನುಗಾರಿಕೆ ಇಲಾಖೆ ಅಧಿಕಾರಿ ಆಶಾಲತ ಉಪಸ್ಥಿತರಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.