'ವಿದ್ಯಾರ್ಥಿಗಳ ಶೈಕ್ಷಣಿಕ ಗುರಿ ಸಾಧನೆಗೆ ಆತ್ಮವಿಶ್ವಾಸ ಮುಖ್ಯ'
ಸೂಲಿಬೆಲೆ: ಗ್ರಾಮೀಣ ವಿದ್ಯಾರ್ಥಿಗಳ ಶೈಕ್ಷಣಿಕ ಗುರಿ ಸಾಧನೆಗೆ ಆತ್ಮವಿಶ್ವಾಸ ಮುಖ್ಯವಾಗಿದ್ದು, ಈ ನಿಟ್ಟಿನಲ್ಲಿ ವಿದ್ಯಾರ್ಥಿ ಸಮುದಾಯ ಇದನ್ನು ರೂಢಿಸಿಕೊಂಡು ಶಿಕ್ಷಣದಲ್ಲಿ ಪ್ರಗತಿ ಕಾಣಬೇಕು ಎಂದು ಪ್ರಾಂಶುಪಾಲ
ಕೆ.ವಿ ನಾಗರಾಜ್ ಕಿವಿಮಾತು ಹೇಳಿದರು.
ಜಡಿಗೇನಹಳ್ಳಿಯ ಕಿತ್ತೂರು ರಾಣಿ ಚನ್ನಮ್ಮ ವಸತಿ ಶಾಲೆಯಲ್ಲಿ ಎಸ್ಎಸ್ಎಲ್ಸಿ ವಿದ್ಯಾರ್ಥಿಗಳಿಗೆ ಹಮ್ಮಿಕೊಂಡಿದ್ದ ಬೀಳ್ಕೊಡುಗೆ ಹಾಗೂ ಪ್ರವೇಶ ಪತ್ರ ವಿತರಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ರಾಜೇಶ್ವರಿ ಮಾತನಾಡಿ, ಹೆಣ್ಣು ಮಕ್ಕಳು ತಮ್ಮ ಜೀವನದ ಉದ್ದೇಶ ಅರಿತು ಪರೀಕ್ಷೆಯಲ್ಲಿ ಉತ್ತಮ ಅಂಕ ಪಡೆದು ಸಮಾಜದಲ್ಲಿ ಉತ್ತಮ ವ್ಯಕ್ತಿಗಳಾಗಿ ರೂಪುಗೊಳ್ಳಬೇಕು. ಹೆಣ್ಣು ಕಲಿತರೇ ಸಮಾಜದ ಬದಲಾವಣೆಗೆ ಕಾರಣವಾಗುತ್ತದೆ. ಕಲಿಕೆಯಿಂದ ಮಾತ್ರ ವ್ಯಕ್ತಿ ಮನುಷ್ಯನಾಗಿ ರೂಪುಗೊಳ್ಳಲು ಸಾಧ್ಯ ಎಂದು ಕಿವಿಮಾತು ಹೇಳಿದರು.
ಇದೇ ವೇಳೆ ಅತಿಥಿ ಶಿಕ್ಷಕ ರಾಮಕೃಷ್ಣಪ್ಪ, ವರ್ಷದ ಅತ್ಯುತ್ತಮ ವಿದ್ಯಾರ್ಥಿನಿ ಕು.ತೇಜಸ್ವಿನಿ ಅವರನ್ನು ಸನ್ಮಾನಿಸಲಾಯಿತು. ಶಿಕ್ಷಕಿಯರಾದ ರೂಪ, ಉಷಾ ಮತ್ತಿತತರು ಹಾಜರಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

