ಸುಭದ್ರ ಸರ್ಕಾರಕ್ಕಾಗಿ ಬಿಜೆಪಿಗೆ ಮತ ನೀಡಿ
ಆನೇಕಲ್ಲು: ಯಾವುದೇ ರಾಜಕಾರಣಿಗೆ ಬದ್ಧತೆ ಇರಬೇಕು. ರಾಷ್ಟ್ರವನ್ನು ಮುನ್ನಡೆಸುವ ಮುಂದಾಲೋಚನೆ ಹಾಗೂ ಸಂಕಲ್ಪ ಇರಬೇಕು. ಬಿಜೆಪಿ ಪಕ್ಷ ತತ್ವ ಹಾಗೂ ಸಿದ್ಧಾಂತದಡಿ ಕೆಲಸ ಮಾಡುತ್ತಿದ್ದು ಮೋದಿಯವರ ಭಾರತ ಕಲ್ಪನೆಯನ್ನು ಸಾಕಾರ ಮಾಡಲು ಎಲ್ಲ ಮತದಾರರೂ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಗಳಿಗೇ
ಮತ ನೀಡಬೇಕೆಂದು ಮಾಜಿ ಸಚಿವ ಎ. ನಾರಾಯಣಸ್ವಾಮಿ ಮನವಿ ಮಾಡಿದ್ದಾರೆ.
ಅವರು ಬೆಂಗಳೂರು ದಕ್ಷಿಣ ಹಾರಗದ್ದೆಯಲ್ಲಿ ನಡೆದ ಬಿಜೆಪಿ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿ ದೇಶವನ್ನು ಬಲಿಷ್ಠ ರಾಷ್ಟ್ರವನ್ನಾಗಿಸಲು ಮೋದಿ ಪಣ ತೊಟ್ಟಿದ್ದಾರೆ. ಕಾರ್ಯಕರ್ತರು ಮನೆ ಮನೆಗೆ ತೆರಳಿ ಪ್ರಚಾರ ನಡೆಸಬೇಕೆಂದರು.
ಶಾಸಕ ಎಂ. ಕೃಷ್ಣಪ್ಪ ಮಾತನಾಡಿ ಕಾಂಗ್ರೆಸ್
ಸರ್ಕಾರ ಬಂದ ನಂತರ ಯಾವುದೇ ಅಭಿವೃದ್ಧಿ ಕಾರ್ಯಕ್ರಮಗಳು ನಡೆಯುತ್ತಿಲ್ಲ. ಸಂಸತ್ ಚುನಾವಣೆ ನಂತರ ಕಾಂಗ್ರೆಸ್ನಲ್ಲಿನ ಆಂತರಿಕ ಜಗಳ ಮುಗಿಲು ಮುಟ್ಟಿ ರಾಜ್ಯದಲ್ಲಿ ಉಪ ಚುನಾವಣೆ ನಡೆದರೂ ಆಶ್ಚರ್ಯವಿಲ್ಲ. ಕಾಂಗ್ರೆಸ್ ಪಕ್ಷದಲ್ಲಿ ಬಿ ಫಾರಂ ನೀಡಿದರೂ ವಾಪಸ್ ಕೊಡುವ ಸಂಪ್ರದಾಯ ಪ್ರಾರಂಭವಾಗಿದ್ದು ಅಭ್ಯರ್ಥಿಗಳಿಗಾಗಿ ಪರದಾಡಬೇಕಿದೆ. ರಾಜ್ಯದಲ್ಲಿ 20ಕ್ಕೂ ಹೆಚ್ಚು ಬಿಜೆಪಿ ಸಂಸತ್ ಸದಸ್ಯರು ಗೆಲ್ಲುವ ಸಂಭವವಿದ್ದು ಕಾರ್ಯಕರ್ತರು ಹಾಗೂ ಮುಖಂಡರು ಹೆಚ್ಚು ಪ್ರಾಮಾಣಿಕವಾಗಿ ಮತಯಾಚನೆ ಮಾಡಿದಲ್ಲಿ 25ಕ್ಕೂ ಹೆಚ್ಚು ಸ್ಥಾನ ಗಳಿಸಲು ಸಾಧ್ಯ ಎಂದರು.
ಪಕ್ಷಪಾತ ಸಲ್ಲ: ರಾಜ್ಯದಲ್ಲಿ ಅಭಿವೃದ್ಧಿ ಕ್ಷೇತ್ರ ಎಂದರೇ ಬೆಂಗಳೂರು ದಕ್ಷಿಣ ಎಂದ ಅವರು ಕಾಂಗ್ರೆಸ್ ಮುಖಂಡರು ಭೂಮಿ ಪೂಜೆಗೂ ಕ್ಷೇತ್ರದ ನಾಯಕರನ್ನು ಕಡೆಗಣಿಸಿ ಪಕ್ಷಪಾತ ಮಾಡುವ ಧೋರಣೆ
ನಿಲ್ಲಿಸಬೇಕೆಂದರು. ಬೆಂಗಳೂರು ಗ್ರಾಮಾಂತರ ಲೋಕಸಭಾ ಬಿಜೆಪಿ ಅಭ್ಯರ್ಥಿ ಮುನಿರಾಜು ಗೌಡ ಮತ ಯಾಚನೆ ಮಾಡಿ ಬಿಜೆಪಿಯ ಯುವ ಮೋರ್ಚಾ ರಾಜ್ಯಾಧ್ಯಕ್ಷರಾಗಿ ಸಂಘ ಪರಿವಾರದ ಹಿನ್ನೆಲೆಯಲ್ಲಿ ಬಂದ ಸಾಮಾನ್ಯ ಕಾರ್ಯಕರ್ತನಾದ ನನ್ನನ್ನು ಗುರುತಿಸಿ ಬಿ ಫಾರಂ ನೀಡಿದ ವರಿಷ್ಟರಿಗೆ ಕೃತಜ್ಞತೆಗಳು. ಮಾಜಿ ಉಪಮುಖ್ಯ ಮಂತ್ರಿ ಅಶೋಕ್, ಮಾಜಿ ಸಚಿವ ಎ. ನಾರಾಯಣಸ್ವಾಮಿ ಹಾಗೂ ಶಾಸಕ ಎಂ. ಕೃಷ್ಣಪ್ಪ ಅವರ ಮಾರ್ಗದರ್ಶನದಲ್ಲಿ ಕ್ಷೇತ್ರ ಸಂಚಾರ ಮಾಡಿ ಸಮಸ್ಯೆಗಳನ್ನು ಅರಿತಿರುವೆ. ಕ್ಷೇತ್ರದ ಅಭಿವೃದ್ಧಿಗಾಗಿ ಯುವ ಹಾಗೂ ಅತ್ಯಂತ ಕಿರಿಯ ಅಭ್ಯರ್ಥಿಯಾದ ನನಗೆ ಮತ ನೀಡಬೇಕೆಂದು ಕೋರಿದರು.
ವೇದಿಕೆಯಲ್ಲಿ ಜಿಪಂ ಸದಸ್ಯರಾದ ಗಿರಿಜಾ ಪ್ರಶಾಂತ್, ಮಾಜಿ ತಾಪಂ ಹಾಗೂ ನಗರ ಜಿಲ್ಲಾ ಮಹಿಳಾ ಮೋರ್ಚಾದ ಭಾರತಿ ವೆಂಕಟೇಶಗೌಡ, ತಾಪಂ ಸದಸ್ಯೆ ಜೆಸಿಕೆ ಶೋಭಾ ವೇದಿಕೆಯಲ್ಲಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

