ಬೆಂಗಳೂರು ಗ್ರಾಮಾಂತರ

ಮಹಿಳಾ ಮೀಸಲು ದುರುಪಯೋಗ ಬೇಡ

Published On :

ದೊಡ್ಡಬಳ್ಳಾಪುರ: ಸಾಮಾಜಿಕ ಕ್ಷೇತ್ರದಲ್ಲಿ ಮಹಿಳಾ ಮೀಸಲು ದುರುಪಯೋಗವಾಗದಂತೆ ಎಚ್ಚರಿಕೆ ವಹಿಸುವ ಅಗತ್ಯವಿದೆ. ಸಾಂವಿಧಾನಿಕವಾಗಿ ಲಭ್ಯವಾಗುವ ಅವಕಾಶನ್ನು ಕಸಿದುಕೊಳ್ಳುವ ಅಧಿಕಾರ ಯಾರಿಗೂ ಇರುವುದಿಲ್ಲ ಎಂದು ಹಿರಿಯ ಸಿವಿಲ್ ನ್ಯಾಯಾಧೀಶ, ತಾಲೂಕು ಕಾನೂನು ಸೇವೆಗಳ ಸಮಿತಿ ಅಧ್ಯಕ್ಷ ಡಿ.ಪಿ. ಕುಮಾರಸ್ವಾಮಿ ಹೇಳಿದರು.
ಇಲ್ಲಿನ ತಾಲೂಕು ಕಾನೂನು ಸೇವೆಗಳ ಸಮಿತಿ, ವಕೀಲರ ಸಂಘ, ದಿ ಲೀಗಲ್ ಪ್ರೊಫೆಷನಲ್ಸ್ ಫೋರಂ, ಕಾರ್ಮಿಕ ಇಲಾಖೆ, ಸಿಮಿಜು ಕಾರ್ಪೋರೇಷನ್ ಇಂಡಿಯಾ ಲಿಮಿಟೆಡ್ ಸಹಯೋಗದಲ್ಲಿ ಮಹಿಳಾ
ದಿನಾಚರಣೆ ಅಂಗವಾಗಿ ನಡೆದ ಕಟ್ಟಡ ಕೂಲಿ ಕಾರ್ಮಿಕರ ಕಾನೂನು ಅರಿವು-ನೆರವು ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ಕಾರ್ಮಿಕರ ಸಂಕಷ್ಟ ಅರಿತ ಸರ್ಕಾರ ಅನೇಕ ಯೋಜನೆಗಳನ್ನು ರೂಪಿಸಿದೆ. ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕ ಕಲ್ಯಾಣ ಮಂಡಲಿ ನೆರವಿನಿಂದ ಹಲವು ಅನುಕೂಲತೆಗಳು ಲಭ್ಯವಾಗುತ್ತಿವೆ. ಸರ್ಕಾರದ ಸವಲತ್ತುಗಳನ್ನು ವ್ಯವಸ್ಥಿತವಾಗಿ ಬಳಸಿಕೊಳ್ಳಬೇಕು. ಸಂಕಷ್ಟಕ್ಕೆ ಪೂರಕವಾಗಿ ಉಪಯೋಗ ಮಾಡಿಕೊಂಡರೆ ಉತ್ತಮ.ದುಶ್ಚಟಗಳ ದಾಸ್ಯ ಒಳ್ಳೆಯದಲ್ಲ. ಮಕ್ಕಳಿಗೆ ವಿದ್ಯಾಭ್ಯಾಸ ಕೊಡುವುದು, ಹೆಣ್ಣು ಮಕ್ಕಳಿಗೆ ಸೂಕ್ತ ಅವಕಾಶಗಳನ್ನು ಕಲ್ಪಿಸುವುದು ಕಾನೂನು ಬದ್ಧ ಕರ್ತವ್ಯ. ಕಟ್ಟಡ ಕೂಲಿ ಕಾರ್ಮಿಕರು ಇಲಾಖೆಯಲ್ಲಿ ಹೆಸರು ನೋಂದಾಯಿಸಿ ಗುರುತಿನ ಚೀಟಿ ಪಡೆದುಕೊಳ್ಳುವುದು ಅನೇಕ ರೀತಿಯಲ್ಲಿ ಉಪಯೋಗವಾಗುತ್ತದೆ ಎಂದರು.
