ರಕ್ತದಾನದ ಬಗ್ಗೆ ಯುವಕರಲ್ಲಿ ಜಾಗೃತಿ ಮೂಡಿಸಬೇಕಿದೆ: ಜಯದೇವ್
ಮಾಗಡಿ: ದಾನಗಳಲ್ಲಿ ಶ್ರೇಷ್ಠ ದಾನ ರಕ್ತದಾನ. ಅಪಘಾತದಂತಹ ಸಂದರ್ಭದಲ್ಲಿ ರಕ್ತದಾನ ಮಾಡುವುದರ ಮೂಲಕ ವ್ಯಕ್ತಿಯ ಜೀವ ಉಳಿಸಬಹುದು. ರಕ್ತದಾನದ ಬಗ್ಗೆ ಯುವಕರಲ್ಲಿ ಜಾಗೃತಿ ಮೂಡಿಸುವ ಕೆಲಸವಾಗಬೇಕಿದೆ ಎಂದು ರಾಜ್ಯ ಕಾರ್ಯಕಾರಿಣಿ ಸದಸ್ಯ ಆರ್. ಜಯದೇವ್ ಹೇಳಿದರು.
ಪಟ್ಟಣದ ಕನ್ನಿಕಾ ಮಹಲ್ನಲ್ಲಿ ವನಿತಾ ವೃಂದ ರಾಷ್ಟ್ರೋತ್ಥಾನ ರಕ್ತನಿಧಿ ಸಹಯೋಗದೊಂದಿಗೆ ಏರ್ಪಡಿಸಿದ್ದ ಸ್ವಯಂ ಪ್ರೇರಿತ ರಕ್ತದಾನ ಶಿಬಿರದಲ್ಲಿ ಮಾತನಾಡಿದ ಅವರು, ಯುವಕ, ಯುವತಿಯರು ದುಷ್ಚಟಗಳಿಂದ ದೂರ ಉಳಿಯಬೇಕು. ಉತ್ತಮ ಆಹಾರ ಸೇವನೆಯಿಂದ ಆರೋಗ್ಯವಂತರಾಗಿರಬೇಕು. ಮನಸ್ಸು ಮತ್ತು ಶರೀರವನ್ನು ಹತೋಟಿಯಲ್ಲಿ ಇಟ್ಟುಕೊಳ್ಳಬೇಕು. ಪ್ರತಿ 6 ತಿಂಗಳಿಗೊಮ್ಮೆ ಸ್ವಯಂ ಪ್ರೇರಿತರಾಗಿ ರಕ್ತದಾನ ಮಾಡುವುದರಿಂದ ದೇಹದಲ್ಲಿ ರೋಗನಿರೋಧಕ ಶಕ್ತಿ ವೃದ್ಧಿಯಾಗುತ್ತದೆ. ಸಂಭವನೀಯ ಹೃದಯಾಘಾತ ಕಡಿಮೆ, ಜೀವನಪೂರ್ತಿ ಆರೋಗ್ಯವಂತರಾಗಿ ಜೀವಿಸಬಹುದು ಎಂದು ಹೇಳಿದರು.
ವನಿತಾ ವೃಂದದ ಅಧ್ಯಕ್ಷೆ ನಿರ್ಮಲ ವೆಂಕಟಾಚಲಪತಿ ಅಧ್ಯಕ್ಷತೆ ವಹಿಸಿದ್ದು, ಸೇವೆಯ ಉಪಯುಕ್ತತೆಯನ್ನು ಸಮಾಜಕ್ಕೆ ಸಾಬೀತು ಪಡಿಸುವ ಮತ್ತು ಸಮಾಜದ ಋಣ ತೀರಿಸುವ ಇದೊಂದು ಅವಕಾಶ.ಈ ರಕ್ತದಾನದ ಪವಿತ್ರವಾದ ಅವಕಾಶವನ್ನು ಯುವಪೀಳಿಗೆ ಜೀವನದಲ್ಲಿ ಸದ್ಬಳಕೆ ಮಾಡಿಕೊಳ್ಳುವ ಮೂಲಕ ಸಮಾಜಮುಖಿಯಾಗಬೇಕು. ಈ ನಿಟ್ಟಿನಲ್ಲಿ ದೇಶಕ್ಕೆ ಕೊಡುಗೆಯಾಗಬೇಕಿದೆ ಎಂದರು. ರಾಷ್ಟ್ರೋತ್ಥಾನ ರಕ್ತನಿಧಿಯ ಡಾ. ಸವಿತಾ ಮಾತನಾಡಿ ರಕ್ತದಾನದ ಜನಜಾಗೃತಿ ಅತ್ಯಂತ ಅವಶ್ಯಕವಾಗಿದೆ. ಈ ನಿಟ್ಟಿನಲ್ಲಿ ವಿವಿಧ ಸಂಘಟನೆಗಳು ಜನಜಾಗೃತಿಗೊಳಿಸುವ ಮೂಲಕ ಸಮಾಜಕ್ಕೆ ಉತ್ತಮ ಸಂದೇಶ ರವಾನಿಸಬೇಕಿದೆ ಎಂದು ಹೇಳಿದರು.
ರಾಷ್ಟ್ರೋತ್ಥಾನ ರಕ್ತನಿಧಿ ಕ್ಯಾಂಪ್ಕೋ ಕೋಆರ್ಡಿನೇಟರ್ ಡಾ. ಸುಂದರ್ ರಕ್ತದಾನ ಕುರಿತು ಸಂಕ್ಷಿಪ್ತ ಮಾಹಿತಿ ನೀಡಿದರು. ಸುಮಾರು 120 ಮಂದಿ ತಲಾ 350 ಎಂ.ಎಲ್.ರಕ್ತದಾನ ಮಾಡಿದರು.
ಆರ್ಯ ವೈಶ್ಯ ಮಂಡಲಿ ಅಧ್ಯಕ್ಷ ಎಸ್.ಎನ್. ನಟರಾಜ್ ಶಿಬಿರ ಉದ್ಘಾಟಿಸಿದರು. ವನಿತಾ ವೃಂದದ ಕಾರ್ಯದರ್ಶಿ ಮೀನಾ ಮುನಿಯಪ್ಪ, ಉಪಾಧ್ಯಕ್ಷ ಶಶಿಕಲಾ ಪುಟ್ಟಸ್ವಾಮಿ, ಪಲ್ಲವಿ ರಾಮಚಂದ್ರಯ್ಯ, ಜಂಟಿ ಕಾರ್ಯದರ್ಶಿ ಶೋಭಾ, ಕೋಕಿಲಾ, ಪುಷ್ಪಾ, ಶ್ವೇತಾ ಈಶ್ವರ್, ಸಮಾಜ ಸೇವಕ ಎಸ್. ಸುನೀಲ್,ಕೆನರಾ ಬ್ಯಾಂಕ್ ವ್ಯವಸ್ಥಾಪಕ ನಟರಾಜು ಇತರರು ಇದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

