ಬೆಂಗಳೂರು ಗ್ರಾಮಾಂತರ

ಶಿವಲಿಂಗಯ್ಯ ಬಿಜೆಪಿ ಅಭ್ಯರ್ಥಿ; ಸ್ವಾಗತ

Published On :

ಮಂಡ್ಯ: ಮಂಡ್ಯ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಬಿ. ಶಿವಲಿಂಗಯ್ಯ ಅವರನ್ನು ಪಕ್ಷದ ವರಿಷ್ಠರು ತೀರ್ಮಾನಿಸಿರುವುದನ್ನು ಪಕ್ಷದ ತಾಲೂಕು ಘಟಕ ಅಧ್ಯಕ್ಷರು ಸ್ವಾಗತಿಸಿದ್ದಾರೆ.
ಶನಿವಾರ ಜಂಟಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ತಾಲೂಕು ಘಟಕದ ಅಧ್ಯಕ್ಷರು, ಮಂಡ್ಯ ಸಂಸತ್ ಕ್ಷೇತ್ರ ವ್ಯಾಪ್ತಿಗೆ ಒಳಪಡುವ ಎಲ್ಲಾ ತಾಲೂಕಿನ ಅಧ್ಯಕ್ಷರು ಹಾಗೂ ಕಾರ್ಯಕರ್ತರು ಪಕ್ಷದ ಗೆಲವಿಗೆ ಕಾಯಾ, ವಾಚಾ, ಮನಸಾ ಶ್ರಮಿಸುವುದಾಗಿ ತಿಳಿಸಿದರು.
ದೇಶದ ದೃಷ್ಟಿಯಿಂದ ಚುನಾವಣೆಯಲ್ಲಿ ಪಕ್ಷವನ್ನು ಗೆಲ್ಲಿಸಿ ನರೇಂದ್ರ ಮೋದಿ ಅವರನ್ನು ಪ್ರಧಾನಮಂತ್ರಿಯನ್ನಾಗಿ ಮಾಡಲು ಹಾಗೂ ಕ್ಷೇತ್ರದ ಅಭಿವೃದ್ಧಿಯನ್ನು ಗಮನದಲ್ಲಿಟ್ಟುಕೊಂಡು ಕಾರ್ಯಕರ್ತರು ಕೆಲಸ ಮಾಡುತ್ತಾರೆ ಎಂದು ಹೇಳಿದರು.
ಬಿಜೆಪಿ ಪಕ್ಷಕ್ಕಾಗಿ ಅಭ್ಯರ್ಥಿ ಶಿವಲಿಂಗಯ್ಯ ಅವರು ದುಡಿದಿಲ್ಲ ಎಂಬುದು ಎಲ್ಲರಿಗೂ ಗೊತ್ತಿರುವ ಸಂಗತಿ. ಆದರೆ, ರಾಷ್ಟ್ರೀಯ ವಿಚಾರ ಹಾಗೂ ಪಕ್ಷದ ತತ್ವ ಸಿದ್ಧಾಂತಗಳನ್ನು ಒಪ್ಪಿ ಶಿವಲಿಂಗಯ್ಯ ಪಕ್ಷಕ್ಕೆ ಸೇರ್ಪಡೆ ಆಗಿರುವುದರಿಂದ ವರಿಷ್ಠರು ಸಕಾರಾತ್ಮಕ ಕಾರಣಗಳನ್ನು ನೋಡಿಯೇ ಅವರಿಗೆ ಟಿಕೆಟ್ ನೀಡಿದ್ದಾರೆ ಎಂದು ಅಧ್ಯಕ್ಷರು ಸಮರ್ಥಿಸಿಕೊಂಡರು.
ಪಕ್ಷದಲ್ಲಿ ಅನೇಕ ಆಕಾಂಕ್ಷಿತರು ಇದ್ದರು. ಅವರೆಲ್ಲರನ್ನು ಹೊರತು ಪಡಿಸಿ ವರಿಷ್ಠರು, ಬಿ. ಶಿವಲಿಂಗಯ್ಯ ಅವರನ್ನು ಅಭ್ಯರ್ಥಿಯನ್ನಾಗಿ ಮಾಡಿರುವುದು ನಮಗೂ ಕೊಂಚ ಬೇಸರ ತಂದಿದೆ. ಆದರೆ, ಆ ಬೇಸರವನ್ನು ಹೊರಹಾಕುವ ಸಮಯ ಇದಲ್ಲ ಎಂದು ತಿಳಿಸಿದರು. ವರಿಷ್ಠರು ಸೂಚನೆಯಂತೆ ಬಿಜೆಪಿ ಅಭ್ಯರ್ಥಿಯಾಗಿರುವ ಶಿವಲಿಂಗಯ್ಯ ಅವರ ಗೆಲವಿಗೆ ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರು ಪ್ರಾಮಾಣಿಕವಾಗಿ ಕೆಲಸ ಮಾಡಲಿದ್ದು, ಅತೃಪ್ತರನ್ನು ಸಮಾಧಾನ ಪಡಿಸಲಾಗುವುದು ಎಂದು ಹೇಳಿದರು.
ಸುದ್ದಿಗೋಷ್ಠಿಯಲ್ಲಿ ಬಿಜೆಪಿ ಮಂಡ್ಯ ನಗರ ಅಧ್ಯಕ್ಷ ಟಿ.ಎಲ್. ರವಿಶಂಕರ್, ಮಂಡ್ಯ ಗ್ರಾಮಾಂತರ ಅಧ್ಯಕ್ಷ ರಾಮಾಚಾರಿ, ಶ್ರೀರಂಗಪಟ್ಟಣ ಅಧ್ಯಕ್ಷ ಎಸ್.ದೇವರಾಜು, ಮೇಲುಕೋಟೆ ಅಧ್ಯಕ್ಷ ಜೆ. ಶಿವಲಿಂಗೇಗೌಡ, ಜಿಲ್ಲಾ ಉಪಾಧ್ಯಕ್ಷ ಕಪನಿಗೌಡ, ಜಿಲ್ಲಾ ಕಾರ್ಯದರ್ಶಿ ಕುಮಾರಸ್ವಾಮಿ ಮತ್ತಿತರರು ಇದ್ದರು.

ನಮೋ ಬೆಂಬಲಿಸಲು ಬಿಜೆಪಿಗೆ
ಮಂಡ್ಯ
: ದೇಶದ ಭದ್ರತೆಯ ದೃಷ್ಟಿಯಿಂದ ಪ್ರಧಾನಮಂತ್ರಿ ಹುದ್ದೆಗೆ ನರೇಂದ್ರಮೋದಿ ಅವರ ಕೂಗು ದೇಶಾದ್ಯಂತ ಕೇಳಿಬರುತ್ತಿರುವ ಸಂದರ್ಭದಲ್ಲಿ ಬಿಜೆಪಿ ಸೇರಿರುವುದಾಗಿ ಮಂಡ್ಯ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಿ. ಶಿವಲಿಂಗಯ್ಯ ಶನಿವಾರ ಹೇಳಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.