ಬೆಂಗಳೂರು ಗ್ರಾಮಾಂತರ

ಕಾರ್ಮಿಕರು ಕಾನೂನು ಅರಿವು, ನೆರವು ಉಪಯೋಗಿಸಿಕೊಳ್ಳಲಿ: ನ್ಯಾ. ಮಾಲಾ

Published On :

ಮಾಗಡಿ: ಕಾರ್ಮಿಕರು ಕಾನೂನು ಅರಿವು, ನೆರವು ಉಪಯೋಗಿಸಿಕೊಂಡು ಜೀವನವನ್ನು ಸುಭದ್ರವಾಗಿವಾಗಿಸಿಕೊಳ್ಳುವಂತೆ ಮಾಗಡಿ ಜೆ.ಎಂ.ಎಫ್.ಸಿ. ನ್ಯಾಯಾಧೀಶೆ ಮಾಲಾ ಎನ್.ಡಿ. ಕರೆ ನೀಡಿದರು.
 ಅವರು ಮಾಗಡಿ ಜೆ.ಎಂ.ಎಫ್.ಸಿ. ನ್ಯಾಯಾಲಯದ ಸಭಾಂಗಣದಲ್ಲಿ, ಕಾನೂನು ಸೇವೆಗಳ ಸಮಿತಿ, ಕೆಂಪೇಗೌಡ ಕಟ್ಟಡ ನಿರ್ಮಾಣ ಮತ್ತು ಇತರೆ ಕಾರ್ಮಿಕರ ಸಂಘದ ಸಹಯೋಗದಲ್ಲಿ ಏರ್ಪಡಿಸಿದ್ದ ಕಾರ್ಮಿಕರ ಕುರಿತು ಕಾನೂನು ಅರಿವು ನೆರವು ಕಾರ್ಯಗಾರವನ್ನು ಉದ್ಘಾಟಿಸಿ ಮಾತನಾಡಿ ಕಾರ್ಮಿಕರು ಅನೇಕ ಕಾರಣಗಳಿಂದಾಗಿ ಅಭದ್ರತೆಯಿಂದ ಜೀವಿಸುತ್ತಿದ್ದಾರೆ. ಕಾರ್ಮಿಕರಿಗಾಗಿ ಸರ್ಕಾರ ಅನೇಕ  ಯೋಜನೆಗಳನ್ನು ರೂಪಿಸಿದೆ. ಯೋಜನೆಗಳ ಸೌಲತ್ತುಗಳನ್ನು ಪಡೆಯಬೇಕಾದರೆ ಮೊದಲು ಕಾರ್ಮಿಕ ಇಲಾಖೆಯಲ್ಲಿ ಸದಸ್ಯತ್ವ ನೋಂದಣಿ ಕಡ್ಡಾಯಗೊಳಿಸಿದೆ. ಪ್ರತಿಯೊಬ್ಬ ಕಾರ್ಮಿಕರು ಕಡ್ಡಾಯವಾಗಿ ಕಾರ್ಮಿಕ ಇಲಾಖೆಯಲ್ಲಿ ನೋಂದಣಿ ಮಾಡಿಸಿಕೊಂಡು ಸೌಲತ್ತು ಪಡೆಯಲು ಜಾಗೃತರಾಗಬೇಕು. ಜತೆಗೆ ತಮ್ಮ ಹಕ್ಕುಗಳನ್ನು ಪಡೆಯಲು  ಕಾನೂನು ಪ್ರಾಧಿಕಾರದ ಸಮಿತಿ ವತಿಯಿಂದ ಕಾನೂನು ಅರಿವು ನೆರವನ್ನು ಉಚಿತವಾಗಿ ಪಡೆದುಕೊಂಡು ತಮ್ಮ ಹಕ್ಕುಗಳನ್ನು ಪಡೆಯಬಹುದು ಎಂದರು.
ಪರಿಹಾರ: ಕೆಂಪೇಗೌಡ ಕಟ್ಟಡ ನಿರ್ಮಾಣ ಮತ್ತು ಇತರೆ ಕಾರ್ಮಿಕರ ಸಂಘದ ಅಧ್ಯಕ್ಷ ವೆಂಕಟೇಶ್  ಅಧ್ಯಕ್ಷತೆ ವಹಿಸಿ ಮಾತನಾಡಿ, ಸಂಘವು, ಕಾರ್ಮಿಕರನ್ನು ಸಂಘಟಿಸಿದೆ. ಈಗಾಗಲೇ ಸುಮಾರು 15 ಲಕ್ಷ ರು. ಕಾರ್ಮಿಕ ಇಲಾಖೆಯ ಪರಿಹಾರ ನಿಧಿಯಿಂದ ಪರಿಹಾರ ಧನವನ್ನು ಅರ್ಹ ಪಲಾನುಭವಿಗಳಿಗೆ ಕೊಡಿಸಲಾಗಿದೆ. ಇತರೆ ಕಾರ್ಮಿಕರಿಗೂ ನೋಂದಣಿ ಮಾಡಿಸಲು ಪ್ರಾಮಾಣಿಕವಾಗಿ ಶ್ರಮಿಸಲಾಗುತ್ತಿದೆ. ಆದರೆ ನೋಂದಣಿಗೆ ಸಮರ್ಪಕವಾಗಿ ಸ್ಪಂದನೆ ದೊರಕುತ್ತಿಲ್ಲ ಎಂದು ವಿಷಾದಿಸಿದ ಅವರು, ಕಾನೂನು ಅರಿವು, ನೆರವು ಹಾಗೂ ಮಾಧ್ಯಮಗಳ ಸಹಕಾರದಿಂದ ಕಾರ್ಮಿಕರ ಕಲ್ಯಾಣಕ್ಕಾಗಿ ದುಡಿಯುತ್ತೇನೆ ಎಂದರು.
ವಕೀಲ ನಾರಾಯಣಸ್ವಾಮಿ ಮಾತನಾಡುತ್ತಾ ಕಾರ್ಮಿಕರು ಅನೇಕ ಸಮಸ್ಯೆಗಳಿಗೆ ತುತ್ತಾಗುತ್ತಿದ್ದಾರೆ. ತಮ್ಮ ಸುಖ ಜೀವನಕ್ಕೆ ಕಾನೂನು ನೆರವು ಪರಿಣಾಕಾರಿಯಾಗಿದೆ. ಇದನ್ನು ಸದುಪಯೋಗಪಡಿಸಿಕೊಳ್ಳಬೇಕು ಎಂದರು. ಕೆಂಪೇಗೌಡ ಕಟ್ಟಡ ನಿರ್ಮಾಣ ಮತ್ತು ಇತರೆ ಕಾರ್ಮಿಕರ ಸಂಘದ ಕಾರ್ಯದರ್ಶಿ ಪುಟ್ಟಸ್ವಾಮಿ, ವಕೀಲರಾದ ಆರ್. ಸುರೇಶ್ ಮಾತನಾಡಿದರು. ವಕೀಲರ ಸಂಘದ ಕಾರ್ಯದರ್ಶಿ ಮುನಿಸ್ವಾಮಿ ನಾಯಕ್, ಸಹಾಯಕ ಅಭಿಯೋಜಕಿ ಕೆ.ಎಸ್.ಲತಾ, ನರಸಿಂಹಮೂರ್ತಿ. ಲಕ್ಷ್ಮೀಪ್ರಸಾದ್  ಉಪಸ್ಥಿತರಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.