ಗ್ರಾಮ ಜೀವನ ಕಲಿಸುವ ಪಾಠ ಅನನ್ಯ
ದೊಡ್ಡಬಳ್ಳಾಪುರ: ಗ್ರಾಮ ಜೀವನ ಕಲಿಸುವ ಪಾಠ ಅನನ್ಯ. ಬದುಕಿನ ಉತ್ಸಾಹವನ್ನು ಮತ್ತು ಸೋಲು-ಗೆಲವುಗಳ ಸಮನ್ವಯವನ್ನು ನಾವಿಲ್ಲಿ ಕಾಣಬಹುದು ಎಂದು ಕರ್ನಾಟಕ ಜನಪದ ಪರಿಷತ್ತಿನ ರಾಜ್ಯ ಸಂಚಾಲಕ ಡಾ.ಎಸ್.ಬಾಲಾಜಿ ಹೇಳಿದರು.
ತಾಲೂಕಿನ ಗೂಳ್ಯ ಗ್ರಾಮದಲ್ಲಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ ಘಟಕದ ನೇತೃತ್ವದಲ್ಲಿ ಆರಂಭವಾದ 7 ದಿನಗಳ ವಿಶೇಷ ಯುವಜನ ಸೇವಾ ಶಿಬಿರದ ಉದ್ಘಾಟನಾ ಸಮಾರಂಭದಲ್ಲಿ ಭಾಗವಹಿಸಿ ಅವರು ಮಾತನಾಡಿದರು.
ಇಂದಿನ ಯುವ ಜನಾಂಗ ಶ್ರಮಶಕ್ತಿಯಲ್ಲಿ ಆಸಕ್ತರಾಗಿಲ್ಲ. ಟಿವಿ ಮತ್ತು ಮೊಬೈಲ್ಗಳೇ ಜೀವನದ ಶಕ್ತಿಗಳೆಂದು ತಿಳಿದುಕೊಂಡಿದ್ದಾರೆ. ಇದರಿಂದ ಹಣ ಮತ್ತು ಸಮಯದ ವ್ಯಯ ಆಗುತ್ತಿದೆಯೇ ಹೊರತು ಬೇರೇನೂ ಅಲ್ಲ. ಈಗಲೂ ಗ್ರಾಮೀಣ ಭಾಗದ ಹಿರಿಯ ಜೀವಗಳು ಜೀವನಾನುಭವದ ಮಾದರಿ ರೂಪಗಳಾಗಿ ಗೋಚರಿಸುತ್ತಾರೆ. ಪ್ರಕೃತಿ ಸಹಜವಾಗಿ ಬರುವ ಅನುಭಾವಗಳು ಎಂದಿಗೂ ಪರಿಪೂರ್ಣವಾಗಿರುತ್ತವೆ ಎಂದರು. ಅಧ್ಯಕ್ಷತೆ ವಹಿಸಿದ್ದ ಪ್ರಾಂಶುಪಾಲ ಪ್ರೊ.ಎಸ್.ಪಿ.ರಾಜಣ್ಣ ಮಾತನಾಡಿ, ಕೆಲಸದಲ್ಲಿ ಕೀಳರಿಮೆ ಇರಬಾರದು. ವಿದ್ಯಾಭ್ಯಾಸದ ಜೊತೆಗೆ ಸಮಾಜ ಸ್ನೇಹಿಯಾದ ಕೆಲಸಗಳನ್ನು ಮಾಡುವ ಉತ್ಸಾಹ ಬೆಳೆಸಿಕೊಳ್ಳಬೇಕು. ಇದರಿಂದ ನಿರುದ್ಯೋಗ ಮತ್ತಿತರ ಸಮಸ್ಯೆಗಳ ನಿವಾರಣೆ ಸಾಧ್ಯ. ಗ್ರಾಮೀಣ ಪ್ರದೇಶದ ಜನಕ್ಕೆ ಆಲೋಚನೆಗಳನ್ನು ಬಿತ್ತುವ ಮೂಲಕ ನೈರ್ಮಲ್ಯ, ಶಿಕ್ಷಣ, ಆರೋಗ್ಯದ ಅರಿವು ಮೂಡಿಸಬೇಕು ಎಂದರು.
ಎಂಪಿಸಿಎಸ್ ಮಾಜಿ ಅಧ್ಯಕ್ಷ ದೇವರಾಜು, ಮಾಜಿ ನಿರ್ದೇಶಕ ಗೋಪಾಲರೆಡ್ಡಿ, ಪ್ರೊ.ಶ್ರೀನಿವಾಸ್, ಪ್ರೊ.ಸತೀಶ್, ಗಂಗರಾಜು, ಪ್ರವೀಣ್ ಮತ್ತಿತರರು ಹಾಜರಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

