ಬೆಂಗಳೂರು ಗ್ರಾಮಾಂತರ

ಯೋಗೇಶ್ವರ್ ಮನವೊಲಿಕೆಗೆ ಮಣಿದ ಸಿದ್ದರಾಮ ಹೆಗ್ಗಡೆ

Published On :

ಚನ್ನಪಟ್ಟಣ: ತಾಲೂಕಿನ ಅಕ್ರಮ ಮರಳು ಗಣಿಗಾರಿಕೆ ವಿರುದ್ಧ ಕಳೆದ 55 ದಿನಗಳಿಂದ ಪ್ರತಿಭಟನೆ ನಡೆಸುತ್ತಿದ್ದ ತಾಪಂ ಮಾಜಿ ಅಧ್ಯಕ್ಷ ಸಿದ್ದರಾಮ ಹೆಗ್ಗಡೆ ಹೋರಾಟ ಕೊನೆಗೊಂಡಿದೆ.
ಶಾಸಕ ಸಿ.ಪಿ.ಯೋಗೇಶ್ವರ್ ಸಿದ್ದರಾಮ ಹೆಗ್ಗಡೆ ಜತೆ ಮಾತುಕತೆ ನಡೆಸಿ ಅವರ ಬೇಡಿಕೆಗಳಿಗೆ ಸಂಬಂಧಿಸಿದಂತೆ ಒಂದು ವಾರದೊಳಗೆ ಮುಖ್ಯಮಂತ್ರಿಯವರ ಬಳಿಗೆ ನಿಯೋಗ ಕರೆದೊಯ್ಯುವ ಜತೆಗೆ ಅಕ್ರಮ ಮರಳು ಗಣಿಗಾರಿಕೆ ವಿರುದ್ಧ ಲೋಕಾಯುಕ್ತ ತನಿಖೆಗೆ ಸರ್ಕಾರವನ್ನು ಒತ್ತಾಯಿಸುವುದಾಗಿ ತಿಳಿಸಿದ ಹಿನ್ನೆಲೆಯಲ್ಲಿ  ಹೆಗ್ಗಡೆ ಹೋರಾಟ ಹಿಂದಕ್ಕೆ ಪಡೆದರು.
ಕಳೆದ ಜ.21ರಿಂದ ಅಕ್ರಮ ಮರಳು ಗಣಿಗಾರಿಕೆಯ ವಿರುದ್ಧ ಲೋಕಾಯುಕ್ತ ತನಿಖೆ ನಡೆಸ ಬೇಕೆಂದು ಆಗ್ರಹಿಸಿ ಸಿದ್ದರಾಮ ಹೆಗ್ಗಡೆ ಪ್ರತಿಭಟನೆ ನಡೆಸುತ್ತಿದ್ದರು. ಚಳವಳಿಗೆ ಸ್ವಾತಂತ್ರ್ಯ ಹೋರಾಟಗಾರ ಎಚ್.ಎಸ್.ದೊರೆಸ್ವಾಮಿ, ರೈತಪರ ಹೋರಾಟಗಾರ ಕಡಿದಾಳ್ ಶಾಮಣ್ಣ, ಅಂತಾರಾಷ್ಟ್ರೀಯ ಪರಿಸರವಾದಿ ಸಮರೇಂದ್ರ ದಾಸ್ ಸೇರಿದಂತೆ ಸಾಕಷ್ಟು ಮಂದಿ ಬೆಂಬಲ ನೀಡಿದ್ದರು.
ಜಿಲ್ಲಾಧಿಕಾರಿ ತಾಲೂಕಿನ ವಿವಿಧ ಜನಪರ ಸಂಘಟನೆಗಳ ಸಭೆ ನಡೆಸಿ ಮರಳು ಗಣಿಗಾರಿಕೆ ವಿರುದ್ಧ ಕ್ರಮ ಕೈಗೊಳ್ಳುವುದಾಗಿ ನಿರ್ಧರಿಸಲಾಗಿತ್ತು. ಆದರೆ ತಾಲೂಕಿನಲ್ಲಿ ನಡೆಯುತ್ತಿರುವ ಅಕ್ರಮ ಮರಳು ಗಣಿಗಾರಿಕೆ ವಿರುದ್ಧ ಲೋಕಾಯುಕ್ತ ತನಿಖೆ ನಡೆಯಲೇಬೇಕೆಂದು ಆಗ್ರಹಿಸಿ ಹೆಗ್ಗಡೆ ಚಳುವಳಿ ಮುಂದುವರೆಸಿದ್ದರು.
ಶನಿವಾರ ಸಂಜೆ ಸ್ಥಳಕ್ಕೆ ಆಗಮಿಸಿ ಯೋಗೇಶ್ವರ್ ಮರಳು ಲೂಟಿ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳುವಂತೆ ತಹಸೀಲ್ದಾರರಿಗೆ ಸೂಚಿಸದರಲ್ಲದೆ, ಮುಖ್ಯಮಂತ್ರಿಗಳ ಬಳಿಗೆ ನಿಯೋಗ ಕರೆದೊಯ್ಯುವ ಮೂಲಕ ಅಕ್ರಮ ಗಣಿಗಾರಿಕೆ ವಿರುದ್ಧ ಸರ್ಕಾರದ ಗಮನ ಸೆಳೆಯುವುದಾಗಿ ತಿಳಿಸಿದರು. ಶಾಸಕರ ಮಾತಿಗೆ ಸಮ್ಮತಿ ಸೂಚಿಸಿದ ಸಿದ್ದರಾಮ ಹೆಗ್ಗಡೆ ತಮ್ಮ ಬೇಡಿಕೆಗಳನ್ನು ಈಡೇರಿಸುವಂತೆ ಗಡುವು ನೀಡಿ 55ದಿನಗಳ ಅಹೋರಾತ್ರಿ ಧರಣಿ ಸತ್ಯಾಗ್ರಹವನ್ನು ಕೊನೆಗೊಳಿಸಿದರು.
ತಹಸೀಲ್ದಾರ್ ಅರುಣಪ್ರಭಾ, ರೈತಸಂಘದ ವಿಭಾಗೀಯ ಉಪಾಧ್ಯಕ್ಷ ಎಂ.ರಾಮು, ಸ್ವರಾಜ್ ನೆಟ್ವರ್ಕ್ನ ಸುಕನ್ಯಾ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎ.ಸಿ.ವೀರೇಗೌಡ, ಅಹಿಂದ ನೌಕರರ ಸಂಘದ ಜಿಲ್ಲಾಧ್ಯಕ್ಷ ನಾಗೇಂದ್ರ, ಕುರುಬರ ಸಂಘದ ರಾಜ್ಯ ನಿರ್ದೇಶಕ ಡೈರಿ ರೇವಣ್ಣ ಮತ್ತಿತರರು ಉಪಸ್ಥಿತರಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.