ಜೆಡಿಎಸ್ ನಾಶಕ್ಕೆ ಬಿಜೆಪಿ-ಕಾಂಗ್ರೆಸ್ ಒಳಒಪ್ಪಂದ: ಎಚ್ಡಿಕೆ
ಕುಣಿಗಲ್: ಜೆಡಿಎಸ್ ಸರ್ವನಾಶ ಮಾಡಲು ಬಿಜೆಪಿ-ಕಾಂಗ್ರೆಸ್ ಒಳಒಪ್ಪಂದ ಮಾಡಿಕೊಂಡು, ಲೋಕಸಭೆ ಚುನಾವಣೆಯಲ್ಲಿ ಅಭ್ಯರ್ಥಿಗಳನ್ನು ಕಣಕ್ಕಿಳಿಸುತ್ತಿದ್ದಾರೆ. ಕನ್ನಡಿಗರು ಸ್ವಾಭಿಮಾನ ಸಂರಕ್ಷಣೆ ನಿಟ್ಟಿನಲ್ಲಿ ಒಬ್ಬ ಕನ್ನಡಿಗನನ್ನು ಪುನಃ ಪ್ರಧಾನಮಂತ್ರಿಯನ್ನಾಗಿಸುವ ನಿಟ್ಟಿನಲ್ಲಿ ಜೆಡಿಎಸ್ ಬೆಂಬಲಿಸುವಂತೆ ಮಾಜಿ ಸಿಎಂ ಕುಮಾರಸ್ವಾಮಿ ಕರೆ ನೀಡಿದರು.
ಬುಧವಾರ, ಬೆಂಗಳೂರು ಗ್ರಾಮಾಂತರ ಕ್ಷೇತ್ರದ ಚುನಾವಣೆಯ ರೂಪು ರೇಷೆಗಳನ್ನು ಚರ್ಚಿಸಲು ಪಕ್ಷದ ಮುಖಂಡರ ಸಭೆಯನ್ನು ಉದ್ಘಾಟಿಸಿ ಮಾತನಾಡಿ, ರಾಜ್ಯದಲ್ಲಿ 18 ಸ್ಥಾನಗಳಲ್ಲಿ ಜೆಡಿಎಸ್ ಗೆಲವು ಸಾಧಿಸಿದಲ್ಲಿ ದೇವೇಗೌಡರು ಪುನಃ ಪ್ರಧಾನಮಂತ್ರಿಯಾಗುವುದರಲ್ಲಿ ಅನುಮಾನವಿಲ್ಲ. ಹಿಂದೆ ಅವರು ಪ್ರಧಾನ ಮಂತ್ರಿಯಾಗಿ ಕೈಗೊಂಡ ಕ್ರಮದ ಫಲವಾಗಿ ಇಂದು ರಾಜ್ಯಕ್ಕೆ ಕೇಂದ್ರದಿಂದ ನೀರಾವರಿ ಯೋಜನೆ ಸೇರಿದಂತೆ ಇತರೆ ಯೋಜನೆಗಳಿಂದ ಹತ್ತುಸಾವಿರ ಕೋಟಿ ರು. ಅನುದಾನ ಬರುತ್ತಿದ್ದು, ರಸಗೊಬ್ಬರ ಸಬ್ಸಿಡಿ ಹೆಚ್ಚಿನ ರೀತಿಯಲ್ಲಿ ದೊರಕಿದೆ.
ಶೋಭೆ ತರುವುದಿಲ್ಲ: ಬಿಜೆಪಿ ನರೇಂದ್ರ ಮೋದಿಯವರನ್ನು, ಕಾಂಗ್ರೆಸ್ನವರು ರಾಹುಲ್ ಗಾಂಧಿಯವರನ್ನು ಪ್ರಧಾನಿಯಾಗಿಸಲು ಯತ್ನಿಸುತ್ತಿದ್ದಾರೆ. ಆದರೆ, ಜನಸಾಮಾನ್ಯರ ಸಮಸ್ಯೆಗಳನ್ನು ಬಗೆಹರಿಸುವ ಬಗ್ಗೆ ಯಾರೂ ಸ್ಪಷ್ಟ ನಿಲುವನ್ನು ಜನತೆಗೆ ನೀಡುತ್ತಿಲ್ಲ. ಇನ್ನು ರಾಜ್ಯದಲ್ಲಿನ ಕಾಂಗ್ರೆಸ್ ಸರ್ಕಾರವು ಸಾಧುವಲ್ಲದ ಹಲವು ನೀರಾವರಿಯೋಜನೆಗಳನ್ನು ಚುನಾವಣೆ ಮುಂದಿಟ್ಟುಕೊಂಡು ಘೋಷಣೆ ಮಾಡುತ್ತಾ ಜನತೆಗೆ ಮಂಕುಬೂದಿ ಎರಚುತ್ತಿದೆ. ಸಿಎಂ ಸಿದ್ದರಾಮಯ್ಯ, ದೇವೇಗೌಡರನ್ನು ಈ ಬಾರಿ ಚುನಾವಣೆಯಲ್ಲಿ ಸೋಲಿಸುವ ಮೂಲಕ ರಾಜಕೀಯದಿಂದಲೇ ಓಡಿಸುವುದಾಗಿ ಹೇಳುತ್ತಿದ್ದಾರೆ. ಆದರೆ ಸಿದ್ದರಾಮಯ್ಯ, ಜೆಡಿಎಸ್ ಪಾಳೆಯದಲ್ಲಿ ದೇವೇಗೌಡರಿಂದ ಎಲ್ಲಾ ನೆರವನ್ನು ಪಡೆದು ಬೆಳೆದು, ಈಗ ಇಂತಹ ಮಾತನಾಡುತ್ತಿರುವುದು ಅವರಿಗೆ ಶೋಭೆ ತರವುದಿಲ್ಲ. ಈಗಾಗಲೆ ರಾಜ್ಯದ ಕಾಂಗ್ರೆಸ್ ಸರ್ಕಾರ ಅಲುಗಾಡುತ್ತಿದೆ. ನಾಲ್ಕು ಮಂದಿ ಸಚಿವರು ತಾವೇ ಸಿಎಂ ಆಗುವ ತವಕದಲ್ಲಿ ಗೊಂದಲ ಸೃಷ್ಟಿಸುತ್ತಿದ್ದಾರೆ. ಹಗರಣಗಳ ಕೂಪದಲ್ಲಿ ಮುಳುಗಿರುವ ಸಂಸದ ಡಿ.ಕೆ.ಸುರೇಶ್, ಅವರ ಸಹೋದರರ ಘನಕಾರ್ಯಗಳು ಮಾಧ್ಯಮದಲ್ಲಿ ಪುಂಕಾನುಪುಂಕವಾಗಿ ಬರುತ್ತಿವೆ. ಅವರು ಜನವಿರೋಧಿಯಾಗಿದ್ದಾರೆ ಎಂದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

