'ಖಾಸಗೀಕರಣ: ವಿದ್ಯುತ್ ಕ್ಷೇತ್ರದಲ್ಲಿ ಭ್ರಷ್ಟಾಚಾರ'
ಬೆಂಗಳೂರು: ವಿದ್ಯುತ್ ಕ್ಷೇತ್ರವನ್ನು ಖಾಸಗೀಕರಣಗೊಳಿದರ ಪರಿಣಾಮ ಈ ಕ್ಷೇತ್ರದಲ್ಲಿ ಭ್ರಷ್ಟಾಚಾರ ತಾಂಡವಾಡುತ್ತಿದೆ ಎಂದು ಅಖಿಲ ಭಾರತ ವಿದ್ಯುತ್ ಎಂಜಿನಿಯರ್ಗಳ ಒಕ್ಕೂಟದ ಅಧ್ಯಕ್ಷ ಪದ್ಮಜೀತ್ ಸಿಂಗ್ ಅಭಿಪ್ರಾಯಪಟ್ಟರು.ನಗರದಲ್ಲಿ ನಡೆದ ಒಕ್ಕೂಟದ ಸಭೆಯಲ್ಲಿ ಮಾತನಾಡಿದ ಅವರು, ದೇಶದ ವಿದ್ಯುತ್ ಕ್ಷೇತ್ರದಲ್ಲಿ ಹಿಂದೆಂದಿಗೂ ನಡೆಯದಷ್ಟು ಭ್ರಷ್ಟಾಚಾರ ನಡೆಯುತ್ತಿದೆ. ಈ ಕ್ಷೇತ್ರವನ್ನು ಖಾಸಗಿಗೊಳಿಸಿರುವುದರಿಂದ ಭ್ರಷ್ಟಾಚಾರ ಹೆಚ್ಚಾಗಿದೆ ಎಂದು ತಿಳಿಸಿದರು. ಕಡಿಮೆ ದರದಲ್ಲಿ ವಿದ್ಯುತ್ ಸರಬರಾಜು ಮಾಡಲು ತಂದ ಸುಧಾರಣೆಗಳು ಸಮರ್ಪಕವಾಗಿ ಕಾರ್ಯಗತವಾಗಿಲ್ಲ. 2003 ವಿದ್ಯುತ್ ಕಾಯ್ದೆಯ ಮೂಲ ಉದ್ದೇಶ ಸರಿಯಲ್ಲ. ಮುಂಬರುವ ದಿನಗಳಲ್ಲಿ ಸುಧಾರಣೆ ತರುವ ದೃಷ್ಟಿಯಿಂದ ಪ್ರಧಾನಿ ನೇತೃತ್ವದಲ್ಲಿ ಉನ್ನತ ಮಟ್ಟದ ಸಮಿತಿಯನ್ನು ರಚಿಸಬೇಕೆಂದು ಆಗ್ರಹಿಸಿದರು. ರಾಷ್ಟ್ರೀಯ ಕಾರ್ಯಕಾರಣಿ ಸಭೆಯಲ್ಲಿ 18 ರಾಜ್ಯಗಳ ಪ್ರತಿನಿಧಿಗಳು ಭಾಗವಹಿಸುತ್ತಿದ್ದು, ವಿದ್ಯುತ್ ಕ್ಷೇತ್ರದ ಸುಧಾರಣೆಯ ಬಗ್ಗೆ ಭರವಸೆ ನೀಡುವ ಪಕ್ಷಗಳಿಗೆ ಬೆಂಬಲ ನೀಡುವ ಒಕ್ಕೂಟದ ನಿರ್ಣಯ ಪ್ರಕಟಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

