ಬೆಂಗಳೂರು ಗ್ರಾಮಾಂತರ

ಬಿಡಿಸಿಸಿಗೆ ಲಿಂಗೇಶ್‌ಕುಮಾರ್ ಸಾರಥ್ಯ

Published On :

ಚನ್ನಪಟ್ಟಣ: ಬಿಡಿಸಿಸಿ ಬ್ಯಾಂಕ್ (ಬೆಂಗಳೂರು ನಗರ, ಗ್ರಾಮಾಂತರ, ರಾಮನಗರ ಜಿಲ್ಲೆ) ಅಧ್ಯಕ್ಷರಾಗಿ ಎಸ್. ಲಿಂಗೇಶ್‌ಕುಮಾರ್ ಅವರು ಅಧಿಕಾರ ವಹಿಸಿ ಕೊಂಡರು.
ಬೆಂಗಳೂರಿನ ಚಾಮರಾಜ ಪೇಟೆಯಲ್ಲಿರುವ ಬ್ಯಾಂಕ್‌ನ ಕೇಂದ್ರ ಕಚೇರಿಯಲ್ಲಿ  ನಡೆದ ಪದಗ್ರಹಣ ಕಾರ್ಯಕ್ರಮದಲ್ಲಿ ಎಸ್. ಲಿಂಗೇಶ್‌ಕುಮಾರ್ ಅಧಿಕಾರ ಹಸ್ತಾಂತರ ನಡೆಯಿತು. ಅಧ್ಯಕ್ಷ ಸ್ಥಾನಕ್ಕೆ ಅಶೋಕ್ ರಾಜಿನಾಮೆ ಹಿನ್ನೆಲೆಯಲ್ಲಿ ನಿಯಮಾವಳಿ ಪ್ರಕಾರ ಹಾಲಿ ಉಪಾಧ್ಯಕ್ಷ ಎಸ್.ಲಿಂಗೇಶ್‌ಕುಮಾರ್ ನೂತನ ಅಧ್ಯಕ್ಷರು ಆಯ್ಕೆಯಾಗುವ ವರೆಗೆ ಅಧ್ಯಕ್ಷರಾಗಿ ಮುಂದುವರೆಯಲಿದ್ದಾರೆ.
ಅಭಿವೃದ್ಧಿಗಾಗಿ ಶ್ರಮಿಸುವೆ: ಅಧಿಕಾರ ಸ್ವೀಕರಿಸಿ ಮಾತನಾಡಿದ ಎಸ್. ಲಿಂಗೇಶ್‌ಕುಮಾರ್,  ಸಹಕಾರಿ ಕ್ಷೇತ್ರದಲ್ಲಿ ಬಿಡಿಸಿಸಿ ಬ್ಯಾಂಕ್‌ಗೆ ತನ್ನದೇ ಆದ ಮಹತ್ವವಿದ್ದು ರೈತರು ಮತ್ತು ಕಡುಬಡವರಿಗೆ ಹಣಕಾಸು ನೆರವು ನೀಡುವ ಮೂಲಕ ಈ ಬ್ಯಾಂಕ್ ತನ್ನದೇ ಆದ ಹೆಗ್ಗಳಿಕೆ ಪಡೆದಿದೆ. ಹಲವಾರು ಹಿರಿಯರು ಹಾಕಿ ಕೊಟ್ಟದಾರಿಯಲ್ಲಿ ನಾನು ಬ್ಯಾಂಕ್ ಮುನ್ನಡೆಸಲು ತಮ್ಮ ಅಧಿಕಾರವಧಿಯಲ್ಲಿ ಪ್ರಮಾಣಿಕವಾಗಿ ಶ್ರಮಿಸುವೆ ಎಂದು ತಿಳಿಸಿದರು. ರೈತರಿಗೆ ಸಕಾಲದಲ್ಲಿ ಬ್ಯಾಂಕ್ ಸಾಲಸೌಲಭ್ಯ ದೊರೆಯುವಂತೆ ಮಾಡುವ ಜತೆಗೆ, ಬ್ಯಾಂಕ್ ಆಡಳಿತ ವೈಖರಿಯನ್ನು ಪಾರದರ್ಶಕವಾಗಿಸಿ ಜನತೆಗೆ ತ್ವರಿತವಾಗಿ ಸೇವೆ ಸಿಗುವಂತೆ ಮಾಡುವುದಾಗಿ ಲಿಂಗೇಶ್‌ಕುಮಾರ್ ತಿಳಿಸಿದರು.
ಸಿಬ್ಬಂದಿ ಅಭಿವೃದ್ಧಿಗೆ ಶ್ರಮಿಸಿ
ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದ ಬಳಿಕ ಬ್ಯಾಂಕ್‌ನ ನೂತನ ಸಿಬ್ಬಂದಿ ತರಬೇತಿ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಲಿಂಗೇಶ್‌ಕುಮಾರ್, ಗ್ರಾಮೀಣ ಜನತೆಯನ್ನು ಗುರಿಯಾಗಿಸಿ ಕೊಂಡು ಅವರಿಗೆ ಉತ್ತಮ ಬ್ಯಾಂಕಿಂಗ್ ಸೇವೆ ಸಲ್ಲಿಸಲು ಶ್ರಮಿಸುತ್ತಿರುವ ಬಿಡಿಸಿಸಿ ಬ್ಯಾಂಕ್ ಅಭಿವೃದ್ಧಿಗೆ ನೂತನ ಸಿಬ್ಬಂದಿ ಪ್ರಾಮಾಣಿಕವಾಗಿ ಸೇವೆಸಲ್ಲಿಸಬೇಕು ಎಂದು ಕಿವಿಮಾತು ಹೇಳಿದರು. ಬ್ಯಾಂಕ್ ನಿರ್ದೇಶಕ ರವೀಶಯ್ಯ ಮಾತನಾಡಿ, ಅಭಿವೃದ್ಧಿ ಪರ ಚಿಂತನೆಯಿಂದ ಕೂಡಿರುವ ಸಹಕಾರಿ ಕ್ಷೇತ್ರದ ಅಭಿವೃದ್ಧಿಗಾಗಿ ಶ್ರಮಿಸುವ ಹುಮ್ಮಸ್ಸಿರುವ ಎಸ್.ಲಿಂಗೇಶ್‌ಕುಮಾರ್ ಬ್ಯಾಂಕ್ ಅಧ್ಯಕ್ಷರಾಗಿ ಅಧಿಕಾರವಹಿಸಿ ಕೊಂಡಿರುವುದು ಸಂತಸದ ಸಂಗತಿಯಾಗಿದ್ದು, ಪೂರ್ಣಾವಧಿ ಅಧ್ಯಕ್ಷರಾಗುವ ಮೂಲಕ ಬ್ಯಾಂಕ್ ಸರ್ವಾಂಗೀಣ ಅಭಿವೃದ್ಧಿಗೆ ಶ್ರಮಿಸಲಿ ಎಂದು ಶುಭ ಕೋರಿದರು. ವ್ಯವಸ್ಥಾಪಕ ನಿರ್ದೇಶಕ ಲಿಂಗರಾಜು, ಬ್ಯಾಂಕ್ ನೌಕರರ ಸಂಘದ ಅಧ್ಯಕ್ಷ, ಒಕ್ಕಲಿಗರ ಸಂಘದ ನಿರ್ದೇಶಕ ಕೃಷ್ಣಮೂರ್ತಿ, ಬ್ಯಾಂಕ್ ಸಿಬ್ಬಂದಿ ಉಪಸ್ಥಿತರಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.