ಬೆಂಗಳೂರು ಗ್ರಾಮಾಂತರ

ಯಲಿಯೂರು ವ್ಯವಸಾಯ ಸೇವಾ ಸಹಕಾರ ಬ್ಯಾಂಕಿನ ಅಧ್ಯಕ್ಷ ರಾಘವೇಂದ್ರ

Published On :

ದೇವನಹಳ್ಳಿ: ದೇವನಹಳ್ಳಿ ತಾಲೂಕು ಯಲಿಯೂರು ಗ್ರಾಮದ ವ್ಯವಸಾಯ ಸೇವಾ ಸಹಕಾರ ಬ್ಯಾಂಕಿಗೆ ಸೋಮವಾರ ನಡೆದ ಅಧ್ಯಕ್ಷರ ಚುನಾವಣೆಯಲ್ಲಿ ಎಸ್. ತೆಲ್ಲೋಹಳ್ಳಿಯ ರಾಘವೇಂದ್ರ ಅಧ್ಯಕ್ಷರಾಗಿ ಚುನಾಯಿತರಾಗಿದ್ದಾರೆ ಎಂದು ಚುನಾವಣಾಧಿಕಾರಿಗಳಾದ ಲತಾ ಘೋಷಣೆ ಮಾಡಿದರು.
 ಈ ಬ್ಯಾಂಕಿನ ಚುನಾವಣೆಯಲ್ಲಿ ಎಸ್. ತೆಲ್ಲೋಹಳ್ಳಿಯ ರಾಘವೇಂದ್ರ ಮತ್ತು ಯಲಿಯೂರಿನ ಬಚ್ಚಣ್ಣ ಅಧ್ಯಕ್ಷ ಸ್ಥಾನಕ್ಕೆ ನಾಮ ಪತ್ರ ಸಲ್ಲಿಸಿದ್ದರು.  8 ನಿರ್ದೇಶಕರು ಮತ್ತು ಡಿಸಿಸಿ ಬ್ಯಾಂಕಿನ ಮೇಲ್ವಿಚಾರಕರು ಸೇರಿ ಒಂಬತ್ತು ಮಂದಿ ಮತದಾರರಿದ್ದು ಎಲ್ಲರೂ ಹಾಜರಿದ್ದರು. ಆದರೆ ಚುನಾವಣೆ ಸಂಧರ್ಭದಲ್ಲಿ ಒಬ್ಬರು ತಮ್ಮ ಮತ ಚಲಾಯಿಸದೆ ಮತಚೀಟಿಯನ್ನು ಹಾಗೆಯೇ ಮತಪೆಟ್ಟಿಗೆಯಲ್ಲಿ ಹಾಕಿದ್ದಾರೆ ಎನ್ನಲಾಗಿದೆ. ಮತಗಳ ಎಣಿಕೆ ನಂತರ ರಾಘವೇಂದ್ರ ಅವರಿಗೆ 5 ಮತಗಳು ಹಾಗೂ ಬಚ್ಚಣ್ಣ ಅವರಿಗೆ 3 ಮತಗಳು ಲಭ್ಯವಾಗಿದೆ. ನೂತನ ಅಧ್ಯಕ್ಷರಿಗೆ ಶಾಸಕ ಪಿಳ್ಳಮುನಿಶಾಮಪ್ಪ, ಪಿಎಲ್‌ಡಿ ಬ್ಯಾಂಕಿನ ಮಾಜಿ ಅಧ್ಯಕ್ಷ ಶ್ರೀರಾಮಯ್ಯ,
ತಾಲೂಕು ಸೊಸೈಟಿ ಅಧ್ಯಕ್ಷ ಗಂಗಾಧರ್, ಡಿಸಿಸಿ ಬ್ಯಾಂಕಿನ ನಿರ್ದೇಶಕ ಕಾರಹಳ್ಳಿ ದೇವರಾಜ್, ತಾಲೂಕು ವಕೀಲರ ಸಂಘದ ಅಧ್ಯಕ್ಷ ಎನ್. ಶ್ರೀನಿವಾಸಮೂರ್ತಿ ಅಭಿನಂದನೆ ಸಲ್ಲಿಸಿದರು. ಈ ಸಂದರ್ಭದಲ್ಲಿ ಗ್ರಾಮದ ಮುಖಂಡರಾದ ರಾಮಾಂಜಿನಪ್ಪ, ಹನುಮಂತಪ್ಪ ಹಾಗೂ ಆನಂದ್ ಭಾಗವಹಿಸಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.