ದೇವಾಂಗ ಮಂಡಲಿ ಸದಸ್ಯರ ಸಭೆ
ದೊಡ್ಡಬಳ್ಳ್ಳಾಪುರ: ಇಲ್ಲಿನ ದೇವಾಂಗ ಮಂಡಲಿಯ ಸರ್ವ ಸದಸ್ಯರ ಸಭೆ ದೇವಾಂಗ ಮಂಡಲಿ ಕಲ್ಯಾಣ ಮಂದಿರದಲ್ಲಿ ಮಂಡಲಿ ಅಧ್ಯಕ್ಷ ಎಂ.ಜಿ. ಶ್ರೀನಿವಾಸ್ ಅಧ್ಯಕ್ಷತೆಯಲ್ಲಿ ನಡೆಯಿತು.
ಸಭೆಯಲ್ಲಿ ವಾರ್ಷಿಕ ಲೆಕ್ಕಪತ್ರಗಳ ಮಂಡನೆ, ಮುಂಗಡ ಆದಾಯ-ವ್ಯಯದ ಅನುಮೋದನೆ ಪಡೆಯಲಾಯಿತು. ಮಂಡಲಿ ರಚನಾತ್ಮಕವಾಗಿ ಕಾರ್ಯನಿರ್ವಹಿಸುವ ಕುರಿತು ಹಲವು ಸಲಹೆಗಳು ಸಭೆಯಲ್ಲಿ ಕೇಳಿ ಬಂದವು. ಸಭೆಯಲ್ಲಿ ವಿವಿಧ ವಿಚಾರಗಳನ್ನು ಕುರಿತು ಮಾತನಾಡಿದ ಸದಸ್ಯರು ದೊಡಬಳ್ಳಾಪುರದಲ್ಲಿ ದೇವಾಂಗ ಸಮುದಾಯ ಅತಿಹೆಚ್ಚಿನ ಸಂಖ್ಯೆಯಲ್ಲಿದ್ದು ಅಸಂಘಟಿತವಾಗಿದೆ.
ಹೀಗಾಗಿ ರಾಜಕೀಯ, ಸಾಮಾಜಿಕ ಮತ್ತು ಸಾಂಸ್ಕೃತಿಕ ಕ್ಷೇತ್ರಗಳಲ್ಲಿ ಗಣನೀಯ ಪ್ರಮಾಣದ ಅವಕಾಶಗಳು ಲಭ್ಯವಾಗುತ್ತಿಲ್ಲ. ಈ ನಿಟ್ಟಿನಲ್ಲಿ ಮಂಡಲಿ ಸಮುದಾಯದ ವಾರಸುದಾರಿಕೆಯನ್ನು ಪಡೆಯುವ ನಿಟ್ಟಿನಲ್ಲಿ ರೂಪುಗೊಳ್ಳಬೇಕು. ಶೈಕ್ಷಣಿಕವಾಗಿ ಹಲವು ಯೋಜನೆಗಳು ಕಾರ್ಯಗತವಾಗಿದ್ದರೂ ಗಣನೀಯ ಪ್ರಮಾಣದ ಪ್ರಗತಿ ಆಗಿಲ್ಲ. ಈ ನಿಟ್ಟಿನಲ್ಲಿ ಚಿಂತನೆ ಅಗತ್ಯ ಎಂದರು.
ಎಂ.ಜಿ.ಶ್ರೀನಿವಾಸ್ ಮಾತನಾಡಿ, ಮುಂಬರುವ ವರ್ಷದಿಂದ ಜನಾಂಗದಲ್ಲಿ ಉನ್ನತ ಶಿಕ್ಷಣದ ವೈದ್ಯಕೀಯ ಮತ್ತು ತಾಂತ್ರಿಕ ಶಿಕ್ಷಣದಲ್ಲಿ ಸರ್ಕಾರಿ ಕೋಟಾದಡಿ ಸೀಟುಪಡೆಯುವ ಪ್ರತಿಭಾವಂತ ಬಡವಿದ್ಯಾರ್ಥಿಗಳಿಬ್ಬರಿಗೆ ಸಂಪೂರ್ಣ ಶೈಕ್ಷಣಿಕ ವೆಚ್ಚವನ್ನು ಮಂಡಲಿ ಭರಿಸುವ ನಿಟ್ಟಿನಲ್ಲಿ ಯೋಜನೆ ರೂಪಿಸಲಾಗಿದೆ.
ಅದೇ ರೀತಿ ಆರೋಗ್ಯ ನಿಧಿ ಸ್ಥಾಪಿಸುವ ಉದ್ದೇಶ ಹೊಂದಲಾಗಿದೆ ಎಂದರು.
ಮಂಡಲಿ ಕಾರ್ಯದರ್ಶಿ ಎ.ಎಸ್.ಕೇಶವ, ಉಪಾಧ್ಯಕ್ಷೆ ಕೆ.ಸಿ.ಗೌರಮ್ಮ, ಸಹ ಕಾರ್ಯದರ್ಶಿ ಕೆ.ಎಸ್. ಸನಾತನಮೂರ್ತಿ, ಖಜಾಂಚಿ ಎಲ್.ಸಿ.ದೇವಕಿ, ಕಾರ್ಯಕಾರಿ ಸಮಿತಿ ನಿರ್ದೇಶಕರು ಮತ್ತು ಮಂಡಲಿ ಮಾಜಿ ಅಧ್ಯಕ್ಷರು ಸದಸ್ಯರು ಹಾಜರಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

