ಮೋದಿ ಪ್ರಧಾನಿ ಆಗಲೇಬೇಕು
ನೆಲಮಂಗಲ: ದೇಶಕ್ಕೆ ಮೋದಿಯವರವರನ್ನು ಪ್ರಧಾನಿಯಾಗಿಸುವುದು ನಮ್ಮೆಲ್ಲರ ಕೈಯಲ್ಲಿದೆ ಎಂದು ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಿ.ಎನ್. ಬಚ್ಚೇಗೌಡ ಹೇಳಿದರು.
ಅವರು ಬುಧವಾರ ಪಟ್ಟಣದ ಬಸವಣ್ಣ ದೇವರ ಮಠದ ಆವರಣದಲ್ಲಿ ಬಿಜೆಪಿ ಪಕ್ಷ ಆಯೋಜಿಸಿದ್ದ ಕಾರ್ಯಕರ್ತರ ಸಭೆ ಉದ್ದೇಶಿಸಿ ಮಾತನಾಡುತ್ತಾ ದಿನ ನಿತ್ಯದ ವಸ್ತುಗಳ ಬೆಲೆಗಳು ಗಗನಕ್ಕೇರಿರುವುದರಿಂದ ಶ್ರೀಸಾಮಾನ್ಯನ ಜೀವನ ಮಟ್ಟ ಕುಸಿದಿದೆ. ಪ್ರಗತಿಗಾಗಿ, ದೇಶದ ಉತ್ತಮ ಭವಿಷ್ಯಕ್ಕಾಗಿ ಬಿಜೆಪಿ ಅಧಿಕಾರಕ್ಕೆ ಬರಬೇಕು ಎಂದು ತಿಳಿಸಿದರು.
ತಾಲೂಕಿನಲ್ಲಿ ಕಳೆದ ಬಿಜೆಪಿ ಸರ್ಕಾರದ ಅವಧಿಯಲ್ಲಿ ನೂರಾರು ಕೋಟಿ ರು.ಗಳ ಅಭಿವೃದ್ಧಿ ಕಾಮಗಾರಿ ನಡೆದಿದೆ. ಜನಸಾಮಾನ್ಯರಿಗೆ ಹಲವು ಯೋಜನೆಗಳನ್ನು ಬಿಜೆಪಿ ಸರ್ಕಾರ ನೀಡಿದೆ.
ಬಿಜೆಪಿ ಬೆಂಬಲಿಸುವ ಮೂಲಕ ಸುಭದ್ರ ಸರ್ಕಾರ ರಚನೆಗೆ ಸಾಧ್ಯವಾಗುತ್ತದೆ ಎಂದರು.
ಮಾಜಿ ಶಾಸಕ ಎಂ.ವಿ.ನಾಗರಾಜು, ತಾ.ಭಾ.ಜ.ಪ ಅಧ್ಯಕ್ಷ ಜಗದೀಶ್ ಪ್ರಸಾದ್, ಮುಖಂಡರಾದ ಕಾಂತರಾಜು, ಬೈರೇಗೌಡ, ಕರಿವರದಯ್ಯ, ಸೌಮ್ಯ, ಕೇಶವಮೂರ್ತಿ, ನಾಗೇಂದ್ರ ಇದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

