ಮ್ಯಾಕ್ ಏರೋ ನೌಕರರ ಪ್ರತಿಭಟನೆ
ಕ.ಪ್ರ. ವಾರ್ತೆ ದೊಡ್ಡಬಳ್ಳಾಪುರ ್ಣಮಾ.24
ಇಲ್ಲಿನ ಬಾಶೆಟ್ಟಿಹಳ್ಳಿ ಕೈಗಾರಿಕಾ ಪ್ರದೇಶದಲ್ಲಿರುವ ಫ್ರಾನ್ಸ್ ಮೂಲದ ಮ್ಯಾಕ್ ಏರೋ ಕಾಂಪೋನೆಂಟ್ ಕಾರ್ಖಾನೆ ಮುಂದೆ ಸೋಮವಾರ ಹಿಂದ್ ಮಜ್ದೂರ್ ಕಿಸಾನ್ ಪಂಚಾಯತ್ ಕಾರ್ಮಿಕ ಸಂಘದ ನೇತೃತ್ವದಲ್ಲಿ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಪ್ರತಿಭಟನೆ ನಡೆಯಿತು.
ನೂರಾರು ಕಾರ್ಮಿಕರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು. ಈ ಸಂದರ್ಭದಲ್ಲಿ ಮಾತನಾಡಿದ ಸಂಘದ ಅಧ್ಯಕ್ಷ ಕಾಳಪ್ಪ, ಫ್ರಾನ್ಸ್ ಮೂಲದ ಈ ಕಾರ್ಖಾನೆಯಲ್ಲಿ ವಾಯುಯಾನಕ್ಕೆ ಸಂಬಂಧಪಟ್ಟ ಮಹತ್ವದ ಬಿಡಿ ಭಾಗಗಳನ್ನು ತಯಾರಿಸಲಾಗುತ್ತದೆ. ಈ ಕಾರ್ಖಾನೆಯಲ್ಲಿ ಆಡಳಿತ ಮಂಡಲಿ ನೌಕರರಿಗೆ ನಿರಂತರ ಹಿಂಸೆ-ಕಿರುಕುಳ ನೀಡುತ್ತಿದ್ದಾರೆ. ಇಲ್ಲಿ ಕಾರ್ಮಿಕ ಕಾನೂನುಗಳನ್ನು ಸಹ ಗಾಳಿಗೆ ತೂರಲಾಗಿದೆ ಎಂದು ಆರೋಪಿಸಿದರು.
ಈ ನೆಲದ ಕಾನೂನುಗಳ ಬಗ್ಗೆ ಅಗೌರವದಿಂದ ನಡೆದುಕೊಳ್ಳುತ್ತಿರುವ ಕಂಪನಿ ಮಾಲೀಕನ ದುರ್ವರ್ತನೆ ಖಂಡನೀಯ. ಕೆಲವೇ ನೌಕರರಿಗೆ ಮಾತ್ರ ಶೇ.150ರಷ್ಟು ಸಂಬಳ ಹೆಚ್ಚಿಸಿ ಕಾರ್ಮಿಕ ಸಂಘದ ವಿರುದ್ಧ ಒಡಕು ತರುವ ಪ್ರಯತ್ನ ನಡೆಸುತ್ತಿದ್ದಾರೆ. ಕಾರ್ಮಿಕರ ಮಧ್ಯೆ ಒಡಕು ತರುವ ಪ್ರಯತ್ನವನ್ನು ಕಂಪನಿಯೇ ಮಾಡುತ್ತಿದೆ. ಆಡಳಿತ ವರ್ಗ ಅನೇಕ ಹುನ್ನಾರಗಳನ್ನು ಮಾಡುತ್ತಿದೆ. ಸಂಘದ ಪ್ರಧಾನ ಕಾರ್ಯದರ್ಶಿ ಸೇರಿದಂತೆ ಅಮಾನತು ಮಾಡಲಾಗಿರುವ ಎಲ್ಲ 6 ಮಂದಿ ನೌಕರರನ್ನು ಬೇಷರತ್ ಆಗಿ ಕೆಲಸಕ್ಕೆ ತೆಗೆದುಕೊಳ್ಳಬೇಕು. ಕಾರ್ಮಿಕ ಸಂಘ ಸಲ್ಲಿಸಿರುವ ಬೇಡಿಕೆಗಳ ಕುರಿತು ಮಾತುಕತೆ ನಡೆಸಬೇಕು. ಕಾರ್ಖಾನೆಯಲ್ಲಿರುವ ಕನ್ನಡ ವಿರೋಧಿ ಧೋರಣೆ ಬದಲಾಗಬೇಕು. ಜೊತೆಗೆ ಕಾರ್ಮಿಕರ ಬೇಡಿಕೆಗಳು ಈಡೇರುವವರೆಗೆ ನಿರಂತರ ಹೋರಾಟ ನಡೆಸಲಾಗುವುದು ಎಂದರು.
ನೂರಾರು ಕಾರ್ಮಿಕರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

