ಗ್ರಾಮ ಸ್ವರಾಜ್ಯದ ಕನಸು ನನಸು ಮಾಡಲು ಶ್ರಮಿಸಿ
ಚನ್ನಪಟ್ಟಣ: ಹಳ್ಳಿಗಳನ್ನು ಪ್ರೀತಿಸುವ, ಹಳ್ಳಿಗಳಲ್ಲಿ ವಾಸಿಸುವ ದೃಢ ಸಂಕಲ್ಪದೊಂದಿಗೆ ಯುವ ಸಮುದಾಯ ಮಹತ್ಮಾ ಗಾಂಧೀಜಿ ಕಂಡ ಗ್ರಾಮ ಸ್ವರಾಜ್ಯದ ಕನಸನ್ನು ನನಸು ಮಾಡಲು ಶ್ರಮಿಸಬೇಕೆಂದು ಕೃಷಿ ಚಿಂತಕ ಜಿ.ಶಿವಣ್ಣ ಕೊತ್ತೀಪುರ ಅಭಿಪ್ರಾಯಪಟ್ಟರು.
ತಾಲೂಕಿನ ಎಚ್.ಬ್ಯಾಡರಹಳ್ಳಿ ಗ್ರಾಮದಲ್ಲಿ ಹಮ್ಮಿಕೊಳ್ಳಲಾಗಿರುವ ಸರ್ಕಾರಿ ಪ್ರಥಮದರ್ಜೆ ಕಾಲೇಜಿನ ಎನ್ಎಸ್ಎಸ್ ವಿಶೇಷ ವಾರ್ಷಿಕ ಶಿಬಿರದಲ್ಲಿ ಉಪನ್ಯಾಸ ನೀಡಿದ ಅವರು ಇತ್ತೀಚಿನ ಪೀಳಿಗೆ ನಗರಗಳತ್ತ ಹೆಚ್ಚು ಆಕರ್ಷಿತರಾಗುತ್ತಿದ್ದು, ಇದು ಅಭಿವೃದ್ಧಿ ಮತ್ತು ಆರೋಗ್ಯದ ದೃಷ್ಟಿಯಿಂದ ಅಪಾಯಕಾರಿ ಬೆಳವಣಿಗೆ ಎಂದರು. ಇಂದಿಗೂ ದೇಶದ 70 ಭಾಗ ಜನತೆ ಹಳ್ಳಿಗಳಲ್ಲಿ ಸಮೃದ್ಧ ಜೀವನ ನಡೆಸುತ್ತಿದ್ದಾರೆ. ಪಟ್ಟಣದ ಆಸೆಗೆ ಹೋದ ಮಂದಿ ನಿರೀಕ್ಷಿತ ಗುರಿ ಮುಟ್ಟಲಾಗದೆ ಎಡಬಿಡಂಗಿಗಳಾಗುತ್ತಿದ್ದು ಯುವ ಸಮುದಾಯ ಮೊದಲು ಗ್ರಾಮೀಣ ಪರಂಪರೆ ಮತ್ತು ಸಂಸ್ಕೃತಿಯನ್ನು ಅರಿಯುವ ಮೂಲಕ ಪಟ್ಟಣ ಮತ್ತು ಗ್ರಾಮೀಣ ಜೀವನಗಳಲ್ಲಿ ಯಾವುದು ಉತ್ತಮ ಎಂಬುದನ್ನು ಅರಿತು ಕೊಳ್ಳಬೇಕಿದೆ ಎಂದರು. ಕಾರ್ಯಕ್ರಮದಲ್ಲಿ ಮಾತನಾಡಿದ ಸಾಹಿತಿ ರಾಜಶೇಖರ್, ಎನ್ಎಸ್ಎಸ್ ವಿದ್ಯಾರ್ಥಿಗಳಲ್ಲಿ ಗ್ರಾಮೀಣ ಸಮಸ್ಯೆಗಳ ಬಗ್ಗೆ ಅರಿವು ಮೂಡಿಸುವ ಜತೆಗೆ ಅಲ್ಲಿನ ಸಮಾಜಸೇವೆಯ ಪರಿಕಲ್ಪನೆಯನ್ನು ಬಿತ್ತರಿಸುವಲ್ಲಿ ಪ್ರಮುಖ ಪಾತ್ರ ವಹಿಸುತ್ತದೆ. ಮಹತ್ಮಾ ಗಾಂಧಿಜೀಯ ಗ್ರಾಮಸ್ವರಾಜ್ಯ ಪರಿಕಲ್ಪನೆಯ ಮುಂದುವರೆದ ಭಾಗವೇ ರಾಷ್ಟ್ರೀಯ ಸೇವಾಯೋಜನೆಯಾಗಿದೆ ಎಂದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