ಕೊಂಗಾಡಿಯಪ್ಪ ಕಾಲೇಜಿನ ಪ್ರಾಧ್ಯಾಪಕ ಪ್ರೊ.ಚಂದ್ರಪ್ಪ ಮಾತನಾಡಿ, ರೋಗಪೀಡಿತರಾಗುವ, ಸಾಮಾಜಿಕ ಸಂಕಷ್ಟಗಳಿಗೆ ಗುರಿಯಾಗುವ ಕಾರ್ಮಿಕರಿಗೆ ಗುರುತಿನ ಚೀಟಿ ನೆರವಾಗುತ್ತದೆ. ಅನೇಕ ಬಾರಿ ಆಕಸ್ಮಿಕ ಅಪಘಾತಗಳು ಸಂಭವಿಸಿದಾಗ, ವಿದ್ಯಾಭ್ಯಾಸದ ಉದ್ದೇಶಗಳಿಗೆ, ವಿದ್ಯಾ ಸಹಾಯಧನದ ಅಗತ್ಯಬಿದ್ದಾಗ, ವಿವಾಹ ಸಂದರ್ಭದಲ್ಲಿ ಅನೇಕ ಅನುಕೂಲತೆಗಳು ಲಭ್ಯವಾಗುತ್ತವೆ. ಮಹಿಳಾ ಫಲಾನುಭವಿಗಳಿಗೆ ಹೆರಿಗೆ ಭತ್ಯೆ ಸಹಿತ ಅನೇಕ ಸೌಲಭ್ಯಗಳು ಸಿಗುತ್ತವೆ. ಇದನ್ನು ಪಡೆಯಲು ಕಾರ್ಮಿಕರು ಕೆಲವು ನಿರ್ದಿಷ್ಟ ಅರ್ಹತೆಗಳನ್ನು ಹೊಂದಿರಬೇಕು. 60 ವರ್ಷದೊಳಗಿನ ಕಾರ್ಮಿಕರು ವರ್ಷದಲ್ಲಿ ಕನಿಷ್ಠ 90 ದಿನಗಳ ಕಾಲ ಕೆಲಸದಲ್ಲಿ
ತೊಡಗಿಕೊಂಡವರು ಕಾರ್ಮಿಕ ಇಲಾಖೆಯಲ್ಲಿ ನೋಂದಣಿ ಮಾಡಿಸಿಕೊಳ್ಳಬಹುದು. ಅಗತ್ಯ ದಾಖಲೆಗಳನ್ನು ಒದಗಿಸಿ ಗುರುತಿನ ಚೀಟಿ ಪಡೆದುಕೊಳ್ಳಿ ಎಂದು ಸಲಹೆ ನೀಡಿದರು.
ಸಿಮಿಜು ಕಾರ್ಪೋರೇಷನ್‌ನ ವ್ಯವಸ್ಥಾಪಕ ಅಭಿಜಿತ್ ಶಿಂಧೆ ಅಧ್ಯಕ್ಷತೆ ವಹಿಸಿದ್ದರು. ಪ್ರಧಾನ ಸಿವಿಲ್ ನ್ಯಾಯಾಧೀಶ ಎ. ನಾಗೀರೆಡ್ಡಿ, ಅಪರ ಸಿವಿಲ್ ನ್ಯಾಯಾಧೀಶ ಎಂ. ಗಣಪತಿ ಪ್ರಶಾಂತ್, ವಕೀಲರಾದ ರೇಣುಕಾಮೂರ್ತಿ, ಮೋಹನ್‌ಕುಮಾರ್, ಆರ್.ಕೇಶವಮೂರ್ತಿ, ಪ್ರಭಾಕರ ರಾಜು, ತಾಲೂಕು ಕಾರ್ಮಿಕ ಅಧಿಕಾರಿ ವೆಂಕಟೇಶ್ ಮತ್ತಿತರರು ಭಾಗವಹಿಸಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.