ಬೆಂಗಳೂರು ಗ್ರಾಮಾಂತರ

ಅಸಮರ್ಪಕ ವಿದ್ಯುತ್ ಪೂರೈಕೆ: ಪುರಸಭಾ ಅಧ್ಯಕ್ಷೆ, ಸದಸ್ಯರ ಆಕ್ರೋಶ

Published On :

ದೇವನಹಳ್ಳಿ: ನಮ್ಮನ್ನು ಪುರಸಭೆಗೆ ಆರಿಸಿ ಕಳುಹಿಸಿದ ನಾಗರಿಕರಿಗೆ ಮುಖ ತೋರಿಸಲು ಸಾಧ್ಯವಾಗುತ್ತಿಲ್ಲ.  ಕಡೇಪಕ್ಷ  ಲಭ್ಯವಿರುವ ಕುಡಿಯುವ ನೀರನ್ನು ಸರಬರಾಜು ಮಾಡಲು ಸಾಧ್ಯವಾಗುತ್ತಿಲ್ಲ.  ಅಸಮರ್ಪಕ ವಿದ್ಯುತ್ ಸರಬರಾಜಿನಿಂದ ಜನ ನಮಗೆ ಹಿಡಿ ಶಾಪ ಹಾಕುತ್ತಿದ್ದಾರೆ ಎಂದು ಇಲ್ಲಿನ ಪುರಸಭಾಧ್ಯಕ್ಷರು, ಉಪಾಧ್ಯಕ್ಷರು ಹಾಗೂ ಎಲ್ಲ ಸದಸ್ಯರು ಬೆಸ್ಕಾಂ ಕಚೇರಿ ಅಧಿಕಾರಿಗಳಿಗೆ ಶುಕ್ರವಾರ ಮನವಿ ಮಾಡಿದರು.  ಇದೇ ಸಂದರ್ಭದಲ್ಲಿ ಜಿಲ್ಲಾ ರೈತ ಸಂಘದ ಅಧ್ಯಕ್ಷ ವೆಂಕಟನಾರಾಯಣಪ್ಪ ಮಾತನಾಡಿ ಹಿರಿಯ ಬೆಸ್ಕಾಂ ಅಧಿಕಾರಿಗಳ ಬಳಿ ನಾವು ಹೋಗುವುದಿಲ್ಲ. ನೀವೇ ನಮ್ಮ ಸಮಸ್ಯೆಯನ್ನು ಬಗೆಹರಿಸಬೇಕು. ಆಗದಿದ್ದರೆ ಆಗುವುದಿಲ್ಲವೆಂದು  ಬರೆದುಕೊಡಿ ಎಂದು ಪಟ್ಟು ಹಿಡಿದರು.
 ಈ ಸಂಧರ್ಭದಲ್ಲಿ ಬೆಸ್ಕಾಂ ಎಇಇ ಡಾಕ್ಯಾ ನಾಯಕ್ ಮಾತನಾಡಿ ದೇವನಹಳ್ಳಿ ತಾಲೂಕಿಗೆ ಸಂಪೂರ್ಣವಾಗಿ ವಿದ್ಯುತ್ ಸರಬರಾಜು ಮಾಡಬೇಕಾದರೆ 30 ಮೆಗಾ ವ್ಯಾಟ್ ಬೇಕಾಗಿದೆ. ಆದರೆ ಸದ್ಯದ ಪರಿಸ್ಥಿತಿಯಲ್ಲಿ 12 ವಿದ್ಯುತ್ ವಿತಕರಣಾ ಕೇಂದ್ರಗಳಿಗೂ ಸೇರಿ ಕೇವಲ 30 ಮೆಗಾ ವ್ಯಾಟ್ ವಿದ್ಯುತ್ ಬರುತ್ತಿದೆ. ನಾವೇನು ಮಾಡಲು ಸಾಧ್ಯ ಎಂದು ಕೈಚಲ್ಲಿ ಕುಳಿತಿದ್ದಾರೆ.   ಬೆಸ್ಕಾಂ ಹಿರಿಯ ಅಧಿಕಾರಿಗಳಿಗೆ ನಿಮ್ಮ ಬೇಡಿಕೆ ಬಗ್ಗೆ ತಿಳಿಸುವುದಾಗಿ ಹೇಳಿದರಲ್ಲದೆ ಕೆಲವೇ ದಿನಗಳಲ್ಲಿ ಸಮರ್ಪಕ ವಿದ್ಯುತ್ ಸರಬರಾಜಿಗೆ ಕ್ರಮ ಕೈಗೊಳ್ಳಲಿದ್ದೇವೆ ಎಂದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.