ನಾನು ಕೆಲಸ ಮಾಡಿದ್ದೇ ನಿಜವಾಗಿದ್ದರೆ ನನ್ನನ್ನು ಆಯ್ಕೆ ಮಾಡಿ: ಸಂಸದ ಸುರೇಶ್ ಮನವಿ
ಚನ್ನಪಟ್ಟಣ: ನನಗೆ ಸಿಕ್ಕ ಅಲ್ಪ ಅವಧಿಯಲ್ಲಿ ನಾನು ಕೆಲಸ ಮಾಡಿದ್ದೇ ನಿಜವಾಗಿದ್ದರೆ ಈ ಬಾರಿಯ ಚುನಾವಣೆಯಲ್ಲಿ ನನ್ನನು ಗೆಲ್ಲಿಸಿ ಎಂದು ಸಂಸದ ಡಿ.ಕೆ.ಸುರೇಶ್ ಮನವಿ ಮಾಡಿದರು.
ಪಟ್ಟಣದಲ್ಲಿ ನಡೆದ ಭಾರತ್ ನಿರ್ಮಾಣ ಪಾದಯಾತ್ರೆ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿ, ಈ ಕ್ಷೇತ್ರವನ್ನು ಮಾದರಿ ಕ್ಷೇತ್ರವನ್ನಾಗಿಸುವ ಕನಸು ನನ್ನದಾಗಿದ್ದು, ಕ್ಷೇತ್ರದ ಜನತೆ ಅವಕಾಶ ನೀಡಿದ್ದೇ ಆದಲ್ಲಿ ಕ್ಷೇತ್ರದ ಸರ್ವಾಂಗೀಣ ಅಭಿವೃದ್ಧಿಗೆ ಪ್ರಮಾಣಿಕವಾಗಿ ಶ್ರಮಿಸುವೆ ಎಂದರು.
ನನಗೆ ಸಿಕ್ಕ 6 ತಿಂಗಳ ಅವಧಿಯಲ್ಲಿ ಹಿಂದಿನವರು ಅಷ್ಟು ವರ್ಷದಿಂದ ಮಾಡದ ಸಾಧನೆ ಮಾಡಿದ್ದೇನೆ. ಇಂತಹ ಅವಕಾಶ ನೀಡಿದ್ದಕ್ಕೆ ನಾನು ಮತದಾರರಿಗೆ ಚಿರಋಣಿಯಾಗಿದ್ದೇನೆ. ನನಗೆ ಪೂರ್ಣ ಪ್ರಮಾಣದ ಅಧಿಕಾರ ನೀಡಿದ್ದೇ ಆದಲ್ಲಿ ನಾನು ಇನ್ನಷ್ಟು ಅಭಿವೃದ್ಧಿ ಕೆಲಸಗಳನ್ನು ರಾಜ್ಯ ಮತ್ತು ಕೇಂದ್ರ ಸರ್ಕಾರದಿಂದ ಕ್ಷೇತ್ರಕ್ಕೆ ತಂದು ಜನಸೇವೆ ಮಾಡುವುದಾಗಿ ತಿಳಿಸಿದರು. ಸಮಾಜದ ಕಟ್ಟಕಡೆಯ ವ್ಯಕ್ತಿಯನ್ನು ಸ್ವಾವಲಂಬಿಯಾಗಿಸ ಬೇಕೆಂಬ ನಿಟ್ಟಿನಲ್ಲಿ ಅನುಷ್ಠಾನ ಗೊಳಿಸಿದ ಸಾಕಷ್ಟು ಯೋಜನೆಗಳು ಆರ್ಥಿಕ ಅಶಕ್ತರ ಬದುಕಿಗೆ ಭದ್ರ ಬುನಾದಿ ಹಾಕಿದೆ. ಕೇಂದ್ರದಲ್ಲಿ 10 ವರ್ಷ ಆಳ್ವಿಕೆ ನಡೆಸಿದ ಯುಪಿಎ ಮತ್ತು ರಾಜ್ಯದಲ್ಲಿ 9 ತಿಂಗಳಿಂದ ಅಧಿಕಾರದಲ್ಲಿರುವ ಕಾಂಗ್ರೆಸ್ನ ಸರ್ಕಾರ ಜನಕಲ್ಯಾಣ ಕಾರ್ಯಕ್ರಮಗಳ ಮೂಲಕ ಸರ್ವಾಂಗೀಣ ಅಭಿವೃದ್ಧಿಗಾಗಿ ಇನ್ನಿಲ್ಲದ ಕೊಡುಗೆ ನೀಡುತ್ತಾ ಬಂದಿದೆ ಎಂದರು.
ಈ ಸಂದರ್ಭದಲ್ಲಿ ಮಾತನಾಡಿದ ನಗರ ಕಾಂಗ್ರೆಸ್ ಅಧ್ಯಕ್ಷ ಎ.ಸಿ.ವೀರೇಗೌಡ, ಈ ಕ್ಷೇತ್ರ ಹಿಂದೆಂದೂ ಕಾಣದ ಅಭಿವೃದ್ಧಿ ಹೊಂದುತ್ತಿದೆ. ಸಂಸದ ಡಿ.ಕೆ.ಸುರೇಶ್ ಅತ್ಯುತ್ತಮವಾಗಿ ಕಾರ್ಯ ನಿರ್ವಹಿಸುತ್ತದ್ದಾರೆ. ಇಂತಹ ಅಭ್ಯರ್ಥಿಯನ್ನು ಆಯ್ಕೆ ಮಾಡುವುದು ನಮ್ಮೆಲ್ಲರ ಹೆಮ್ಮೆಯ ಸಂಗತಿಯಾಗಿದೆ ಎಂದರು.
ಈ ಸಂದರ್ಭದಲ್ಲಿ ಗ್ರಾಮಾಂತರ ಕಾಂಗ್ರೆಸ್ ಅಧ್ಯಕ್ಷ ಶಿವಮಾದು, ಯುವ ಕಾಂಗ್ರೆಸ್ ಅಧ್ಯಕ್ಷ ಮಲ್ಲೇಶ್ ಹಳ್ಳಿ ನಗರ ಪ್ರಧಾನ ಕಾರ್ಯದರ್ಶಿ ಪಿ.ಡಿ.ರಾಜು, ನಾಗೇಂದ್ರ, ಕುಕ್ಕೂರು ಕುಮಾರ್, ಲೋಕಸಭಾ ಕ್ಷೇತ್ರದ ಯುವ ಕಾಂಗ್ರೆಸ್ ಉಪಾಧ್ಯಕ್ಷ ಸತೀಶ್ ಇನ್ನೂ ಮುಂತಾದವರು ಉಪಸ್ಥಿತರಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

