ಕ್ರೀಡೆ ದೈಹಿಕ, ಮಾನಸಿಕ ಸಮತೋಲನಕ್ಕೆ ಸಹಕಾರಿ
ಕನಕಪುರ: ಕನಕಪುರದ ಟೌನ್ ಟೆನ್ನಿಸ್ ಕ್ಲಬ್ ಸದಸ್ಯರಿಗಾಗಿ ಟೆನ್ನಿಸ್ ಬಾಲ್ ಕ್ರಿಕೆಟ್ ಇಲ್ಲಿನ ತಾಲೂಕು ಕ್ರೀಡಾಂಗಣದಲ್ಲಿ ನಡೆಯಿತು. ಪಟ್ಟಣ ಅಭಿವೃದ್ಧಿ ಪ್ರಾಧಿಕಾರದ ಎಂ.ಡಿ. ವಿಜಯದೇವ್ ಕ್ರೀಡಾಕೂಟದ ಉದ್ಘಾಟನೆಯನ್ನು ನೆರವೇರಿಸಿದರು. ಟಿಟಿಸಿ ಅಧ್ಯಕ್ಷ ಗೋಪಾಲಕೃಷ್ಣ ಅಧ್ಯಕ್ಷತೆ ವಹಿಸಿದ್ದರು.
ಕ್ರೀಡೆಗಳು ದೈಹಿಕ ಹಾಗೂ ಮಾನಸಿಕ ಸಮತೋಲನಕ್ಕೆ ಸಹಕಾರಿಯಾಗಿದ್ದು ಎಷ್ಟೇ ವೈಯಕ್ತಿಕ ಒತ್ತಡಗಳಿದ್ದರೂ ಜನರು ಕ್ರೀಡೆಗಳಲ್ಲಿ ಪಾಲ್ಗೊಳ್ಳಬೇಕು, ದೈಹಿಕ ವ್ಯಾಯಾಮವನ್ನು ನಿಯಮಿತವಾಗಿ ಮಾಡಬೇಕು. ಕ್ರೀಡೆಗಳು ಜನರಲ್ಲಿ ಪರಸ್ಪರ ಸಹಕಾರ ಮನೊಭಾವವನ್ನು ಬೆಳೆಸುತ್ತವೆ ಎಂದು ವಿಜಯದೇವ್ ನುಡಿದರು.
ಕ್ರೀಡಾಕೂಟದಲ್ಲಿ ಕೆ.ಎನ್. ದಿಲೀಪ್, ಮೋಹನದಾಸ್, ಉಪಾಧ್ಯಕ್ಷ ವತ್ಸ ಚಂದ್ರು, ಖಜಾಂಚಿ ಚಂದ್ರಶೇಖರ್, ಸೋಮಶೇಖರ್, ರವಿಪಾಲ್, ವಿಕ್ರಂದೇವ್ ಪಾಲ್ಗೊಂಡಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

